ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕೃಷಿ ಉತ್ಪನ್ನಗಳಿಗೆ ಗ್ಯಾರಂಟಿ ಹಾಗೂ ಕೃಷಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸರ್ಕಾರಗಳು ಕ್ರಮ ಕೈಗೊಳ್ಳಬೇಕು : ಬಿ. ವಿ. ಗೌಡ

ಬಳ್ಳಾರಿ/ ಕಂಪ್ಲಿ : ಪಟ್ಟಣದ ಟಿಎಪಿಸಿಎಂಎಸ್ ಸೊಸೈಟಿ ಮುಂಭಾಗದಲ್ಲಿರುವ ರೈತ ಹೋರಾಟಗಾರ ಪ್ರೊ. ಎಂ.ಡಿ. ನಂಜುಂಡಸ್ವಾಮಿ ವೃತ್ತದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು ಮಂಗಳವಾರ ರೈತ ದಿನವನ್ನು ಆಚರಿಸಿದರು.

ರೈತ ದಿನಾಚರಣೆಯ ಅಂಗವಾಗಿ ಪ್ರೊ.ಎಂ.ಡಿ. ನಂಜುಂಡಸ್ವಾಮಿ ಅವರ ವೃತ್ತ ನಾಮಫಲಕಕ್ಕೆ ಹೂವಿನ ಹಾರ ಹಾಕಿ ಪೂಜೆ ಸಲ್ಲಿಸಲಾಯಿತು. ಈ ವೇಳೆ ರೈತರ ಹಕ್ಕುಗಳಿಗಾಗಿ ಹೋರಾಟ ನಡೆಸಿದ ಪ್ರೊ .ನಂಜುಂಡಸ್ವಾಮಿ ಅವರತ್ಯಾಗ, ಹೋರಾಟದ ಬದುಕು ಮತ್ತು ರೈತಪರ ಚಿಂತನೆಗಳನ್ನು ಸ್ಮರಿಸಲಾಯಿತು.

ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಬಿ.ವಿ. ಗೌಡ ಮಾತನಾಡಿ, ದೇಶದ ಆರ್ಥಿಕತೆಯ ಮೂಲಸ್ತಂಭವೇ ರೈತ. ರೈತರಿಗೆ ನ್ಯಾಯಯುತ ಬೆಲೆ, ಕೃಷಿ ಉತ್ಪನ್ನಗಳಿಗೆ ಗ್ಯಾರಂಟಿ ಹಾಗೂ ಕೃಷಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸರ್ಕಾರಗಳು ಗಂಭೀರವಾಗಿ ಕ್ರಮ ಕೈಗೊಳ್ಳಬೇಕು. ಇಂದಿನ ದಿನದಲ್ಲಿ ಕೃಷಿ ಕ್ಷೇತ್ರವು ಅನೇಕ ಸವಾಲುಗಳನ್ನು ಎದುರಿಸುತ್ತಿದ್ದು, ರೈತರ ಹಿತ ಕಾಯುವ ನಿಟ್ಟಿನಲ್ಲಿ ಸಂಘಟನೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಪ್ರೊ. ನಂಜುಂಡಸ್ವಾಮಿ ಅವರ ಆದರ್ಶಗಳನ್ನು ಯುವ ರೈತರು ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ರೈತ ಸಂಘದ ತಾಲೂಕು ಅಧ್ಯಕ್ಷ ವಿ. ವೀರೇಶ್, ಕಾರ್ಯಾಧ್ಯಕ್ಷ ಕೊಟ್ಟೂರು ರಮೇಶ್, ನಗರ ಅಧ್ಯಕ್ಷ ಎನ್. ತಿಮ್ಮಪ್ಪನಾಯಕ ಸೇರಿದಂತೆ ಪದಾಧಿಕಾರಿಗಳಾದ ಚೆಲ್ಲಾ ವೆಂಕಟನಾಯ್ತು, ಡಿ. ಮುರಾರಿ, ಗಂಗಣ್ಣ, ಕೆ. ಕೃಷ್ಣ, ಕುರಿ ಮಂಜು, ವಿ.ಟಿ. ರಾಜು, ಯಮನೂರಪ್ಪ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!