ಹನೂರು ತಾಲೂಕಿನಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಲ್ಲಿ ಹೆಚ್ಚು ಮಾನವ ದಿನಗಳು ಸೃಜನೆಯಾಗಬೇಕು ವೈಯಕ್ತಿಕ ಕಾಮಗಾರಿಗೆ ಹೆಚ್ಚಿನ ಆದ್ಯತೆಯನ್ನು ನೀಡಬೇಕು ಎಂದು ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಪೂವಿತ ಎಸ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹನೂರು ತಾಲೂಕಿನ ವಿವಿಧ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಅವರು ಮಾತನಾಡಿ
ಮಹಾತ್ಮ ಗಾಂಧಿ ನರೇಗಾ ಯೋಜನೆಯನ್ನು ಹೆಚ್ಚು ಕೆಲಸಗಳನ್ನು ತೆಗೆದುಕೊಳ್ಳಬೇಕು ಗ್ರಾಮಗಳಲ್ಲಿ ನೀರಿನ ಅಭಾವವನ್ನು ನೀಗಿಸಬೇಕು. ಗ್ರಂಥಾಲಯಗಳಲ್ಲಿ ಮಕ್ಕಳನ್ನು ನೋಂದಣಿ ಮಾಡಿಸಬೇಕು ಎಂದು ಹೇಳಿದರು.
ವಿಧಾನ ಸಭಾ ಚುನಾವಣೆ ಹಿನ್ನಲೆಯಲ್ಲಿ ಶಾಲಾ ಕಟ್ಟಡವನ್ನು ಪರಿಶೀಲನೆ ನಡೆಸಿದರು ತದ ನಂತರ ದುರಸ್ಥಿ ಕಟ್ಟಡವನ್ನು ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನಡೆಸಿದರು.
ಮಹಾಲಯ ಅಮಾವಾಸ್ಯೆಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತಾಧಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಬೇಕು ಬೆಟ್ಟಕ್ಕೆ ಬರುವ ಪಾದಯಾತ್ರೆ ಭಕ್ತಾಧಿಗಳು ಊಟ ಮಾಡುವ ಸ್ಥಳದಲ್ಲಿ ಸ್ವಚ್ಛತೆಯಿಂದ ನೋಡಿಕೊಳ್ಳಬೇಕು ಎಂದರು.
ಈ ಸಂಧರ್ಭದಲ್ಲಿ ಉಪ ಕಾರ್ಯದರ್ಶಿ ಸರಸ್ವತಿ, ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಿವಾಸ, ಸಹಾಯಕ ರವೀಂದ್ರ, ಪಂಚಾಯತಿ ಅಭಿವೃದ್ಧಿ ಅಧಿಕಾರಿ ದೊರೆ ಮತ್ತು ಸಹಾಯಕ ಎಂಜಿನಿಯರ್ ಪ್ರೇಮ ಅವರು ಹಾಜರಿದ್ದರು.
-ಉಸ್ಮಾನ್ ಖಾನ್