ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಮಾನತೆ, ಸ್ವಾತಂತ್ರ‍್ಯ ಹಾಗೂ ಭ್ರಾತೃತ್ವದ ಹೋರಾಟಕ್ಕೆ ದಿಕ್ಕು ತೋರಿಸಿದ್ದರು : ಬಿ.ಲಕ್ಷ್ಮಣ

ಬಳ್ಳಾರಿ / ಕಂಪ್ಲಿ: 1927ರ ಡಿಸೆಂಬರ್ 25 ರಂದು ಡಾ. ಬಿ. ಆರ್. ಅಂಬೇಡ್ಕರ್ ಅವರು ಸಾರ್ವಜನಿಕವಾಗಿ ಮನುಸ್ಮೃತಿ ದಹಿಸಿದ ದಿನದ ಸ್ಮರಣಾರ್ಥ ದಲಿತ ಪ್ರಗತಿಪರ ಸಂಘಟನೆಯ ಪದಾಧಿಕಾರಿಗಳು ಪಟ್ಟಣದ ಅಂಬೇಡ್ಕರ್ ವೃತ್ತದದಲ್ಲಿ ಗುರುವಾರ ಮನುಸ್ಮೃತಿ ದಹನ ದಿನ ಆಚರಿಸಿದರು.
ನಂತರ ಮುಖಂಡ ಬಿ.ಲಕ್ಷ್ಮಣ ಮಾತನಾಡಿ, ಅಂಬೇಡ್ಕರ್‌ ಅವರು ಮನುಸ್ಮೃತಿ ದಹಿಸಿದ ಐತಿಹಾಸಿಕ ಘಟನೆಗೆ ಇಂದಿಗೆ 98 ವರ್ಷಗಳು ಪೂರ್ಣಗೊಂಡಿವೆ. ಶ್ರೇಣೀಕೃತ ಜಾತಿ ವ್ಯವಸ್ಥೆ, ಅಸ್ಪೃಶ್ಯತೆ, ಲಿಂಗಭೇದ, ಮಹಿಳೆಯರ ಮೇಲಿನ ದಬ್ಬಾಳಿಕೆ, ಸತಿ ಸಹಗಮನ, ಬಾಲ್ಯ ವಿವಾಹ, ದೇವದಾಸಿ ಪದ್ಧತಿ ಸೇರಿದಂತೆ ಅನಿಷ್ಠ ಸಾಮಾಜಿಕ ಪದ್ಧತಿಗಳ ಮೂಲವಾಗಿದ್ದ ಮನುಸ್ಮೃತಿಯನ್ನು ದಹಿಸಿ ಸಮಾನತೆ, ಸ್ವಾತಂತ್ರ‍್ಯ ಹಾಗೂ ಭಾತೃತ್ವದ ಹೋರಾಟಕ್ಕೆ ದಿಕ್ಕು ತೋರಿಸಿದ್ದರು ಎಂದರು.
ಭಾವೈಕ್ಯ ವೆಂಕಟೇಶ ಮಾತನಾಡಿ, ಮೇಲು-ಕೀಳು, ಸ್ಪೃಶ್ಯ-ಅಸ್ಪೃಶ್ಯ, ಜಾತಿ ಹಾಗೂ ಲಿಂಗ ತಾರತಮ್ಯ ಮಾಡುವ, ದಲಿತ, ಹಿಂದುಳಿದ ಹಾಗೂ ಶೂದ್ರ ಸಮುದಾಯಗಳ ವಿರೋಧಿಯಾದ ‘ಮನುಸ್ಮೃತಿ ಸಮಾನತೆಗೆ ವಿರುದ್ಧವಾಗಿದೆ. ಎಲ್ಲರೂ ಎಚ್ಚೆತ್ತುಕೊಂಡು ಸಂವಿಧಾನವನ್ನು ಉಳಿಸಿ ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯುವಂತಹ ಕೆಲಸ ಮಾಡೋಣ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮುಖಂಡರಾದ ಸಣಾಪುರ ಮರಿಸ್ವಾಮಿ, ವಸಂತರಾಜ್ ಕಹಳೆ, ಡಿ.ಬಸವರಾಜ, ಪುಟಾಣಿ ಅಂಜಿನಪ್ಪ, ರವಿ ಮಣ್ಣೂರು, ಅಕ್ಕಿ ಜಿಲಾನ್, ಮೆಟ್ರಿ ಬಸಪ್ಪ, ರಾಮಸಾಗರ ಬಸಪ್ಪ, ಸಣಾಪುರ ದುರುಗಪ್ಪ, ಯಲ್ಲಪ್ಪ, ಧನಕಾಯಿ ಬಸವರಾಜ, ಪುರುಷೋತ್ತಮ ಸೇರಿದಂತೆ ಅನೇಕರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!