ಬಾಗಲಕೋಟೆ/ ಜಮಖoಡಿ: ಜಮಖಂಡಿಯ ವೇಮ ವಿಕಾಸ ವೇದಿಕೆಯ ಆಶ್ರಯದಲ್ಲಿ ನಿರ್ಮಾಣಗೊಳ್ಳಲಿರುವ ಮಹಾಸಾಧ್ವಿ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ನಿಯೋಜಿತ ಕಟ್ಟಡದ ಅಡಿಗಲ್ಲು ಸಮಾರಂಭ ಡಿ.೨೯ ರಂದು ಬೆಳಿಗ್ಗೆ ೧೦ ಗಂಟೆಗೆ ನೆರವೇರಲಿದೆ ಎಂದು ವೇದಿಕೆಯ ಅಧ್ಯಕ್ಷ ಡಾ.ಆರ್.ಎನ್. ಸೋನವಾಲ್ಕರ ತಿಳಿಸಿದ್ದಾರೆ.
ನಗರದ ಕುಂಚನೂರ ರಸ್ತೆಯ ಪಕ್ಕದಲ್ಲಿರುವ ಕುಂಚನೂರ ಪುನರ್ವಸತಿ ಕೇಂದ್ರದಲ್ಲಿರುವ ಮಹಾಸಾಧ್ವಿ ಹೇಮರಡ್ಡಿ ಮಲ್ಲಮ್ಮ ಸಮುದಾಯ ಭವನದ ಆವರಣದಲ್ಲಿ ರೂ.೧.೫ ಕೋಟಿ ಅಂದಾಜು ವೆಚ್ಚದಲ್ಲಿ ದೊಡ್ಡಬಳ್ಳಾಪುರ ಕಲ್ಲಿನಿಂದ ದೇವಸ್ಥಾನದ ನಿರ್ಮಾಣ ಕೈಗೊಳ್ಳಲಾಗುವುದು.
ಹರಿಹರ ತಾಲ್ಲೂಕಿನ ಎರೆಹೊಸಹಳ್ಳಿಯ ರಡ್ಡಿ ಗುರುಪೀಠದ ವೇಮನಾನಂದ ಮಹಾಸ್ವಾಮಿಗಳು ಅಡಿಗಲ್ಲು ಸಮಾರಂಭದ ಸಾನ್ನಿಧ್ಯವನ್ನು ವಹಿಸುವರು. ಕಾನೂನು ಸಚಿವ ಎಚ್.ಕೆ. ಪಾಟೀಲ ಅಡಿಗಲ್ಲು ನೆರವೇರಿಸುವರು.
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಮಾರಂಭವನ್ನು ಉದ್ಘಾಟಿಸುವರು.
ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಸ್ವಾಮ್ಯದ ಕೈಗಾರಿಕೆ ಸಚಿವ ಶರಣಬಸಪ್ಪ ದರ್ಶನಾಪುರ, ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಮುಖ್ಯ ಅತಿಥಿಗಳಾಗಿ, ಸಂಸದ ಪಿ.ಸಿ. ಗದ್ದಿಗೌಡರ, ಬೀಳಗಿ ಶಾಸಕ ಜೆ.ಟಿ. ಪಾಟೀಲ, ಜಮಖಂಡಿ ಶಾಸಕ ನಾಡೋಜ ಜಗದೀಶ ಗುಡಗುಂಟಿ, ವಿಧಾನ ಪರಿಷತ್ ಶಾಸಕರಾದ ಪಿ.ಎಚ್. ಪೂಜಾರ, ಹನಮಂತ ನಿರಾಣಿ, ಸುನೀಲಗೌಡ ಪಾಟೀಲ, ಮಾಜಿ ಸಚಿವ ಎಸ್.ಆರ್. ಪಾಟೀಲ, ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಜಯಕುಮಾರ ಸರನಾಯಕ, ಮಾಜಿ ಶಾಸಕ ದೊಡ್ಡನಗೌಡ ಪಾಟೀಲ, ಮಾಜಿ ಸಂಸದ ಕುಪೇಂದ್ರ ರೆಡ್ಡಿ, ವಿಧಾನ ಪರಿಷತ್ ಮಾಜಿ ಶಾಸಕ ಜಿ.ಎಸ್. ನ್ಯಾಮಗೌಡ, ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ, ಮಾಜಿ ಶಾಸಕ ಆನಂದ ನ್ಯಾಮಗೌಡ, ಕರ್ನಾಟಕ ರೆಡ್ಡಿ ಜನಸಂಘದ ಅಧ್ಯಕ್ಷ ಜಯರಾಮ ರೆಡ್ಡಿ ಅತಿಥಿಗಳಾಗಿ ಭಾಗವಹಿಸುವರು.
ತಾಲ್ಲೂಕು ಹಾಗೂ ಅಕ್ಕಪಕ್ಕದ ತಾಲ್ಲೂಕುಗಳ ಹಳ್ಳಿಗಳಿಗೆ ತೆರಳಿ ಆಮಂತ್ರಣ ಪತ್ರ ನೀಡಲಾಗಿದೆ. ಸಮಾಜ ಬಾಂಧವರ ಪೂರ್ವಭಾವಿ ಸಭೆ ನಡೆಸಿ ಸಮಾರಂಭದ ರೂಪರೇಷೆಗಳನ್ನು ಸಿದ್ಧಪಡಿಸಿಕೊಳ್ಳಲಾಗಿದೆ ಎಂದು ಸಮಗ್ರ ಮಾಹಿತಿ ನೀಡಿದ್ದಾರೆ.
ಸಮಾಜ ಬಾಂಧವರ ಬಾವನೆಗಳನ್ನು ಬೆಸೆಯುವ ಸಂಕೇತವಾಗಿ ಮಹಾಸಾಧ್ವಿ ಹೇಮರಡ್ಡಿ ಮಲ್ಲಮ್ಮನವರ ದೇವಸ್ಥಾನ ನಿರ್ಮಿಸಲಾಗುತ್ತದೆ ಎಂದು ವೇಮ ವಿಕಾಸ ವೇದಿಕೆಯ ಮಾಜಿ ಅಧ್ಯಕ್ಷ ಡಾ.ಟಿ.ಪಿ. ಗಿರಡ್ಡಿ ತಿಳಿಸಿದ್ದಾರೆ.
ವೇದಿಕೆಯ ಪ್ರಧಾನ ಕಾರ್ಯದರ್ಶಿ ರಮೇಶ ಬಿ.ಪಾಟೀಲ, ಕಾರ್ಯದರ್ಶಿ ಆನಂದ ಪಾಟೀಲ, ಖಜಾಂಚಿ ಸುರೇಶ ಗಡದನ್ನವರ, ನಿರ್ದೇಕರಾದ ಹನಮಂತ ಮಾಸರಡ್ಡಿ, ಅಶೋಕ ಸಂಕರಟ್ಟಿ, ವೆಂಕಪ್ಪ ಲಕ್ಷ್ಮಣ ನ್ಯಾಮಗೌಡ, ಎನ್.ವಿ. ಸಂಕರಡ್ಡಿ ಇದ್ದರು.
- ಕರುನಾಡ ಕಂದ ಪತ್ರಿಕೆ.



















