ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ

ಸಿರುಗುಪ್ಪ: ರೋಗಿಗಳಿಗೆ ಉತ್ತಮವಾದ ಚಿಕಿತ್ಸೆಯನ್ನು ಕೊಡಲು ಉತ್ತಮವಾದ ಆಸ್ಪತ್ರೆಯ ಕಟ್ಟಡದ ಅವಶ್ಯಕತೆ ಇರುವ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗಿದ್ದು, ಸರ್ಕಾರ ನಮ್ಮ ಮನವಿಗೆ ಸ್ಪಂದಿಸಿ ಕಟ್ಟಡ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿದೆ ಎಂದು ಗ್ರಾ. ಪಂ. ಅಧ್ಯಕ್ಷೆ ಬಿ.ಎಂ. ಸುನಿತಾ ತಿಳಿಸಿದರು.

ತಾಲೂಕಿನ ಬಲಕುಂದಿ ಗ್ರಾಮದಲ್ಲಿ ಜಿ.ಪಂ. ಅನುದಾನ ರೂ.26 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಆರ್ಯುವೇದ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ನಮ್ಮ ಗ್ರಾಮವು ಐತಿಹಾಸಿಕ ಮತ್ತು ಧಾರ್ಮಿಕವಾಗಿ ಪ್ರಸಿದ್ದಿಯನ್ನು ಹೊಂದಿದ್ದು, ಸಾವಿರಾರು ಭಕ್ತರು ನಮ್ಮೂರಿಗೆ ಬರುತ್ತಾರೆ. ಅಲ್ಲದೆ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ಆರ್ಯುವೇದದ ವೈದ್ಯಕೀಯ ಚಿಕಿತ್ಸೆ ದೊರೆಯಬೇಕು. ಇದಕ್ಕಾಗಿ ಉತ್ತಮ ಕಟ್ಟಡ ನಿರ್ಮಾಣ ಮಾಡಲು ಸರ್ಕಾರ ಅನುದಾನ ಬಿಡುಗಡೆ ಮಾಡಿದ್ದು, ಉತ್ತಮ ಕಟ್ಟಡ ನಿರ್ಮಾಣ ಮಾಡುವಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಸೂಚಿಸಲಾಗುವುದೆಂದು ಹೇಳಿದರು.

ಪಿ.ಡಿ.ಒ. ವೀರಪ್ಪ, ಜೆ.ಇ. ಶ್ರೀನಿವಾಸ, ವೈದ್ಯೆ ಡಿ.ಸುಜಾತ, ಮುಖಂಡ ರುದ್ರಮುನಿಸ್ವಾಮಿ ಮತ್ತು ಗ್ರಾಮಸ್ಥರು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!