ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಂಭ್ರಮದ ಬಡೇಸಾಹೇಬ್ ಖಾದ್ರಿ ದರ್ಗಾ ಉರುಸ್

ಕಂಪ್ಲಿ: ಪಟ್ಟಣದ ಗಂಗಾವತಿ ರಸ್ತೆಯಲ್ಲಿರುವ ಪ್ರಸಿದ್ಧ ಹಜರತ್ ಸೈಯ್ಯದ್ ಷಾಹ್ ಮುಸ್ತಫಾ ಖಾದ್ರಿ ನೂರೇ ತಜಲ್ಲಿಯಾ ಉರಫ್ ಹಜರತ್ ಬಡೇಸಾಹೇಬ್ ಖಾದ್ರಿ ಮತ್ತು ಹಜರತ್ ಸೈಯದ್ ಷಾಹ್ ಅಬುಲ್ ಹಸನ್ ಖಾದ್ರಿ ಉರಫ್ ದಿವಾನೇ ಸಾಹೇಬ್ ಖಾದ್ರಿ ರಹಮತುಲ್ಲಾ ಅಲೈ ಅವರ 238ನೇ ಉರುಸ್ ಗುರುವಾರ ವಿಜೃಂಭಣೆಯಿಂದ ನಡೆಯಿತು.
ಮುಸ್ಲಿಂ ಧರ್ಮಗುರು ಸೈಯ್ಯದ್ ಷಾಹ್ ಅಬುಲ್ ಹಸನ್ ಖಾದ್ರಿ ಉರಫ್ ಅಜಂ ಪಾಷಾ ಖಾದ್ರಿ ಸಾಹೇಬ್ ಸಜ್ಜಾದೇ ನಶೀನ್ ( ಪೀಠಾಧಿಪತಿ ) ದಿವಾನಖಾನ್ ಯವರ ಸಾನ್ನಿಧ್ಯದಲ್ಲಿ ಬೆಳಗಿನ ಜಾವದಲ್ಲಿ ಗಂಧ ಉತ್ಸವ, ನಂತರ ಉರುಸ್ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಭಕ್ತಿಭಾವದಿಂದ ನೆರವೇರಿದವು.
ಬಡೇ ಸಾಹೇಬ್ ಖಾದ್ರಿ ದರ್ಗಾಕ್ಕೆ ಸಾಕಷ್ಟು ಭಕ್ತರು ಬಟ್ಟೆ, ಹೂವಿನ ಚಾದರ್ ಅರ್ಪಿಸುವ ಮೂಲಕ ತಮ್ಮ ಕಷ್ಟಗಳನ್ನು ದೂರ ಮಾಡುವಂತೆ ಪ್ರಾರ್ಥಿಸಿದರು. ನಂತರ ಅನ್ನಸಂತರ್ಪಣೆ ಆಯೋಜಿಸಲಾಗಿತ್ತು.
ಇಲ್ಲಿನ ಉರುಸ್ ಕಾರ್ಯಕ್ರಮದಲ್ಲಿ ಕಂಪ್ಲಿ, ಗಂಗಾವತಿ, ರಾಯಚೂರು, ಸಿಂಧನೂರು, ಬಳ್ಳಾರಿ, ಹೊಸಪೇಟೆ, ಕೊಪ್ಪಳ ಹಾಗೂ ನೆರೆ ರಾಜ್ಯದ ಆಂಧ್ರಪ್ರದೇಶ ಸೇರಿದಂತೆ ರಾಜ್ಯದ ವಿವಿಧ ಭಾಗದ ಭಕ್ತರು ಭಾಗವಹಿಸಿ, ದೇವರ ದರ್ಶನದೊಂದಿಗೆ ಭಕ್ತಿ ಸೇವೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ದರ್ಗಾದ ಸರ್ವ ಧರ್ಮದ ಶಿಷ್ಯಂದಿರು ಪಾಲ್ಗೊಂಡಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!