ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಭಕ್ತಿ ಪ್ರದಾನ ವಿಶ್ವರೂಪಿಣಿ ಶ್ರೀ ವಾಸವಿ ಚಲನಚಿತ್ರ ವೀಕ್ಷಿಸಲು ಆರ್ಯವೈಶ್ಯ ಬಾಂಧವರಿಂದ ಕರೆ

ಬಳ್ಳಾರಿ / ಕಂಪ್ಲಿ : ಹೌದು, ಪ್ರದಾನ ವಿಶ್ವರೂಪಿಣಿ ಶ್ರೀ ವಾಸವಿ ಚಲನಚಿತ್ರವು ಕರ್ನಾಟಕದಾದ್ಯಂತ ವಿವಿಧ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದು, ಕಂಪ್ಲಿ ತಾಲೂಕು ಭಾಗದ ವಾಸವಿ ಸಂಘಗಳು ಮತ್ತು ಆರ್ಯ ವೈಶ್ಯ ಸಮಾಜದ ವತಿಯಿಂದ ವಿಶೇಷ ಪ್ರದರ್ಶನಗಳನ್ನು ಆಯೋಜಿಸಲಾಗಿದೆ ಎಂದು ವೈಶ್ಯ ಸಮಾಜದವರು ತಿಳಿಸಿದರು.
ಅವರು ಪಟ್ಟಣದ ಶ್ರೀ ವಾಸವಿ ಕಲ್ಯಾಣ ಮಂಟಪದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಇದು ಆರ್ಯವೈಶ್ಯ ಕುಲದ ಮಾತೆಯಾದ ಶ್ರೀವಾಸವಿ ಕನ್ನಿಕಾ ಪರಮೇಶ್ವರಿಯ ಜೀವನ ಚರಿತ್ರೆಯನ್ನು ಆಧರಿಸಿದ ಭಕ್ತಿ ಪ್ರಧಾನ ಮತ್ತು ಪೌರಾಣಿಕ ಚಿತ್ರವಾಗಿದೆ, ಈ ಚಿತ್ರವನ್ನು ಪರಾತ್ಪಾರ್ ಫಿಲಂ ಲಾಂಛನದಲ್ಲಿ ನಿರ್ಮಿಸಲಾಗಿದ್ದು, ಬಿ.ಎಂ ಪ್ರಸಾದ್ ಅವರು ನಿರ್ದೇಶಿಸಿದ್ದಾರೆ ಎಂದು ತಿಳಿಸಿದರು.

ವಿವರಗಳು ಇಲ್ಲಿವೆ:
ಸಾಮೂಹಿಕ ವೀಕ್ಷಣೆ: ಕಂಪ್ಲಿ ಪಟ್ಟಣದಲ್ಲಿ ಆರ್ಯ ವೈಶ್ಯ ಸಮುದಾಯದ ಮುಖಂಡರು ಮತ್ತು ವಾಸವಿ ಸಂಘಗಳ ಪದಾಧಿಕಾರಿಗಳು ಒಗ್ಗೂಡಿ ಚಿತ್ರಮಂದಿರಗಳಲ್ಲಿ ವಿಶೇಷ ಶೋಗಳನ್ನು ಏರ್ಪಡಿಸುವ ಮೂಲಕ ಸಮುದಾಯದ ಬಾಂಧವ್ಯವನ್ನು ವೃದ್ಧಿಸುತ್ತಿದ್ದಾರೆ.

ಕಂಪ್ಲಿಯ ಪ್ರಮುಖ ಚಿತ್ರಮಂದಿರವಾದ ಚಂದ್ರಕಲಾ ಚಿತ್ರಮಂದಿರದಲ್ಲಿ 4 ನೇ ಜನವರಿ 26 ಭಾನುವಾರ ಬೆಳ್ಳಿಗೆ 11:ಕ್ಕೆ ಮತ್ತು 6 ನೇ ಜನವರಿ 26 ಮಂಗಳವಾರ ರಾತ್ರಿ 9 ಕ್ಕೆ ರಂದು ಆರ್ಯವೈಶ್ಯ ಸಮುದಾಯದ ಮುಖಂಡರು ಮತ್ತು ವಾಸವಿ ಸಂಘಗಳ ಸದಸ್ಯರು ಒಗ್ಗೂಡಿ ವಿಶೇಷ ಶೋಗಳನ್ನು ಏರ್ಪಡಿಸಿದ್ದಾರೆ.

ಸರ್ವರು ಕುಟುಂಬ ಸಮೇತರಾಗಿ ಬಂದು ಸಿನಿಮಾ ನೋಡಲು ಸಂಘದ ಪದಾಧಿಕಾರಿಗಳು ವಿನಂತಿಸಿದ್ದಾರೆ.

ಈ ಸಂದರ್ಭದಲ್ಲಿ ಆರ್ಯವೈಶ್ಯ ಸಮಾಜದ ಧರ್ಮಕರ್ತರು ವೈ. ಚಂದ್ರಮೋಹನ ಶೆಟ್ಟಿ, ಆರ್ಯವೈಶ್ಯ ಸಮಾಜದ ಅಧ್ಯಕ್ಷ ಡಿ.ವಿ. ಸುಬ್ಬರಾವ್, ವಾಸವಿ ವಿದ್ಯಾ ಸಂಸ್ಥೆ ಅಧ್ಯಕ್ಷ ಡಿ. ಶ್ರೀಧರ ಶೆಟ್ಟಿ, ವಾಸವಿ ಅಭಿವೃದ್ಧಿ ಸಂಘದ ಅಧ್ಯಕ್ಷ ಜಿ. ಬಿ ಕೋಟೇಶ್ವರರಾವ್, ವಾಸವಿ ಮಹಿಳಾ ಸಂಘದ ಅಧ್ಯಕ್ಷೆ ಟಿ. ರಾಮಾದೇವಿ, ವಾಸವಿ ಯುವಜನ ಸಂಘ ಅಧ್ಯಕ್ಷ ಡಿ ಮಂಜೇಶ ಹಾಗೂ ಸಮಾಜ ಬಾಂಧವರು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!