ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶಿಕ್ಷಕಿ ಸುನೀತಾಗೆ ರಾಜ್ಯಮಟ್ಟದ ಅಕ್ಷರದವ್ವ ಸಾವಿತ್ರಿಬಾಯಿ ಪುಲೆ ಪ್ರಶಸ್ತಿ

ಬಾಗಲಕೋಟೆ/ ಮುಧೋಳ : ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹುಂಡಕಾರ್ ತೋಟ ಮುಗಳಖೋಡ ಶಾಲೆಯ ಸಹ ಶಿಕ್ಷಕಿ ಶ್ರೀಮತಿ ಸುನಿತಾ ದಾಸರ್ ಅವರು ದಲಿತ ವಿದ್ಯಾರ್ಥಿ ಪರಿಷತ್ ವಿಜಯಪುರ ನೀಡುವ ಈ ವರ್ಷದ ರಾಜ್ಯಮಟ್ಟದ ಅಕ್ಷರದವ್ವ ಸಾವಿತ್ರಿಬಾಯಿ ಪುಲೆ ಪ್ರಶಸ್ತಿಗೆ ಭಾಜನರಾಗಿದ್ದಾರೆ. ವಿಜಯಪುರದ ಕಂದಗಲ್ಲ ಹಣಮಂತ್ರಾಯ ರಂಗಮಂದಿರದಲ್ಲಿ ಜನವರಿ 03 ಶನಿವಾರದಂದು ಆಯೋಜಿಸಲಾದ ದೇಶದ ಮೊಟ್ಟ ಮೊದಲ ಮಹಿಳಾ ಶಿಕ್ಷಕಿ ಮಾತೆ ಸಾವಿತ್ರಿಬಾಯಿ ಪುಲೆ ಜಯಂತಿ ಕಾರ್ಯಕ್ರಮದಲ್ಲಿ ಸುನೀತಾ ದಾಸರ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಯಿತು. ಈ ಸಂಧರ್ಭದಲ್ಲಿ ಪರಿಷತ್ತಿನ ಸಂಸ್ಥಾಪಕ ರಾಜ್ಯಾಧ್ಯಕ್ಷ ಶ್ರೀನಾಥ ಪೂಜಾರಿ, ರಾಜ್ಯ ಸಂಚಾಲಕ ಬಾಲಾಜಿ ಕಾಂಬಳೆ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ್ ಪೋತದಾರ, ಮಹಾನಗರ ಪಾಲಿಕೆ ಸದಸ್ಯ ಆರತಿ ಶಹಾಪುರ, ಅಕ್ಕಮಹಾದೇವಿ ಮಹಿಳಾ ವಿವಿ ಕುಲಪತಿ ವಿಜಯಾ ಕೊರಿಶೆಟ್ಟಿ, ಪೊಲೀಸ್ ವರಿಷ್ಟಾಧಿಕಾರಿ ಲಕ್ಷ್ಮಣ ನಿಂಬರಗಿ, ಶರಣಯ್ಯ ಬಂಡಾರಿಮಠ, ಇನ್ನಿತರರು ವೇದಿಕೆಯ ಮೇಲೆ ಉಪಸ್ಥಿತರಿದ್ದರು. ಮುಧೋಳ ನಗರದ ಶ್ರೀ ಬಿಂಗೇರಿ ಗುರುಗಳು ಶ್ರೀ ಬಸವರಾಜ ಬಳ್ಳಾರಿ ಸಿ ಆರ್ ಪಿ ರವರು ಡಾ|| ನಂದು ಹುಂಡೇಕಾರ ಶ್ರೀ ಚಿರಂಜೀವಿ ರೋಡಕರ್ ಶ್ರೀ ರವಿ ಟಂಕಸಾಲಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಪುರಸ್ಕೃತರಿಗೆ ಸನ್ಮಾನಿಸಿ ಅಭಿನಂದಿಸಿದರು.

  • ಕರುನಾಡ ಕಂದ ಪತ್ರಿಕೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!