ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸ್ವಯಂ ರಕ್ಷಣಾ ತರಬೇತಿಯ ಜಾಗೃತಿ ಮೂಡಿಸಿದ ಅರವಿಂದ್ ದೊಡ್ಡಯ್ಯ ದಡದಪುರ

ನೇತಾಜಿ ಸುಭಾಷ್ ಚಂದ್ರ ಬೋಸ್ ವಿದ್ಯಾಲಯದ ಮಕ್ಕಳಿಗೆ ಶಿಕ್ಷಣ ಇಲಾಖೆಯ ವತಿಯಿಂದ ಹಮ್ಮಿಕೊಂಡ ಕರಾಟೆ ಸ್ವಯಂ ರಕ್ಷಣಾ ತರಬೇತಿಯ ಜಾಗೃತಿಯನ್ನು ಮೂಡಿಸಿದ ಅರವಿಂದ್ ದೊಡ್ಡಯ್ಯ ದಡದಪುರ.

ಬೆಂಗಳೂರು ನಗರದ ಸುಭಾಷ್ ಚಂದ್ರಬೋಸ್ ವಿದ್ಯಾಲಯದ ಅರೆಹಳ್ಳಿ ಬೆಂಗಳೂರು ದಕ್ಷಿಣ ವಲಯ 1ರಲ್ಲಿ ಕರಾಟೆ ತರಬೇತಿ ಜಾಗೃತಿ ಸಮಾವೇಶ ನಡೆಯಿತು. ಈ ತರಬೇತಿಯಲ್ಲಿ ಅರವಿಂದ ಯುನಿವರ್ಸ್ ಕರಾಟೆ ಸಂಸ್ಥೆಯ ನಿರ್ಮಾಪಕರಾದ ಸೆನ್ನಸೈ ಅರವಿಂದ್ ದೊಡ್ಡಯ್ಯ ದಡದಪುರ ಅವರು ಇಲ್ಲಿನ ವಿದ್ಯಾರ್ಥಿಗಳಿಗೆ ಉಚಿತವಾಗಿ ಕರಾಟೆ ತರಬೇತಿಯನ್ನು ನೀಡಿದರು. ಅದೇ ರೀತಿಯಾಗಿ ಇದೇ ಸಂದರ್ಭದಲ್ಲಿ ಪ್ರತಿಯೊಂದು ಸರ್ಕಾರಿ ಶಾಲೆಗಳಲ್ಲಿ ಸರ್ಕಾರವು ಕರಾಟೆ ಶಿಕ್ಷಕರನ್ನು ಕಡ್ಡಾಯವಾಗಿ ನೇಮಕ ಮಾಡಿಕೊಳ್ಳಬೇಕು ಎಂದು ಕರಾಟೆ ಶಿಕ್ಷಕರಾದ ಅರವಿಂದ್ ದೊಡ್ಡಯ್ಯ ಅವರು ತಮ್ಮ ಅಭಿಪ್ರಾಯವನ್ನು ಇದೇ ಸಂದರ್ಭದಲ್ಲಿ ವ್ಯಕ್ತಪಡಿಸಿದರು. ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಕಾಲೇಜುಗಳಲ್ಲಿ ಕರಾಟೆ ಶಿಕ್ಷಕರ ಅವಶ್ಯಕತೆ ಇಂದಿನ ದಿನಮಾನಗಳಲ್ಲಿ ತುಂಬಾ ಅವಶ್ಯಕವಾಗಿದೆ ಹಾಗೂ ಕರಾಟೆ ಶಿಕ್ಷಕರನ್ನು ಕಡ್ಡಾಯವಾಗಿ ಸರ್ಕಾರ ಕರಾಟೆ ಶಿಕ್ಷಕರನ್ನು ಖಾಯಂ ನೇಮಕಾತಿ ಮಾಡಿಕೊಳ್ಳಬೇಕು ಹಾಗೂ ಕರಾಟೆ ಶಿಕ್ಷಣವನ್ನು ಕಡ್ಡಾಯ ಶಿಕ್ಷಣವನ್ನಾಗಿ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಘೋಷಿಸಬೇಕು ಹಾಗೂ ಮಹಿಳಾ ಸಬಲೀಕರಣದ ದೃಷ್ಟಿಯಿಂದ ಕರಾಟೆ ಶಿಕ್ಷಣವನ್ನು ಹೆಣ್ಣುಮಕ್ಕಳಿಗೆ ಮೊದಲು ಆದ್ಯತೆ ನೀಡಬೇಕು ಎಂದು ಕರಾಟೆ ಶಿಕ್ಷಕರಾದ ಸೆನ್ನಸೈ ಅರವಿಂದ್ ದೊಡ್ಡಯ್ಯ ದಡದಪುರ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!