ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬಸವಕಲ್ಯಾಣದಲ್ಲಿ ಬೃಹತ್ ಶೋಭಾಯಾತ್ರೆಯೊಂದಿಗೆ ಹಿಂದೂ ಸಮ್ಮೇಳನ ಜರುಗಲಿದೆ ಡಾ. ಬಸವರಾಜ ಸ್ವಾಮಿ ಪತ್ರಿಕಾಗೋಷ್ಠಿ.

ಬೀದರ ಜಿಲ್ಲೆಯ ಬಸವಕಲ್ಯಾಣ ನಗರದಲ್ಲಿ ದಿನಾಂಕ 11-01-2026 ರವಿವಾರದಂದು ಹಿಂದೂ ಸಮ್ಮೇಳನ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.
” ಕೋಟಿ ಸವಾಲಿಗೆ ಒಂದೇ ಉತ್ತರ : ಹಿಂದೂ ಭಾವದ ಜಾಗರಣ ಎಂಬ ಸಂದೇಶವನ್ನು ಇಟ್ಟುಕೊಂಡು ಈ ಕಾರ್ಯಕ್ರಮ ಮಾಡಲಾಗುತ್ತಿದೆ. ಈ ಹಿಂದೂ ಸಮ್ಮೇಳನ ಶೋಭಾಯಾತ್ರೆ ಮದ್ಯಾಹ್ನ 1:00 ಗಂಟೆಗೆ ಬಸವಕಲ್ಯಾಣದ ಕೋಟೆಯಿಂದ ಪ್ರಾರಂಭವಾಗಿ ಮಹಾತ್ಮಾಗಾಂಧಿ ಚೌಕ್‌, ಶ್ರೀ ಬಸವೇಶ್ವರ ಚೌಕ, ಮಾರ್ಗವಾಗಿ ಅಕ್ಕಮಹಾದೇವಿ ಕಾಲೇಜು ಆವರಣದಲ್ಲಿ ಸಾಯಂಕಾಲ 4:00 ಗಂಟೆಗೆ ಸಾರ್ವಜನಿಕ ಕಾರ್ಯಕ್ರಮ ಪ್ರಾರಂಭವಾಗಲಿದೆ.
ಈ ಕಾರ್ಯಕ್ರಮಕ್ಕೆ ದಿವ್ಯ ಸಾನಿಧ್ಯ ಪೂಜ್ಯ ಶ್ರೀ ರಾಜೇಶ್ವರ ಶಿವಾಚಾರ್ಯರು ಹಿರೇಮಠ ಮೇಹರ, ತಡೋಳಾ, ಪೂಜ್ಯ ಶ್ರೀ ಅಭಿನವ ಘನಲಿಂಗ ರುದ್ರಮುನಿ ಶಿವಾಚಾರ್ಯರು ತ್ರಿಪೂರಾಂತ, ಬಸವಕಲ್ಯಾಣ, ಹಾಗೂ ಶ್ರೀ ಕೃಷ್ಣ ಜೋಶಿ ಸಾಮಾಜಿಕ ಕಾರ್ಯಕರ್ತರು, ಕಲಬುರಗಿ ಇವರಿಂದ ದಿಕ್ಸೂಚಿ ಭಾಷಣ ಆಗಲಿದೆ ಎಂದು ಹಿಂದೂ ಸಮ್ಮೇಳನ ಆಯೋಜನಾ ಸಮಿತಿ ಅಧ್ಯಕ್ಷರಾದ ಶ್ರೀ ಡಾ. ಬಸವರಾಜ ಸ್ವಾಮಿಯವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ವರದಿ : ಶ್ರೀನಿವಾಸ ಬಿರಾದಾರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!