ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶಾಂತಾ ಗಡ್ಡದಗೆ ವಿಜಯವಾಡದಲ್ಲಿ ಉತ್ತಮ ಶಿಕ್ಷಕಿ ಪ್ರಶಸ್ತಿ ಪ್ರಧಾನ

ಕಂಪ್ಲಿ: ತಾಲ್ಲೂಕಿನ ಸಣಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಅರಳಿಹಳ್ಳಿ ತಾಂಡಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಶಾಂತಾ ಗಡ್ಡದ ಅವರ ಶೈಕ್ಷಣಿಕ ಅಭಿವೃದ್ಧಿ ಹಾಗೂ ಬೋಧನೆಯಲ್ಲಿ ಒಳಗೊಳ್ಳುವಿಕೆಯ ಕ್ರಿಯಾಶೀಲತೆಗಾಗಿ ದಕ್ಷಿಣ ಭಾರತದ ಉತ್ತಮ ಶಿಕ್ಷಕಿ ಪ್ರಶಸ್ತಿಯನ್ನು ಪಡೆದಿದ್ದಾರೆ.
ಆಂಧ್ರಪ್ರದೇಶದ ವಿಜಯವಾಡದ ಶ್ರೀಗುರು ಚೈತನ್ಯ ಉಪಧ್ಯಾಯ ಸಂಘವು ಹಮ್ಮಿಕೊಂಡಿದ್ದ ಸಾವಿತ್ರಿಬಾಯಿ ಪುಲೆ ಜನ್ಮದಿನೋತ್ಸವ ಸಮಾರಂಭದಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಸಂಘದ ಅಧ್ಯಕ್ಷ ಪಲೇಲ ರಾಮಾಂಜಿನೇಯುಲು, ಕಾರ್ಯದರ್ಶಿ ಮೊಹ್ಮದ್ ಹುಸೇನ್, ಮುಖಂಡರಾದ ಪ್ರೋಶೈಲಜಾ, ಬಿ.ರಾಮಚಂದ್ರ ಯಾದವ್, ಚಿಂತಲ ಅನಂತಲಕ್ಷ್ಮೀ, ಶ್ರೀನಿವಾಸರಾವ್, ಕೆ.ರಮೇಶ್ ಯಾದವ್, ವೀರಶಿವಬಾಬು, ಮುರಳಿಮೋಹನ್ ಸೇರಿದಮತೆ ಇತರರು ಇದ್ದರು.
ದಕ್ಷಿಣ ಭಾರತದ ಉತ್ತಮ ಶಿಕ್ಷಕಿ ಪ್ರಶಸ್ತಿ ಪುರಸ್ಕೃತರಾದ ಶಿಕ್ಷಕಿ ಶಾಂತಾ ಗಡ್ಡದ ಅವರನ್ನು ಶಾಲೆಯ ಶಿಕ್ಷಕರಾದ ಗುರುಸಿದ್ದಪ್ಪ, ರಾಜ್ಯ ಎನ್. ಪಿ. ಎಸ್. ನೌಕರರ ಸಂಘದ ಅಧ್ಯಕ್ಷ ನಾನಗನಗೌಡ ಎಂ. ಎ. ಸೇರಿದಂತೆ ತಾಲ್ಲೂಕಿನ ಶಿಕ್ಷಕರು ಅಭಿನಂದಿಸಿದ್ದಾರೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!