ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಕುಂಬಿ ಗ್ರಾಮದಲ್ಲಿರುವ ಸಕ್ಕರೆ ಕಾರ್ಖಾನೆಯ ಬೈಲರ್ ಸ್ಪೋಟಗೊಂಡು ಇಬ್ಬರು ಕಾರ್ಮಿಕರು ಸ್ಥಳದಲ್ಲಿ ಮೃತಪಟ್ಟಿದ್ದಾರೆ ಈ ದುರ್ಘಟನೆಯಲ್ಲಿ ಆರು ಜನ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಗಾಯಾಳುಗಳ ಪೈಕಿ ಕೆಲವರ ಪರಿಸ್ಥಿತಿ ಚಿಂತಾಜನಕವಾಗಿದೆ ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವರದಿ ಮಂಜು ಎಂ. ಚಿಕ್ಕಣ್ಣವರ



















