ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಈ ಬಾರಿಯ ಗಣರಾಜ್ಯೋತ್ಸವ ನಾಡಹಬ್ಬದಂತೆ ಆಚರಣೆಯಾಗಬೇಕು ಶಾಸಕ ಎಂ. ಆರ್. ಮಂಜುನಾಥ್ ಸೂಚನೆ

ಪಟ್ಟಣದ ಲೋಕೋಪಯೋಗಿ ಅತಿಥಿ ಗೃಹದಲ್ಲಿ ನಡೆದ ಗಣರಾಜ್ಯೋತ್ಸವ ಆಚರಣೆಯ ಪೂರ್ವಭಾವಿ ಸಭೆಯಲ್ಲಿ ಶಾಸಕ ಎಂ. ಆರ್. ಮಂಜುನಾಥ್ ರವರು ಮಾತನಾಡಿ ಗಣರಾಜ್ಯೋತ್ಸವವು ನಾಡಹಬ್ಬದಂತೆ ಆಚರಣೆಯಾಗಬೇಕು, ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಕಾರ್ಯಕ್ರಮದ ದಿನದಂದು ಯಾವುದೇ ಲೋಪದೋಷವಾಗಬಾರದು ಕಾರ್ಯಕ್ರಮಕ್ಕೆ ಆಗಮಿಸುವ ಮಕ್ಕಳಿಗೆ ಹಾಗೂ ಎಲ್ಲಾ ಸಾರ್ವಜನಿಕರಿಗೆ ನೀರು ಉಪಹಾರದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನೀಡುವ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಇದಲ್ಲದೆ ಈ ಬಾರಿ ಗಣರಾಜ್ಯೋತ್ಸವದಲ್ಲಿ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿಜೇತರಾದ ಶಾಲಾ ಮಕ್ಕಳಿಗೆ ನೆನಪಿನ ನೀಡಿ ಗೌರವಿಸಲು ತೀರ್ಮಾನಿಸಲಾಗಿದೆ ಎಂದರು. ಇದಲ್ಲದೆ ಎಲ್ಲಾ ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಈಗ ರಾಜ್ಯೋತ್ಸವದಲ್ಲಿ ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.

ತಾಲೂಕು ದಂಡಧಿಕಾರಿ ಚೈತ್ರ, ಇಓ ಉಮೇಶ್, ಪಟ್ಟಣ ಪಂಚಾಯತಿ ಮುಖ್ಯಧಿಕಾರಿ ಮಹೇಶ್, ಲೋಕೋಪಯೋಗಿ ಇಲಾಖೆಯ ಎಇಇ ಪುರುಷೋತ್ತಮ್, ಚೆಸ್ಕಾಂ ಎಇಇ ರಂಗಸ್ವಾಮಿ, ನೀರಾವರಿ ಇಲಾಖೆಯ ಎಇಇ ಕರುಣಾಮಯಿ, ಬಿ ಇ ಓ ಮಹೇಶ್,ತಾಲೂಕು ವೈದ್ಯಧಿಕಾರಿ ಪ್ರಕಾಶ್, ಮಹಿಳಾ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ತಾಲೂಕು ಅಧಿಕಾರಿ ಅಂಬಿಕಾ, ಉಪನೋಂದಣಾಧಿಕಾರಿ ಉಷಾ ಸೇರಿದಂತೆ ಇನ್ನಿತರ ಅಧಿಕಾರಿಗಳು ಇದ್ದರು.

ವರದಿ ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!