ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

WPL 2026: 4ನೇ ಆವೃತ್ತಿಯ ಡಬ್ಲ್ಯುಪಿಎಲ್​ನಲ್ಲಿ ಆರ್​ಸಿಬಿ ಯಾವ ದಿನ ಯಾವ ತಂಡವನ್ನು ಎದುರಿಸಲಿದೆ

ಮಹಿಳಾ ಪ್ರೀಮಿಯರ್ ಲೀಗ್​ನ ನಾಲ್ಕನೇ ಆವೃತ್ತಿ ಜನವರಿ 9 ರಿಂದ ಪ್ರಾರಂಭವಾಗಲಿದ್ದು, ಫೆಬ್ರವರಿ 05 ರಂದು ಕೊನೆಗೊಳ್ಳಲಿದೆ. ಈ ಆವೃತ್ತಿಯ ಪಂದ್ಯಗಳಿಗೆ ಕೇವಲ ಎರಡು ನಗರಗಳು ಆತಿಥ್ಯ ವಹಿಸುತ್ತಿದ್ದು, ನವಿ ಮುಂಬೈ ಹಾಗೂ ವಡೋದರಾದಲ್ಲಿ ಪಂದ್ಯಾವಳಿ ನಡೆಯಲಿದೆ.

ಆರ್ ಸಿಬಿ ಟೂರ್ನಿಯ ಮೊದಲ ಪಂದ್ಯದಲ್ಲೇ ಕಣಕ್ಕಿಳಿಯುತ್ತಿದ್ದು ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್‌ ತಂಡವನ್ನು ಎದುರಿಸುತ್ತಿದೆ. ಈ ಪಂದ್ಯ ಜನವರಿ 09 ರಂದು ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣ ನಡೆಯಲಿದೆ. ನಂತರ ಎರಡನೇ ಪಂದ್ಯ ಜನವರಿ 12 ರಂದು ಯುಪಿ ವಾರಿಯರ್ಸ್​ ವಿರುದ್ಧ ನಡೆಯಲಿದ್ದು, ಈ ಪಂದ್ಯಕ್ಕೂ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣ ಆತಿಥ್ಯ ನೀಡಲಿದೆ.

ಮೂರನೇ ಪಂದ್ಯವನ್ನು ಜನವರಿ 16 ರಂದು ಆಡಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಈ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ತಂಡವನ್ನು ಮುಂಬೈನಲ್ಲಿ ಎದುರಿಸಲಿದೆ. ಜನವರಿ 17 ರಂದು ನಡೆಯಲ್ಲಿರುವ ನಾಲ್ಕನೇ ಪಂದ್ಯದಲ್ಲಿ ದೆಹಲಿ ಕ್ಯಾಪಿಟಲ್ಸ್, ಆರ್​ಸಿಬಿಗೆ ಎದುರಾಳಿಯಾಗಲಿದೆ. ಈ ಪಂದ್ಯವೂ ಕೂಡ ಮುಂಬೈನಲ್ಲಿ ನಡೆಯಲ್ಲಿದೆ.

ಎರಡು ದಿನಗಳ ಬಳಿಕ ಅಂದರೆ ಜನವರಿ 19 ರಂದು ತನ್ನ 5ನೇ ಪಂದ್ಯವನ್ನಾಡಲಿರುವ ಆರ್​ಸಿಬಿ ಈ ಪಂದ್ಯದಲ್ಲಿ ಎರಡನೇ ಬಾರಿಗೆ ಗುಜರಾತ್ ಜೈಂಟ್ಸ್ ತಂಡವನ್ನು ಎದುರಿಸಲಿದೆ. ನಂತರ ಜನವರಿ 24 ರಂದು ಡೆಲ್ಲಿ ಕ್ಯಾಪಿಟಲ್ಸ್​ಗೆ ಆರ್​ಸಿಬಿ ಎರಡನೇ ಬಾರಿಗೆ ಮುಖಾಮುಖಿಯಾಗಲಿದೆ. ಈ ಎರಡು ಪಂದ್ಯಗಳು ವಡೋದರಲ್ಲಿ ನಡೆಯಲಿವೆ. ಉಳಿದೆರಡು ಪಂದ್ಯಗಳು ಸಹ ಇದೇ ವಡೋದರದಲ್ಲಿ ನಡೆಯಲಿದ್ದು, ಇದರಲ್ಲಿ ಆರ್​ಸಿಬಿ ಕ್ರಮವಾಗಿ ಜನವರಿ 26 ರಂದು ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ಜನವರಿ 29 ರಂದು ಯುಪಿ ವಾರಿಯರ್ಸ್​ ತಂಡವನ್ನು ಎದುರಿಸಲಿದೆ.

ಆರ್​ಸಿಬಿ ತಂಡ: ಸ್ಮೃತಿ ಮಂಧಾನ (ನಾಯಕಿ), ರಿಚಾ ಘೋಷ್, ಶ್ರೇಯಾಂಕಾ ಪಾಟೀಲ್, ಜಾರ್ಜಿಯಾ ವೋಲ್, ನಡಿನ್ ಡಿ ಕ್ಲರ್ಕ್, ರಾಧಾ ಯಾದವ್, ಲಾರೆನ್ ಬೆಲ್, ಲಿನ್ಸೆ ಸ್ಮಿತ್, ಪ್ರೇಮಾ ರಾವತ್, ಅರುಂಧತಿ ರೆಡ್ಡಿ, ಪೂಜಾ ವಸ್ತ್ರಾಕರ್, ಗ್ರೇಸ್ ಹ್ಯಾರಿಸ್, ಗೌತಮಿ ನಾಯಕ್, ಪ್ರತ್ಯೂಷಾ ಕುಮಾರ್, ಡಿ. ಹೇಮಲತಾ, ಸಯಾಲಿ ಸತ್ಘರೆ (ಎಲ್ಲಿಸ್ ಪೆರ್ರಿ ಬದಲಿಗೆ)

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!