ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಸ್ತೆ ಅಪಘಾತದಲ್ಲಿ ತಂದೆ ಮಗಳಿಬ್ಬರು ಸಾವು

ಗಂಗಾವತಿ : ತಿರುವಿನಲ್ಲಿ ಚಾಲಕನ ನಿಯಂತ್ರಣಕ್ಕೆ ಸಿಗದೇ ಸಾರಿಗೆ ಸಂಸ್ಥೆಯ ವಾಹಾನ ಡಿಕ್ಕಿ ಹೊಡೆದ ಪರಿಣಾಮ, ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ತಂದೆ ಮತ್ತು ಮಗಳಿಬ್ಬರೂ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಢಣಾಪುರ ಕ್ರಾಸ್ ಮಾರುತಿ ನಗರದಲ್ಲಿ ಗುರುವಾರ ಸಂಜೆ ನಡೆದಿದೆ.

ಮೃತರನ್ನು ಢಣಾಪುರ ಗ್ರಾಮದ ಗಾರೆ ಕೆಲಸಗಾರ ಖಾಜಾಸಾಬ್ ಮೋದಿನ್‌ ಸಾಬ (55) ಹಾಗೂ ಆತನ ಪುತ್ರಿ, ಸರ್ಕಾರಿ ಶಾಲೆಯ ಎಂಟನೇ ತರಗತಿಯ ವಿದ್ಯಾ ರ್ಥಿನಿ ಆಸೀನ್ ಖಾಜಾಸಾಬ್ (14) ಎಂದು ಗುರುತಿಸಲಾಗಿದೆ. ಮೂಲತಃ ಬಾಗಲಕೋಟೆ ಜಿಲ್ಲೆಯ ಖಾಜಾಸಾಬ್ ಮತ್ತು ಆತನ ಕುಟುಂಬ ಕೆಲಸ ಅರಸಿ ಢಣಾಪುರಕ್ಕೆ ಒಂದೂವರೆ ದಶಕದ ಹಿಂದೆ ಆಗಮಿಸಿತ್ತು. ಊರಲ್ಲಿ ಕೆಲಸ ಇಲ್ಲದ ಕಾರಣ, ಬೆಂಗಳೂರಿನಲ್ಲಿ ಗಾರೆ ಕೆಲಸ ಮಾಡುತ್ತಿದ್ದರು. ರಜೆ ಹಿನ್ನೆಲೆ ಊರಿಗೆ ಬಂದಿದ್ದ ಖಾಜಾಸಾಬ್ ತನ್ನ ಮಗಳಿಗೆ ಗಂಗಾವತಿಯಲ್ಲಿ ಬಟ್ಟೆ ಕೊಡಿಸಿಕೊಂಡು ಮರಳಿ ಗ್ರಾಮಕ್ಕೆ ಹೋಗುವ ಸಂದರ್ಭದಲ್ಲಿ ಕಾರಟಗಿಯಿಂದ ಬಂದ ಸಾರಿಗೆ ಇಲಾಖೆಯ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಎಸ್ ಪಿ ರಾಮ್ ಎಲ್ ಅರಸಿದ್ದಿ, ಹೆಚ್ಚುವರಿ ಎಸ್ ಪಿ ಹೇಮಂತ್ ಕುಮಾರ್ ಮತ್ತು ಗ್ರಾಮಿಣ ಸಿಪಿಐ ರಂಗಪ್ಪ ದೊಡ್ಡನಿ ಭೇಟಿ ನೀಡಿದರು. ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!