ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅನಧಿಕೃತ ಶೆಡ್ ತೆರವುಗೊಳಿಸಿ, ಇಲ್ಲವಾದಲ್ಲಿ ಕಾನೂನು ಹೋರಾಟ : ದೊಡ್ಡ ಬಸವರಾಜ ಬಡಗಿ

ಕಂಪ್ಲಿ: ಮುದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳಗೋಡ್‌ಹಾಳ್ ಗ್ರಾಮದಲ್ಲಿ ಅನಧಿಕೃತವಾಗಿ ನಿರ್ಮಿಸಿಕೊಂಡಿರುವ ಶೆಡ್ ತೆರವುಗೊಳಿಸುವಂತೆ ಡಾ.ಬಿ.ಆರ್.ಅಂಬೇಡ್ಕರ್ ದಲಿತ ಸಂಘದ ಕಾರ್ಯದರ್ಶಿ ಹಾಗೂ ಸಾಮಾಜಿಕ ಹೋರಾಟಗಾರ ದೊಡ್ಡ ಬಸವರಾಜ ಬಡಗಿ ಆಗ್ರಹಿಸಿದರು.

ಅವರು ಪಟ್ಟಣದಲ್ಲಿ ಪತ್ರಿಕಾ ಪ್ರಕಟಣೆ ನೀಡಿ ಮಾತನಾಡಿ, ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಡುವ ಬೆಳಗೋಡ್‌ಹಾಳ್ ಗ್ರಾಮದಲ್ಲಿ ಅಕ್ರಮವಾಗಿ ವ್ಯಕ್ತಿಯೊಬ್ಬರು ಶೆಡ್ ನಿರ್ಮಾಣ ಮಾಡಿದ್ದು, ಈ ಶೇಡ್‌ಗೆ ಸಂಬಂಧಪಟ್ಟಂತೆ ಗ್ರಾಮ ಪಂಚಾಯಿತಿ ಡಿಮ್ಯಾಂಡ್ ರಿಜಿಸ್ಟರ್‌ನಲ್ಲಿ ದಾಖಲಾತಿಗಳು ಇರುವುದಿಲ್ಲ. ಯಾವುದೇ ಪುರಾವೆ ದಾಖಲೆಗಳು ಇಲ್ಲ. ಇಲ್ಲಿನ ವ್ಯಕ್ತಿಯು ಸರ್ಕಾರಿ ಜಾಗದಲ್ಲಿ ಶೆಡ್ ನಿರ್ಮಿಸಿದ್ದು ಕಾರು ಬಿಡುವುದಕ್ಕೆ ಮಾಡಿಕೊಂಡಿದ್ದಾನೆ. ಈಗಾಗಲೇ ಹಲವಾರು ಬಾರಿ ಮೌಖಿಕವಾಗಿ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(ಪಿ.ಡಿ.ಓ)ಗಳಿಗೆ ತಿಳಿಸಿರುವೆ, ಆದರೆ, ಅಧಿಕಾರಿಗಳು ಮೌನವಹಿಸಿರುವುದು ವಿಪರ್ಯಾಸದ ಸಂಗತಿಯಾಗಿದೆ. ಶೆಡ್ ತೆರವಿಗೆ ಹಲವು ಬಾರಿ ದೂರು ನೀಡಲಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಶೆಡ್ ತೆರವು ಮಾಡಬೇಕು. ಇಲ್ಲವಾದಲ್ಲಿ ಶೆಡ್ ಪಕ್ಕದಲ್ಲಿರುವ ಖಾಲಿ ಜಾಗವನ್ನು ಸಹ ಜನರು ಅತಿಕ್ರಮಣ ಮಾಡಿಕೊಳ್ಳಲಿದ್ದಾರೆ. ಆದ್ದರಿಂದ ಕೂಡಲೇ ಅಧಿಕಾರಿಗಳು ಶೆಡ್ ತೆರವುಗೊಳಿಸಬೇಕು. ಇಲ್ಲದಿದ್ದರೆ ಮುಂದಿನ ದಿನದಲ್ಲಿ ಕಾನೂನು ಹೋರಾಟ ಮಾಡಲಾಗುವುದೆಂದು ಎಚ್ಚರಿಸಿದ್ದಾರೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!