ಹುಬ್ಬಳ್ಳಿ: ಅಹಿಂದ ಕರ್ನಾಟಕ ರಾಜ್ಯ ಒಕ್ಕೂಟ, ಬೆಂಗಳೂರು ಇವರ ವತಿಯಿಂದ ದಿನಾಂಕ 11-01-2026 ರಂದು ಹುಬ್ಬಳ್ಳಿಯ ಸರ್ಕ್ಯೂಟ್ ಹೌಸ್ನಲ್ಲಿ ಅಹಿಂದ ಜಾಗೃತ ಸಮಾವೇಶದ ಪೂರ್ವಭಾವಿ ಸಭೆ ನಡೆಯಿತು.
ಸಭೆಯಲ್ಲಿ ಅಹಿಂದ ನಾಯಕರಾಗಿರುವ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಸಾಹೇಬರನ್ನು ಯಾವುದೇ ಕಾರಣಕ್ಕೂ ಸಿಎಂ ಹುದ್ದೆಯಿಂದ ಕೆಳಗಿಳಿಸದೇ ಮುಂದುವರಿಸಬೇಕು ಎಂದು ಒಕ್ಕೂಟದ ಮುಖಂಡರು ಒತ್ತಾಯಿಸಿದರು. ಜೊತೆಗೆ ಮುಂಬರುವ ಝೆಡ್ ಪಿ ಚುನಾವಣೆಯಲ್ಲಿ ಅಹಿಂದ ಸಮುದಾಯದ ಅಭ್ಯರ್ಥಿಗಳಿಗೆ ಹೆಚ್ಚಿನ ಅವಕಾಶ ಮತ್ತು ಬೆಂಬಲ ನೀಡಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಅಹಿಂದದ ಆಶಯ, ಸಾಮಾಜಿಕ ನ್ಯಾಯ, ಸಮಾನತೆ ಹಾಗೂ ಹಿಂದುಳಿದ ವರ್ಗಗಳ ಹಿತಾಸಕ್ತಿಗಳ ರಕ್ಷಣೆಯ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. ಸರ್ಕಾರದ ಜನಪರ ಕಾರ್ಯಕ್ರಮಗಳು ಹಾಗೂ ಅಹಿಂದ ಪರ ನಿಲುವುಗಳನ್ನು ಮುಂದುವರೆಸಬೇಕೆಂದು ನಾಯಕರರು ಅಭಿಪ್ರಾಯಪಟ್ಟರು.
ಈ ಸಭೆಯಲ್ಲಿ ಅಹಿಂದ ಕರ್ನಾಟಕ ರಾಜ್ಯ ಒಕ್ಕೂಟದ ರಾಜ್ಯಾಧ್ಯಕ್ಷರಾದ ಶ್ರೀ ಪ್ರಭುಲಿಂಗ ದೊಡ್ಡಿಣಿ, ಗೌರವ ರಾಜ್ಯಾಧ್ಯಕ್ಷರಾದ ಶ್ರೀ ಸಿದ್ದಣ್ಣ ತೇಜಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀ ಬೀರಲಿಂಗೇಶ್ವರ ಪೂಜಾರಿಯವರು ಸೇರಿದಂತೆ ಅನೇಕ ಅಹಿಂದ ಮುಖಂಡರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ವರದಿ ಬಸವರಾಜ ಎಸ್.ಎನ್




















