ಕಂಪ್ಲಿ : ತಾಲೂಕಿನ ಎಮ್ಮಿಗನೂರಿನ ಸರ್ಕಾರಿ ಶತಮಾನ ಶಾಲೆಗೆ ಸೋಮವಾರರಂದು ಭೇಟಿಯನ್ನು ನೀಡಿ ಪರಿಶೀಲಿಸಿದರು.
ಎಂಟನೇ ತರಗತಿಯ ಮಕ್ಕಳೊಂದಿಗೆ ಗಣಿತ ವಿಷಯಕ್ಕೆ ಸಂಬಂಧಿಸಿದಂತೆ ಲೆಕ್ಕಗಳನ್ನು ಬಿಡಿಸಿದರು, ವಿವಿಧ ವಿಷಯಗಳು ಕುರಿತು ಕೇಳಿದ ಪ್ರಶ್ನೆಗಳಿಗೆ ಮಕ್ಕಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.
ಶೈಕ್ಷಣಿಕ ಪ್ರಗತಿ ಹಾಗೂ ಮೂಲಸೌಕರ್ಯಗಳನ್ನು ಪರಿಶೀಲಿಸಿದರು.
ಶಿಕ್ಷಕರಿಗೆ ಶಾಲಾ ವ್ಯವಸ್ಥೆಯನ್ನು ಉತ್ತಮವಾಗಿ ನೋಡಿಕೊಂಡು ಹೋಗಲು ಸಲಹೆ ಸೂಚನೆಗಳನ್ನು ನೀಡಿದರು.
ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಶಾಲೆಯ ಅಗತ್ಯತೆಗಳ ಬಗ್ಗೆ ಮಾಹಿತಿ ಪಡೆದರು.
ನಂತರ ಮಾತನಾಡಿ ತಾಲ್ಲೂಕು ಮಟ್ಟದಲ್ಲಿ ಶಿಕ್ಷಣ, ಆರೋಗ್ಯ ಮತ್ತು ಮೂಲಭೂತ ಸೌಕರ್ಯಗಳ ಸುಧಾರಣೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಯೋಜನೆಗಳು ಹೇಗೆ ಅನುಷ್ಠಾನಗೊಳ್ಳುತ್ತಿವೆ ಎಂಬುದನ್ನು ಮೇಲ್ವಿಚಾರಣೆ ಮಾಡುವುದು ಈ ಭೇಟಿಯ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತ ಸಿಇಒ ಮಹಮ್ಮದ್ ಹಾರಿಸ್ ಸುಮೈರ್, ತಹಸೀಲ್ದಾರ್ ಜೂಗಲ ಮಂಜುನಾಯಕ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಕುಮಾರ್, ಶಿಕ್ಷಣ ಇಲಾಖೆಯ ಡಿಡಿಪಿಐ ಉಮಾದೇವಿ, ಶಿಕ್ಷಣ ಸಂಯೋಜಕ ಟಿ. ಎಂ. ಬಸವರಾಜ, ಸಿ ಆರ್ ಪಿ ಸ್ವಯಂಪ್ರಭ, ಮುಖ್ಯಗುರು ಬಿಎಸ್ ಸದ್ದು ಜಾತಪ್ಪ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಶಿಕ್ಷಕರು ಇದ್ದರು.
ವರದಿ : ಜಿಲಾನಸಾಬ್ ಬಡಿಗೇರ್




















