ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಡಾ. ಸುನೀಲ ಪರೀಟರಿಗೆ ಅಜೂರ ಪ್ರಶಸ್ತಿ

ಬೆಳಗಾವಿ: ಆಜೂರ ಪ್ರತಿಷ್ಠಾನದಿಂದ ಪ್ರತಿ ವರ್ಷ ನೀಡುವ ಬೆಳಗಾವಿ ಜಿಲ್ಲಾಮಟ್ಟದ 2025ನೇ ಸಾಲಿನ ಆಜೂರ ಪ್ರಶಸ್ತಿಗೆ ಬೆಳಗಾವಿಯ ಸಾಹಿತಿ, ಹಿರಿಯ ಶಿಕ್ಷಕರಾದ ಡಾ. ಸುನೀಲ ಪರೀಟ ಅವರ ‘ಮಕ್ಕಳ ನೈತಿಕ ವಚನಗಳು’ ಕೃತಿ ಆಯ್ಕೆಯಾಗಿದೆ. ಜ.15ರಂದು ಹಾರೂಗೇರಿ ಪಟ್ಟಣದ ಆಜೂರ ತೋಟದ ಮಹಾಮನೆಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಪ್ರತಿಷ್ಠಾನದವರು ತಿಳಿಸಿದ್ದಾರೆ.

ಡಾ. ಸುನೀಲ ಪರೀಟ ಅವರಿಂದ ಇದುವರೆಗೆ 9 ಕೃತಿಗಳು ಕನ್ನಡ ಸಾರಸ್ವತ ಲೋಕಕ್ಕೆ ಅರ್ಪಿತವಾಗಿವೆ. ಅದರಲ್ಲಿ ನಾಲ್ಕು ಸ್ವಂತ ಹಾಗೂ ಐದು ಸಂಪಾದಕ ಕೃತಿಗಳಾಗಿವೆ.
ಸಾಹಿತ್ಯ ವಲಯದಲ್ಲಿ ಅತ್ಯಂತ ಕ್ರಿಯಾಶೀಲರಾಗಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಪರೀಟ ಅವರಿಗೆ ಈಗಾಗಲೇ ಕರ್ನಾಟಕ ಸರ್ಕಾರದಿಂದ ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿ, ಡಾ. ಡಿ.ಎಸ್. ಕರ್ಕಿ ಕಾವ್ಯ ಪ್ರಶಸ್ತಿ, ಶಿಕ್ಷಾಶಿಲ್ಪಿ ಪ್ರಶಸ್ತಿ, ಭಾರತ ಗೌರವ ಪ್ರಶಸ್ತಿ, ಡಾ. ಅಂಬೇಡ್ಕರ್ ಫಿಲೋಶಿಪ್ ಪ್ರಶಸ್ತಿ ಸೇರಿದಂತೆ ರಾಜ್ಯ ಹಾಗೂ ರಾಷ್ಟ ಮಟ್ಟದಲ್ಲಿ ಹಲವು ಪ್ರಶಸ್ತಿಗಳು ಲಭಿಸಿವೆ.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!