ಬಳ್ಳಾರಿ: ಮಹರ್ಷಿ ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಅವರ ನಿರೀಕ್ಷಣಾ ಜಾಮೀನು ಭವಿಷ್ಯ ನಾಳೆಗೆ ನಿರ್ಧಾರವಾಗಲಿದೆ. ಮಹರ್ಷಿ ವಾಲ್ಮೀಕಿ ನಿಗಮದ ಕೋಟ್ಯಂತರ ರೂಪಾಯಿ ಅಕ್ರಮ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿರುವ ಮಾಜಿ ಸಚಿವ ಶಾಸಕ ಬಿ.ನಾಗೇಂದ್ರ ನಿರೀಕ್ಷಣಾ ಜಾಮೀನಿಗಾಗಿ ಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ಕೋರ್ಟ್, ವಾದ-ಪ್ರತಿವಾದ ಆಲಿಸಿದ್ದು, ನಾಳೆ ಜ.14 ರಂದು ಆದೇಶ ಕಾಯ್ದಿರಿಸಿದೆ.
ಕೋರ್ಟ್ ನಾಳೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದರೆ ಮಾಜಿ ಸಚಿವ ನಾಗೇಂದ್ರ ಬಂಧನ ಭೀತಿಯಿಂದ ಪಾರಾಗಲಿದ್ದಾರೆ. ಇಲ್ಲದಿದ್ದಲ್ಲಿ ಮತ್ತೆ ಅರೆಸ್ಟ್ ಆಗುವ ಸಾಧ್ಯತೆ ಇದೆ.
ವರದಿ ಜಾಫರ್ ಸಾದಿಕ್




















