ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಂಪ್ಲಿಯ ಹರಿಜನ ಕೇರಿಯಲ್ಲಿ ಮಗುವಿಗೆ ಬೀದಿ ನಾಯಿ ಕಡಿತ- ಬಳ್ಳಾರಿಯ ಬಿಮ್ಸ್ ಗೆ ದಾಖಲು : ಪರಿಹಾರಕ್ಕೆ ಕುಟುಂಬದ ಆಗ್ರಹ

ಕಂಪ್ಲಿ: ಪುರಸಭೆ ವ್ಯಾಪ್ತಿಯ 10ನೇ ವಾರ್ಡು ಹರಿಜನಕೇರಿ ಪ್ರದೇಶದಲ್ಲಿ ಮಗುವಿಗೆ ಬೀದಿ ನಾಯಿ ಕಡಿದಿದ್ದು, ಮಗುವಿನ ಕಿವಿ, ತುಟಿ ಸೇರಿದಂತೆ ಇತರೆ ಕಡೆಗಳಲ್ಲಿ ಭಾರಿ ಪ್ರಮಾಣದ ಗಾಯಗಳಾಗಿದ್ದು, ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಯ ಬಿಮ್ಸ್ ಗೆ ದಾಖಲಿಸಲಾಗಿದೆ.
ಕಳೆದ ಭಾನುವಾರ ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಸಿ.ಎಸ್.ಆಕ್ಷತಾ ಎನ್ನುವ ಮಗುವಿಗೆ ಬೀದಿ ನಾಯಿಗಳು ಗುಂಪಾಗಿ ದಾಳಿ ಮಾಡಿ ಮನಸೋ ಇಚ್ಚೆ ಕಡಿದು ಭೀಕರವಾಗಿ ಗಾಯಗೊಳಿಸಿವೆ. ಭೀಕರವಾಗಿ ಗಾಯಗೊಳಿಸಿದ ಮಗುವನ್ನು ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸಗಾಗಿ ದಾಖಲಿಸಲಾಗಿದೆ.
ಆದರೆ, ಮಗುವಿಗೆ ದೊಡ್ಡ ಪ್ರಮಾಣದ ಗಾಯಗಳಾಗಿದ್ದರಿಂದ ಮತ್ತು ಕಿವಿ ಹಾಗೂ ತುಟಿಯನ್ನು ನಾಯಿಗಳು ಸೀಳಿರುವುದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಮ್ಸ್ ಆಸ್ಪತ್ರೆಯಲ್ಲಿ ಮಗುವಿನ ಕಿವಿ ಮತ್ತು ತುಟಿಗಳಿಗೆ ಹೊಲಿಗೆಗಳನ್ನು ಹಾಕಲಾಗಿದೆ. ಕಳೆದ ನಾಲ್ಕು ದಿನಗಳಿಂದ ಮಗುವಿಗೆ ಚಿಕಿತ್ಸೆಯನ್ನು ನೀಡುತ್ತಿದ್ದು, ಮಗು ಇನ್ನು ಚೇತರಿಸಿಕೊಂಡಿಲ್ಲವೆಂದು ಮಗುವಿನ ತಾತ ಸಿ.ಎಸ್.ವಿರೂಪಾಕ್ಷಿ ತಿಳಿಸಿದರು.
ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಅಧಿಕವಾಗಿದ್ದು, ಈಗಾಗಲೇ ಹಲವಾರು ಭಾರಿ ಪಟ್ಟಣದಲ್ಲಿ ಬೀದಿ ನಾಯಿಗಳ ಕಡಿತದಿಂದ ಹಲವಾರು ಬಾಲಕರು ಗಾಯಗೊಂಡಿದ್ದು, ಇದೀಗ ಮತ್ತೊಂದು ಮಗುವಿಗೆ ಮರಣಾಂತಿಕವಾಗಿ ಗಾಯಗೊಳಿಸಿದ್ದು, ಬೀದಿ ನಾಯಿಗಳ ಹಾವಳಿಯನ್ನು ತಡೆಗಟ್ಟುವಂತೆ ಸಿ.ಎಸ್. ವಿರೂಪಾಕ್ಷಿ, ಸಿ.ಎಸ್. ಚೆನ್ನಯ್ಯ ಹಾಗೂ ಇತರರು ಆಗ್ರಹಿಸಿದ್ದಾರೆ.
ಮಗುವಿಗೆ ನಾಯಿಗಳ ಕಡಿತದಿಂದಾಗಿ ಭಾರಿ ಗಾಯಗಳಾಗಿದ್ದು,ಆರ್ಥಿಕವಾಗಿ ತೀರಾ ಹಿಂದುಳಿದಿದ್ದು, ಮಗುವಿನ ಚಿಕಿತ್ಸೆಗೆ ಹಾಗೂ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಸಿ.ಎಸ್.ವಿರೂಪಾಕ್ಷಿ ಸ್ಥಳೀಯ ಆಡಳಿತ ಹಾಗೂ ಸರ್ಕಾರವನ್ನು ಆಗ್ರಹಿಸಿದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!