ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಚಿವರ ಬುಡಕ್ಕೆ ಅಬಕಾರಿ ಡಿಸಿ ಲಂಚ ಪ್ರಕರಣ: ಆರ್​​ಬಿ ತಿಮ್ಮಾಪುರಗೆ ಸಂಕಷ್ಟ, ವಿಕೆಟ್ ಪತನವಾಗುತ್ತಾ?

ಬೆಂಗಳೂರು : ಅಬಕಾರಿ ಡಿಸಿ ಲೋಕಾ ಬಲೆಗೆ ಬಿದ್ದ ಬೆನ್ನಲ್ಲೇ ಅಬಕಾರಿ ಸಚಿವ ಆರ್​​ಬಿ ತಿಮ್ಮಾಪುರ ಅವರಿಗೂ ಸಂಕಷ್ಟ ಎದುರಾಗಿದೆ. ಲಂಚದ ಬಹುಪಾಲು ಹಣವನ್ನು ಮಿನಿಸ್ಟರ್‌ಗೆ ಕೊಡಬೇಕು ಎನ್ನುವ ಅಬಕಾರಿ ಡಿಸಿಯ (Excise DC) ಆಡಿಯೊ ಆಧಾರದ ಮೇಲೆ ಆರ್.ಬಿ ತಿಮ್ಮಾಪುರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಹೀಗಾಗಿ ಅಬಕಾರಿ ಲೈಸೆನ್ಸ್ ಗಾಗಿ ಕೋಟಿ ಕೋಟಿ ರೂಪಾಯಿ ಲಂಚ ಕೇಳಿದ್ದ ಅಬಕಾರಿ ಡಿಸಿ ಪ್ರಕರಣ ಇದೀಗ ಸಚಿವರ ಬುಡಕ್ಕೂ ಬಂದಿದೆ.

ಸಚಿವರ ಬುಡಕ್ಕೆ ಅಬಕಾರಿ ಡಿಸಿ ಲಂಚ ಪ್ರಕರಣ,
ಆರ್​​ಬಿ ತಿಮ್ಮಾಪುರಗೆ ಸಂಕಷ್ಟ :

ಮೊನ್ನೆಯಷ್ಟೇ ಬೆಂಗಳೂರು ನಗರ ಅಬಕಾರಿ ಡಿಸಿ ಜಗದೀಶ್ ನಾಯ್ಕ್ 25 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ರು. ಈ ಕೇಸ್ ನಲ್ಲಿ ಇನ್ನಿಬ್ಬರು ಆರೋಪಿಗಳನ್ನ ಬಂಧಿಸಿ ಜೈಲಿಗಟ್ಟಲಾಗಿತ್ತು. ಆದರೆ ಈ ಕೇಸ್ ಈಗ ರಾಜ್ಯ ಸರ್ಕಾರದ ಪವರ್ ಫುಲ್ ಖಾತೆಯ ಸಚಿವ ಆರ್.ಬಿ.ತಿಮ್ಮಾಪುರಗೆ ಸುತ್ತಿಕೊಂಡಿದೆ. ಡಿಸಿ ವಿರುದ್ಧ ದೂರು ನೀಡಿದ್ದ ವ್ಯಕ್ತಿಯೇ ಈಗ ಸಚಿವರ ವಿರುದ್ಧವೂ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.
ಬ್ಯಾಟರಾಯನಪುರ ಕಚೇರಿಯಲ್ಲಿ 25 ಲಕ್ಷ ರೂ.‌ ಲಂಚ ಸ್ವೀಕರಿಸುವ ಕೆಲವೇ ನಿಮಿಷಗಳ ಮುಂಚೆ ದೂರುದಾರ ಲಕ್ಷ್ಮೀನಾರಾಯಣ ಮತ್ತು ಡಿಸಿ ಜಗದೀಶ್ ನಾಯ್ಕ್ ಲೈಸೆನ್ಸ್ ಡೀಲಿಂಗ್ ಮಾತಾಡಿದ್ದರು. ಈ ವೇಳೆ ಡಿಸಿ ಜಗದೀಶ್ ಲಂಚದ ಹಣವನ್ನು ಕೆಲವು ಅಧಿಕಾರಿಗಳ ಜೊತೆ ಸಚಿವರಿಗೂ ಕೊಡಬೇಕು ಎಂದಿದ್ದರು. ಇದೆಲ್ಲವನ್ನೂ ದೂರುದಾರರು ತಮ್ಮ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದರು. ಇದೀಗ ಈ ಆಡಿಯೋ ಆಧಾರದ ಮೇಲೆ ಸಚಿವರ ವಿರುದ್ಧವೇ ಲಕ್ಷ್ಮೀನಾರಾಯಣ ದೂರು ನೀಡಿದ್ದಾರೆ.

25 ಲಕ್ಷ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಕೈಗೆ ರೆಡ್ ಹ್ಯಾಂಡ್ ಸಿಕ್ಕಿದ್ದ ಅಬಕಾರಿ ಉಪ ಆಯುಕ್ತ ಸಚಿವರ ರಾಜೀನಾಮೆಗೆ ಬಿಜೆಪಿ ಒತ್ತಾಯ :

ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಮತ್ತು ಅವರ ಪುತ್ರ ಲಂಚಕ್ಕೆ ಬೇಡಿಕೆ ಇಟ್ಟಿರುವ ಆಡಿಯೋವನ್ನು ಬಿಜೆಪಿ ಬಿಡುಗಡೆ ಮಾಡಿದೆ. ಸಿಎಲ್-7 ಪರವಾನಗಿ ನೀಡಲು ಪ್ರತಿ ಪರವಾನಗಿಗೆ 1.5 ಕೋಟಿ ರೂ. ಲಂಚ ಕೇಳಲಾಗಿದೆ ಎಂದು ಆರೋಪಿಸಿದೆ. ಈ ಬಗ್ಗೆ ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಬೇಕು. ಅಬಕಾರಿ ಸಚಿವ ಆರ್​ಬಿ ತಿಮ್ಮಾಪುರ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಒತ್ತಾಯಿಸಿದೆ.
ಲೋಕಾಯುಕ್ತ ಎಸ್ ಪಿ ಶಿವಪ್ರಕಾಶ್ ದೇವರಾಜ್ ಗೆ ದೂರುದಾರ ಲಕ್ಷ್ಮೀನಾರಾಯಣ ದೂರು ನೀಡಿದ್ದಾರೆ. ಸದ್ಯ ದೂರು ಸ್ವೀಕರಿಸಿರುವ ಲೋಕಾಯುಕ್ತರು, ಆರೋಪ ಸಾಬಿತಾದರೆ ತಲೆದಂಡ ಮಂತ್ರಿ ವಿರುದ್ಧ ಅದ್ಯಾವ ರೀತಿ ತನಿಖೆ ನಡೆಸುತ್ತೆ ಎನ್ನುವುದನ್ನು ಕಾದು ನೋಡಬೇಕಿದೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!