ಬೆಂಗಳೂರು : ರಾಜಧಾನಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು.
” ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯತಿ ಚುನಾವಣೆ ನಡೆಸಲು ನಮ್ಮ ಸರ್ಕಾರ ತೀರ್ಮಾನಿಸಿದೆ. ಇವುಗಳಿಗೆ ಇದ್ದ ಮೀಸಲಾತಿ ಸಮಸ್ಯೆ ಬಗೆಹರಿಸಲು ಸಿಎಂ ಹಾಗೂ ಸಚಿವರು ತಿಳಿಸಿದ್ದಾರೆ. ಗ್ರಾಮ ಪಂಚಾಯತಿ ಚುನಾವಣೆಗಳನ್ನೂ ಪಕ್ಷದ ಚಿಹ್ನೆ ಮೇಲೆ ನಡೆಸಬೇಕು ಎಂದು ಅನೇಕರು ಸಲಹೆ ನೀಡಿದ್ದು, ನಾವಿನ್ನೂ ಆ ಬಗ್ಗೆ ತೀರ್ಮಾನ ಮಾಡಿಲ್ಲ. ಒಂದೇ ಬಾರಿಗೆ ಎಲ್ಲಾ ಚುನಾವಣೆಗಳನ್ನು ನಡೆಸಲು ಚಿಂತನೆ ನಡೆಯುತ್ತಿದೆ” ಎಂದರು.
ವರದಿ : ಜಿಲಾನಸಾಬ್ ಬಡಿಗೇರ್




















