ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶೆಲ್ ಎನ್‌ಎಕ್ಸ್‌ಪ್ಲೋರರ್ಸ್ ರಿಪ್ರೆಶನ್-3 ಎಟಿಎಲ್ ಶಾಲೆಯ ಶಿಕ್ಷಕರಿಗೆ ತರಬೇತಿ.

ಯಾದಗಿರಿ ಜಿಲ್ಲೆಯ ಸುರಪುರದ ಹೋಟೆಲ್ ಆದಿತಿಯಲ್ಲಿ ಲರ್ನಿಂಗ್ ಲಿಂಕ್ಸ್ ಫೌಂಡೇಶನ್, ನೀತಿ ಆಯೋಗ ಮತ್ತು ಶೆಲ್ ಎನ್‌ಎಕ್ಸ್‌ಪ್ಲೋರರ್ಸ್ ಸಹಯೋಗದಲ್ಲಿ ಶಿಕ್ಷಕರ ವೃತ್ತಿಪರ ಅಭಿವೃದ್ಧಿ ಕಾರ್ಯಗಾರದ ತರಬೇತಿಯನ್ನು ದಿ. 19-01-2026 ರಂದು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಎಟಿಎಲ್ ಶಾಲೆಯ ಶಿಕ್ಷಕರು, ಪೀಳಿಗೆಯ ನಾಯಕರನ್ನು ಪ್ರೇರೇಪಿಸಲು ಶೆಲ್ ಎನ್‌ಎಕ್ಸ್‌ಪ್ಲೋರರ್ಸ್ ಶಿಕ್ಷಕರನ್ನು ಸಜ್ಜುಗೊಳಿಸುತ್ತಿದೆ. ಯುವ ಮನಸ್ಸುಗಳನ್ನು ಪೋಷಿಸುವ ಮತ್ತು ಸುಸ್ಥಿರ ಪರಿಹಾರಗಳನ್ನು ಕಂಡುಹಿಡಿಯುವ ಪ್ರಯಾಣ ಮತ್ತಷ್ಟು ಪ್ರೇರಣೆಯನ್ನು ನೀಡಲಿದೆ, ಈ ತರಬೇತಿಯ ಸದುಪಯೋಗ ಪಡೆದುಕೊಂಡು ವಿದ್ಯಾರ್ಥಿಗಳಿಗೆ ಸಹಕಾರಿಯಾಗಬೇಕು.

ಎಲ್ಲಾ ವಿದ್ಯಾರ್ಥಿಗಳಲ್ಲಿ STEM ಆಧರಿತ ಜ್ಞಾನ ನೀಡಲು ಮುಂದಾಗಿ ಶಾಲೆಗಳಲ್ಲಿ ಅಟಲ್ ಟಿಂಕರಿಂಗ್ ಲ್ಯಾಬ್ ಗಳನ್ನು ಸ್ಥಾಪಿಸಲಾಗಿದೆ. ಅಲ್ಲಿನ ಎಲ್ಲಾ ವಿದ್ಯಾರ್ಥಿಗಳಿಗೆ ಸ್ಟೆಮ್ ಆಧಾರಿತ ಶಿಕ್ಷಣ ಜ್ಞಾನ ಒದಗಿಸಿ ವಿನೂತನ ಪ್ರಾಜೆಕ್ಟ್‌ಗಳನ್ನು ರೂಪಿಸಲು ಶೆಲ್ ಎನ್‌ಎಕ್ಸ್‌ಪ್ಲೋರರ್ಸ್ ತಮ್ಮ ಪಾಠ್ಯವನ್ನು ಸಿದ್ಧಪಡಿಸಿ ಶಿಕ್ಷಕರಿಗೆ ತರಬೇತಿ ನೀಡುತ್ತಿದೆ. ಇದನ್ನು ವಿದ್ಯಾರ್ಥಿಗಳ ಮಟ್ಟಕ್ಕೆ ತಲುಪಿಸಿ ಮಕ್ಕಳಲ್ಲಿ ಹೊಸತನವನ್ನು ಎಕ್ಸ್‌ಪ್ಲೋರ್ ಮಾಡಲು ತರಬೇತಿ ಪಡೆದ ಶಿಕ್ಷಕರು ಸಹಕಾರಿಯಾಗಬೇಕು ಎಂದು ತಿಳಿಸಿದರು.

ಈ ತರಬೇತಿಯು ರಾಷ್ಟ್ರೀಯ ಶಿಕ್ಷಣ ಉದ್ದೇಶಗಳೊಂದಿಗೆ ಹೊಂದಿಕೆಯಾಗಿರುವುದಾಗಿ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಕಾರ್ಯಕ್ರಮವು ಭಾರತಾದ್ಯಂತ ಹಲವು ವರ್ಷಗಳಿಂದ ನಡೆಯುತ್ತಿದ್ದು ಯಾದಗಿರಿಯಲ್ಲಿ 2024-25 ರಿಂದ 2025-26 ಮುಂದೆ ಮುಂದುವರೆಯುತ್ತಿದೆ. ಶೆಲ್ ಎನ್‌ಎಕ್ಸ್‌ಪ್ಲೋರರ್ಸ್ ಕಾರ್ಯಕ್ರಮದ ಮೂಲಕ ತರಬೇತಿ ಪಡೆಯುತ್ತಿರುವ ಎಲ್ಲಾ ಶಿಕ್ಷಕರು ನಮ್ಮನ್ನು ನಾವು ಹೊಸತನವನ್ನು ಕಂಡುಕೊಳ್ಳಲು ತೊಡಗಿಸಿಕೊಳ್ಳಬೇಕು. ಆ ಮೂಲಕ ವಿದ್ಯಾರ್ಥಿಗಳಿಗೆ ಹೊಸದಾಗಿ ಯೋಚಿಸುವುದು, ಸೃಜನಾತ್ಮಕವಾಗಿರುವುದು ಮತ್ತು ನೈಜ ಸಮಸ್ಯೆಗಳಿಗೆ ಪರಿಹಾರ ಹುಡುಕುವ ಕೌಶಲ್ಯವನ್ನು ಅಭಿವೃದ್ಧಿಪಡಿಸುತ್ತದೆ. ಇದು ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಗಟ್ಟಿಯಾದ ಹಾದಿಯನ್ನು ಕಲ್ಪಿಸುತ್ತದೆ.

ವಿದ್ಯಾರ್ಥಿಗಳು ರಚಿಸಿದ ಹೊಸತನದ ಯೋಜನೆಗಳು ಜಿಲ್ಲಾ ಮಟ್ಟ, ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡರೆ ಇಲಾಖೆಗೆ AIM ಹಾಗೂ ಶೆಲ್ ಎನ್‌ಎಕ್ಸ್‌ಪ್ಲೋರರ್ಸ್ ಗೂ ಖುಷಿಯನ್ನು ನೀಡುತ್ತದೆ ಎಂದು ತಿಳಿಸಿದರು.

ತರಬೇತಿಯಲ್ಲಿ ಎನ್‌ಎಕ್ಸ್‌ಪ್ಲೋರರ್ಸ್ ಫೌಂಡೇಶನ್ ಪಠ್ಯಕ್ರಮದ ಸಂಪೂರ್ಣ ಪರಿಚಯ ನೀಡಲಾಯಿತು. ಇದರ ಮೂಲಕ ಶಿಕ್ಷಕರು ತಮ್ಮ ಶಾಲೆಗಳಲ್ಲಿ ವಿದ್ಯಾರ್ಥಿಗಳನ್ನು ನಾಯಕರಾಗಿ ರೂಪಿಸಿ, ನೈಜ ಸಮಸ್ಯೆಗಳ ಪರಿಹಾರಕ್ಕೆ ಮಾರ್ಗದರ್ಶನ ನೀಡುವ ಜ್ಞಾನ ಹಾಗೂ ಕೌಶಲ್ಯಗಳನ್ನು ಗಳಿಸಬಹುದು.

ತರಬೇತಿಯಲ್ಲಿ ಯಾದಗಿರಿ, ಕಲಬುರ್ಗಿ, ರಾಯಚೂರು ಮತ್ತು ವಿಜಯಪುರ ಜಿಲ್ಲೆಯ 23 ಶಾಲೆಗಳಿಂದ 31 ಎ.ಟಿ.ಎಲ್ ಶಿಕ್ಷಕರು ಹಾಜರಾಗಿ ತರಬೇತಿಯ ಲಾಭವನ್ನು ಪಡೆದರು.

ಈ ತರಬೇತಿಯಲ್ಲಿ ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಬಗ್ಗೆ ವಿಶೇಷ ತರಗತಿಯನ್ನು ಶ್ರೀಮತಿ ಸೌಮ್ಯ ಬಿ (ಅಸಿಸ್ಟೆಂಟ್ ಮ್ಯಾನೇಜರ್) ಮತ್ತು ಶ್ರೀಮತಿ ಶ್ರೀನಿಜ (ಸೀನಿಯರ್ ಮ್ಯಾನೇಜರ್) ನಡೆಸಿಕೊಟ್ಟರು. ಮುಂದಿನ ಭವಿಷ್ಯಕ್ಕಾಗಿ ಎನರ್ಜಿ ಕ್ಲಬ್ ಆಯ್ದ ಶಾಲೆಗಳ ಬಗ್ಗೆ ವಿಶೇಷತೆ, ಮುಂದಿನ ಪೀಳಿಗೆಗೆ ನಮ್ಮ ಭೂಮಿಯ ಪರಿಸರದ ಬಗ್ಗೆ ಕಾಳಜಿ ಮುಂತಾದ ವಿಷಯಗಳ ಬಗ್ಗೆ ತಿಳಿಸಿಕೊಟ್ಟರು. ಶ್ರೀ ವಿಶ್ವನಾಥ್ ರೆಡ್ಡಿ (ಅಸಿಸ್ಟೆಂಟ್ ಮ್ಯಾನೇಜರ್) ಕೂಡ ಈ ತರಬೇತಿಯಲ್ಲಿ ಭಾಗವಹಿಸಿದ್ದರು.

  • ಕರುನಾಡ ಕಂದ ಪತ್ರಿಕೆ.
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!