ನರೇಂದ್ರ ಮೋದಿ ಜಿ ನೇತೃತ್ವದ ಕೇಂದ್ರ ಸರ್ಕಾರದ ದೂರದೃಷ್ಟಿಯ ‘VB-G RAM G’ ಕಾಯ್ದೆ, ನಮ್ಮ ಗ್ರಾಮೀಣ ಭಾಗದ ಶ್ರಮಿಕರಿಗೆ 125 ದಿನಗಳ ಉದ್ಯೋಗ ಖಾತ್ರಿ ನೀಡುವ ಮೂಲಕ ‘ವಿಕಸಿತ ಭಾರತ’ದ ಸಂಕಲ್ಪವನ್ನು ಸಾಕಾರಗೊಳಿಸುವತ್ತ ಪರಿವರ್ತನಕಾರಿ ಹೆಜ್ಜೆಯಾಗಿದೆ.
ಈ ನಿಟ್ಟಿನಲ್ಲಿ ವಿಕಸಿತ ಭಾರತ ಉದ್ಯೋಗ ಖಾತ್ರಿ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ) ಕಾಯ್ದೆ ಕುರಿತಂತೆ, ಕೇಂದ್ರ ಕೃಷಿ, ರೈತರ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಖಾತೆ ಸಚಿವರಾದ ಸನ್ಮಾನ್ಯ ಶ್ರೀ
ಶಿವರಾಜ ಸಿಂಗ್ ಚೌವ್ಹಾಣ್ ರವರ ಅಧ್ಯಕ್ಷತೆಯಲ್ಲಿ ರಾಜ್ಯದ NDA ಮೈತ್ರಿ ಕೂಟದ ಸದಸ್ಯರಿಗೆ ಆಯೋಜಿಸಲಾಗಿದ್ದ ವಿಶೇಷ ಸಭೆಯಲ್ಲಿ ಜನಪ್ರಿಯ ಮಾಜಿ ಶಾಸಕರು ಹಾಗೂ ಕೊಪ್ಪಳ ಜಿಲ್ಲಾ ಭಾ.ಜ.ಪಾ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಬಸವರಾಜ ದಡೇಸೂಗುರು ಮತ್ತು ಪಕ್ಷದ ಕಾರ್ಯಕಾರಿಣಿ ಸದಸ್ಯರಾದಂತಹ ಸನ್ಮಾನ್ಯ ಶ್ರೀ ಡಾ. ಬಸವರಾಜ ಕ್ಯಾವಟರ್ ಹಾಗೂ ಜಿಲ್ಲಾ ಮತ್ತು ರಾಜ್ಯ ನಾಯಕರು ಪಾಲ್ಗೊಂಡಿದ್ದರು.
ವರದಿ ಅಮರೇಶ ನಾಯಕ




















