ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬಳ್ಳಾರಿ ಬ್ಯಾನರ್ ಗಲಾಟೆ ಮಾಸುವ ಮುನ್ನವೇ ರೆಡ್ಡಿ,ಶ್ರೀರಾಮುಲುಗೆ ಸೇರಿದ ಮಾಡೆಲ್ ಹೌಸ್​ಗೆ ಬೆಂಕಿ

ಬಳ್ಳಾರಿ : ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡಿದ ಬಳ್ಳಾರಿ ಬ್ಯಾನರ್ ಗಲಾಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಕೃತ್ಯ ನಡೆದಿದೆ.
ಹೌದು…ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲುಗೆ ಸೇರಿದ ಸೇರಿದ ಜಿ ಸ್ಕೈರ್ ಲೇಔಟ್​ನಲ್ಲಿರುವ ಮಾಡೆಲ್ ಹೌಸ್​ನಲ್ಲಿ (Model House) ಬೆಂಕಿ ಅವಘಡ ಸಂಭವಿಸಿದ್ದು,, ಕಾಂಗ್ರೆಸ್​​​ನವರೇ ಬೆಂಕಿ ಹಚ್ಚಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ. ಇದರಿಂದ ಈ ಬೆಂಕಿ ಪ್ರಕರಣ ಮತ್ತೆ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸುವ ಸಾಧ್ಯತೆಗಳಿವೆ.

ಈ ಮಾಡೆಲ್ ಹೌಸ್​ ಶ್ರೀರಾಮುಲು ಹಾಗೂ ಜನಾರ್ದನ ರೆಡ್ಡಿ ಇಬ್ಬರ ಹೆಸರಿನಲ್ಲಿದ್ದು, 13-14 ವರ್ಷಗಳ ಹಿಂದೆ ಮಾಡಲಾಗಿದೆ. ಈ ಹೌಸ್ ಒಟ್ಟು 109 ಎಕರೆ ಟೋಟಲ್ G ಸ್ವ್ಕೇರ್ ಹೊಂದಿದೆ.ಈ ಘಟನೆ ಬಗ್ಗೆ ಮಾಜಿ ಶಾಸಕ ಸೋಮಶೇಖರ್ ರೆಡ್ಡಿ ಪ್ರತಿಕ್ರಿಯಿಸಿದ್ದು, ಬ್ಯಾನರ್ ಗಲಾಟೆ ವೇಳೆ ಬೆಂಕಿ ಹಚ್ಚುತ್ತೇನೆಂದು ಹೇಳಿದ್ದರು. ಅಂದಿನ ಘಟನೆಗೆ ಸಾಕ್ಷಿ ಎನ್ನುವಂತೆ ಈಗ ಬೆಂಕಿ ಹಚ್ಚಿದ್ದಾರೆ. ನಮಗೆ ಸೇರಿದ ಮಾಡೆಲ್ ಹೌಸ್​ಗೆ ಬೆಂಕಿ ಹಚ್ಚಿದ್ದಾರೆ. ನೂರು ಎಕರೆ ಪ್ರದೇಶದಲ್ಲಿ ಲೇಔಟ್ ಮಾಡಲಾಗಿತ್ತು. ಖರೀದಿದಾರರಿಗೆ ತೋರಿಸಲು ಮಾಡೆಲ್ ಹೌಸ್ ನಿರ್ಮಿಸಿದ್ದೆವು. ಇಂದು ಜನವರಿ 23 ರ ಸಂಜೆ 6:30 ರ ಸುಮಾರಿಗೆ ಬೆಂಕಿ ಹಚ್ಚಲಾಗಿದೆ. ಬೆಂಕಿ ಹಚ್ಚಿದವರನ್ನ ಹಿಡಿಯಲು ಕೆಲವರು ಯತ್ನಿಸಿದ್ದಾರೆ ಎಂದು ಸ್ಫೋಟಕ ಆರೋಪ ಮಾಡಿದ್ದಾರೆ.

ಮಾಡಲ್​ ಹೌಸ್​ಗೆ ಪೆಟ್ರೋಲ್​, ಡೀಸೆಲ್​ ಹಾಕಿ ಬೆಂಕಿ ಹಚ್ಚಿದ್ದಾರೆ. ಕಾಂಗ್ರೆಸ್ ಶಾಸಕ ಭರತ್​ ರೆಡ್ಡಿ ಬೆಂಬಲಿಗರೇ ಇದನ್ನ ಮಾಡಿರುವುದು. ಘಟನಾ ಸ್ಥಳಕ್ಕೆ ಪೊಲೀಸ್​ ಅಧಿಕಾರಿಗಳು ಕೂಡ ಬಂದಿದ್ದಾರೆ. ಇದನ್ನ ನಾವು ಬಿಡಲ್ಲ, ಪೊಲೀಸ್​ ಠಾಣೆಗೆ ದೂರು ನೀಡುತ್ತೇವೆ ಎಂದರು.

ಇನ್ನು ಈ ಅಗ್ನಿ ಅವಘಡದ ಬಗ್ಗೆ ಶಾಸಕ ಗಾಲಿ ಜನಾರ್ದನರೆಡ್ಡಿ ಅಧಿವೇಶನಕ್ಕಾಗಿ ಬೆಂಗಳೂರಲ್ಲಿದ್ದ ಜನಾರ್ದನ ರೆಡ್ಡಿ ಅವರು ಈಗ ಬಳ್ಳಾರಿಗೆ ಹಿಂತಿರುಗುತ್ತಿದ್ದಾರೆ. ಬ್ಯಾನರ್​ ಗಲಾಟೆಯಾಗಿ ಇನ್ನೂ 15 ದಿನಗಳು ಸಹ ಆಗಿಲ್ಲ. ಆಗಲೇ ಇಂತಹ ಘಟನೆ ನಡೆದಿದೆ. ಘಟನೆ ಬಗ್ಗೆ ಬಳ್ಳಾರಿ ಎಸ್​ಪಿ ಜೊತೆ ನಾನು ಮಾತಾಡಿದ್ದೇನೆ ಎಂದು ಹೇಳಿದರು.

ಒಟ್ಟಿನಲ್ಲಿ ರೆಡ್ಡಿ ನಿವಾಸದ ಮುಂದೆ ನಡೆದ ಬ್ಯಾನರ್ ಗಲಾಟೆ ಬೆನ್ನಲ್ಲೇ ಇದೀಗ ಅದೇ ರೆಡ್ಡಿಗೆ ಸೇರಿದ ಮಾಡೆಲ್ ಹೌಸ್​​ಗೆ ಬೆಂಕಿ ಬಿದ್ದಿದ್ದು, ಇದು ಕಾಂಗ್ರೆಸ್​​ನವರ ಕೃತ್ಯ ಎಂದು ಅವರ ಸಹೋದರ ಸೋಮಶೇಖರ್ ರೆಡ್ಡಿ ಆರೋಪಿಸಿದ್ದಾರೆ. ಹೀಗಾಗಿ ಈ ಬೆಂಕಿ ರಾಜ್ಯಕಾರಣವನ್ನು ಆವರಿಸುವ ಸಾಧ್ಯತೆಗಳಿವೆ.

ಸದ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಬೆಂಕಿ ಅವಘಡಕ್ಕೆ ನಿಖರ ಕಾರಣವೇನು ಎಂಬುದು ತನಿಖೆಯ ನಂತರವಷ್ಟೇ ತಿಳಿಯಬೇಕಿದೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!