ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹಾವೇರಿ ಜಿಲ್ಲಾ 15ನೇ ಕನ್ನಡ ಸಾಹಿತ್ಯ ಸಮ್ಮೇಳನ

ಹಾವೇರಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸವಣೂರು ತಾಲೂಕು ಘಟಗಳ ಸಂಯುಕ್ತಾಶ್ರಯದಲ್ಲಿ ಹಾವೇರಿ ಜಿಲ್ಲಾ 15ನೇ ಕನ್ನಡ ಸಾಹಿತ್ಯ ಸಮ್ಮೇಳನ ಜ.24 ಮತ್ತು 25ರಂದು ಸವಣೂರಿನ ದೊಡ್ಡ ಹುಣಸೇ ಕಲ್ಮಟದ ಆವರಣದ ಶ್ರೀ ಚನ್ನಬಸವೇಶ್ವರ ಮಂಗಲ ಭವನದಲ್ಲಿ ನಡೆಯಲಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಲಿಂಗಯ್ಯ ಹಿರೇಮಠ ಹೇಳಿದರು.

ಬುಧವಾರ ಜಿಲ್ಲಾ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜ.24ರಂದು ಬೆಳಗ್ಗೆ 7.30ಕ್ಕೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ರಾಷ್ಟ್ರಧ್ವಜಾರೋಹಣವನ್ನು ಪರಿಷತ್ ಧ್ವಜವನ್ನು ಸ್ವತಃ ತಾವೇ ಹಾಗೂ ನಾಡ ಧ್ವಜವನ್ನು ಸವಣೂರ ತಾಲೂಕು ಘಟಕದ ಅಧ್ಯಕ್ಷ ಚಂದ್ರಗೌಡ ಪಾಟೀಲ ಆರೋಹಣ ಮಾಡುವ ಮೂಲಕ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ಸಿಗಲಿದೆ. ಈ ವೇಳೆ ಸವಣೂರ ಎಸಿ ಶುಭಂ ಶುಕ್ಲಾ, ತಹಶೀಲ್ದಾರ ರವಿ ಕೊರವರ, ತಾಪಂ ಇಒ ಬಿ.ಎಸ್ ಶಿಡೇನೂರ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. 8.30ಕ್ಕೆ ನಾಡದೇವಿಗೆ ಆಡವಿಸ್ವಾಮಿಮಠದ ಕುಮಾರ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ಎಸ್ ಪಿ ಯಶೋಧಾ ವಂಟಗೋಡಿ ಚಾಲನೆ ನೀಡುವರು. ಸಮ್ಮೇಳನಾಧ್ಯಕ್ಷರಾದ ಡಾ.ಎಚ್.ಆಯ್ ತಿಮ್ಮಾಪೂರ ಅವರ ಮೆರವಣಿಗೆಗೆ ಭರಮಲಿಂಗೇಶ್ವರ ವೃತ್ತದಲ್ಲಿ ಚಾಲನೆ ನೀಡಲಾಗುವುದು. ಈ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಹಾಯ್ದು ಡಾ.ವಿ.ಕೃ.ಗೋಕಾಕ ವೇದಿಕೆಯ ಚಂದ್ರಶೇಖರ ಪಾಟೀಲ ಸಭಾಂಗಣಕ್ಕೆ ಆಗಮಿಸಲಿದೆ ಎಂದು ಮಾಹಿತಿ ನೀಡಿದರು

ಬೆಳಗ್ಗೆ 10:30ಕ್ಕೆ ಉದ್ಘಾಟನಾ ಸಮಾರಂಭ ನೆರವೇರಲಿದ್ದು ದೊಡ್ಡಹುಣಸೇ ಕಲ್ಮಟ ಚೆನ್ನಬಸವ ಮಹಾಸ್ವಾಮೀಜಿ ಹಾಗೂ ಕಲ್ಮಟದ ಮಹಾಂತ ಸ್ವಾಮೀಜಿ ಸಾನ್ನಿಧ್ಯ ವಹಿಸುವರು, ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಉದ್ಘಾಟಿಸಲಿದ್ದು, ಶಾಸಕ ಯಾಸೀರ ಅಹ್ಮದಖಾನ ಪಠಾಣ ಅಧ್ಯಕ್ಷತೆ ವಹಿಸುವರು, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸಭೆಯ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಹಾಗೂ ಮಾಜಿ ಸಿಎಂ ಮತ್ತು ಸಂಸದ ಬಸವರಾಜ ಬೊಮ್ಮಾಯಿ ಉಪಸ್ಥಿತರಿರುವರು. ಇದೇ ವೇಳೆ ಸಭಾಂಗಣವನ್ನು ವಿಧಾನಪರಿಷತ್ತಿನ ಮುಖ್ಯ ಸಚೇತಕ ಸಲೀಂ ಅಹ್ಮದ, ಪುಸ್ತಕ ಮಳಿಗೆಗಳನ್ನು ಬಸವರಾಜ ಶಿವಣ್ಣನವರ, ವಾಣಿಜ್ಯ ಮಳಿಗೆಗಳನ್ನು ಹೆಸ್ಕಾಂ ಅಧ್ಯಕ್ಷ ಸೈಯದ ಅಜ್ಜಂಪೀರ ಖಾದ್ರಿ, ಪುಸ್ತಕಗಳನ್ನು ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಉದ್ಘಾಟಿಸುವರು ಎಂದು ತಿಳಿಸಿದರು.

ಈ ಸಮ್ಮೇಳನದಲ್ಲಿ ವಿವಿಧ ವಿಷಯಗಳ ಮೇಲೆ ಒಟ್ಟು 8ಗೋಷ್ಠಿಗಳು ನಡೆಯಲಿದ್ದು, ಜ.25ರಂದು ಸಂಜೆ 5.45ಕ್ಕೆ ಬಹಿರಂಗ ಅಧಿವೇಶನ ಜರುಗಲಿದೆ. ಅಲ್ಲದೆ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಕೂಡ ಜರುಗಲಿದೆ. ಈ ಎಲ್ಲಾ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಕನ್ನಡಾಭಿಮಾನಿಗಳು, ಕನ್ನಡಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಹಾವೇರಿ ಜಿಲ್ಲೆಯ 15ನೇ ಕನ್ನಡ ಜಾತ್ರೆಯನ್ನು ಯಶಸ್ವಿಗೊಳಿಸಿ ಕೊಡಬೇಕೆಂದು ಮನವಿ ಮಾಡಿದರು, ಸವಣೂರ ತಾಲೂಕು ಘಟಕದ ನಿಕಟಪೂರ್ವ ಅಧ್ಯಕ್ಷ ಪ್ರಭು ಅರಗೋಳ, ಸವಣೂರ ತಾಲೂಕ ಕ. ಸಾ. ಪ ಅಧ್ಯಕ್ಷ ಚಂದ್ರಗೌಡ ಪಾಟೀಲ, ಹೋಬಳಿ ಘಟಕದ ಅಧ್ಯಕ್ಷ ಬಸನಗೌಡ ಪಾಟೀಲ ಇದ್ದರು.

ವರದಿ ಬಸವರಾಜ ಎಸ್.ಎನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!