ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆಸಿ.ಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ

ಬಾಗಲಕೋಟೆ ಜಿಲ್ಲೆಯ ಕಮತಗಿ ಪಟ್ಟಣದ ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಅವರು ಕಳೆದ ಸೆಪ್ಟಂಬರ್ 5 ರಂದು ಹೃದಯಾಘಾತದಿಂದ ನಿಧನರಾಗಿದ್ದರು. ಮೃತರ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 2 ಲಕ್ಷ ರೂ. ಪರಿಹಾರವನ್ನು ನೀಡಲಾಯಿತು.
ಬಾಗಲಕೋಟೆ ಮತಕ್ಷೇತ್ರದ ಶಾಸಕ ಎಚ್.ವೈ.ಮೇಟಿಯವರ ಮನವಿಯ ಮೇರೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಮೃತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರವನ್ನು ಮುಖ್ಯಮಂತ್ರಿ ನಿಧಿಯಿಂದ ನೀಡಿದ್ದರು.
ಜ.20ರಂದು ಬಾಗಲಕೋಟೆ ಜಿಲ್ಲಾಧಿಕಾರಿಗಳ ಖಾತೆಗೆ ಮುಖ್ಯಮಂತ್ರಿ ಪರಿಹಾರ ನಿಧಿ ಹಣ ಜಮೆ ಮಾಡಲಾಗಿತ್ತು. ಜಿಲ್ಲಾಧಿಕಾರಿ ಸಂಗಪ್ಪನವರು ಜ.23ರಂದು ತಮ್ಮ ಕಚೇರಿಗೆ ಪ್ರಕಾಶ ಗುಳೇದಗುಡ್ಡ ಪತ್ನಿ ಮಂಜುಳಾ ಪ್ರ.ಗುಳೇದಗುಡ್ಡ, ಪುತ್ರ ಶ್ರೀಶೈ, ಪುತ್ರಿ ಸ್ಪೂರ್ತಿ ಯವರನ್ನು ಕರೆಸಿ 2 ಲಕ್ಷ ರೂ. ಪರಿಹಾರದ ಚೆಕ್ ವಿತರಿಸಿದರು.
ಜಿಲ್ಲಾಧಿಕಾರಿ ಸಂಗಪ್ಪ ಹಾಗೂ ಜಿಲ್ಲಾ ಪಂಚಾಯ್ತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರವರು ಚೆಕ್ ವಿತರಿಸಿ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಧೈರ್ಯ ತುಂಬಿ, ಮಕ್ಕಳ ಶಿಕ್ಷಣಕ್ಕೆ ಏನಾದರೂ ಸೌಲಭ್ಯ ಬೇಕಾದರೆ ನೇರವಾಗಿ ಬಂದು ಸಂಪರ್ಕಿಸಿ ಎಂದು ಕುಟುಂಬಕ್ಕೆ ಧೈರ್ಯದ ಮಾತುಗಳನ್ನು ಹೇಳಿದರು.
ಜಿಲ್ಲಾ ವಾರ್ತಾಧಿಕಾರಿ ಕಸ್ತೂರಿ ಪಾಟೀಲ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮಹೇಶ ಅಂಗಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಗದೀಶ ಗಾಣಿಗೇರ, ಪತ್ರಕರ್ತ ಶ್ರೀಶೈಲ ಬಿರಾದಾರ, ಸಂಘದ ಉಪಾಧ್ಯಕ್ಷ ಸಂತೋಷ ಹೊದ್ಲೂರ, ಕಾರ್ಯಕಾರಿಣಿ ಸದಸ್ಯ ಅಭಯ ಮನಗೂಳಿ, ವಿರೇಶ ನಾಲತ್ತವಾಡ, ಪತ್ರಕರ್ತ ಸಂತೋಷ ಮುಧೋಳೆ, ಅನಿರುದ್ಧ ಗಲಗಲಿ ಇದ್ದರು.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!