ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶ್ರೀ ಸಾಯಿ ಪಬ್ಲಿಕ್ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ.

ಇಂದು 77 ನೇ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದ ಶ್ರೀ ಸಾಯಿ ಪಬ್ಲಿಕ್ ಶಾಲೆ ವಾಲ್ಮೀಕಿನಗರ ಶಾಲೆಯಲ್ಲಿ ವಿಶೇಷವಾಗಿ ಆಚರಿಸಲಾಯಿತು.
77 ನೇ ಗಣರಾಜ್ಯೋತ್ಸವ ಪ್ರಯುಕ್ತ ಶಾಲೆಯಲ್ಲಿ ಶನಿವಾರ ಸಹಮುಖ್ಯೋಪಾಧ್ಯಾಯರಾದ ಶ್ರೀಮತಿ ಸವಿತಾ ನಾಯ್ಕ ರವರ ಸಲಹೆಯಂತೆ “Fireless Food activity” ಎಂಬ ಹೆಸರಿನ ಸ್ಪರ್ಧೆಯನ್ನು ಮಕ್ಕಳಿಗೆ ಏರ್ಪಡಿಸಲಾಗಿತ್ತು.
ಈ ಸ್ಪರ್ಧೆಯಲ್ಲಿ ವಿಶೇಷವಾಗಿ ಆಹಾರ ತಯಾರಿಸಿದ ಮಕ್ಕಳಿಗೆ ಬಹುಮಾನ ವಿತರಣೆ ಮಾಡಲಾಯಿತು.
ಹಾಗೂ ಈ ದಿನ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಚರಿಸಲಾಯಿತು. ಈ ಕಾರ್ಯಕ್ರಮದ ಘನ ಉಪಸ್ಥಿತಿ ಹಾಗೂ ಅಧ್ಯಕ್ಷತೆಯನ್ನು ಹಾಗೂ ಧ್ವಜಾರೋಹಣ ಕಾರ್ಯ ಕ್ರಮವನ್ನು ಸಂಸ್ಥೆಯ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಅಮರೇಶಪ್ಪ ಜೀನೂರ ಕಾರಟಗಿಯವರು ನೆರವೇರಿಸಿದರು.
ಮಕ್ಕಳಿಗೆ ವಿವಿಧ ರೀತಿಯ ಸ್ಪರ್ಧೆಳನ್ನು ಏರ್ಪಡಿಸಿ ಬಹುಮಾನ ವಿತರಣೆ ಮಾಡಲಾಯಿತು.
ಪಟ್ಟಣದ ತಾಲೂಕ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಲೆಯ ಮಕ್ಕಳಿಂದ ಪಥಸಂಚಲನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಹರೀಶ ನಾಯಕ , ಸಹಶಿಕ್ಷಕಿಯರಾದ ಬೀಬಿ ಫಾತಿಮಾ, ಮಂಜುನಾಥ ಮಿಟ್ಲಕೋಡ, ಮಂಜುನಾಥ ಪಾಟೀಲ್, ಶ್ರೀಮತಿ ತ್ರಿವೇಣಿ ರಾಮ್ ಜಿ, ಪಿ.ಮೇಘಶ್ರೀ , ವೆಂಕಟೇಶ ಕಂಠಿ, ಮರಿಯಮ್ಮ.ಸಿ, ರಿಯಾನಾ ಬೇಗಂ, ಸುನೀತಾ ಹಿರೇಮಠ, ರಾಜೇಶ್ವರಿ.ವಿ , ನೀಲಾ ಚಿತ್ರಗಾರ , ರೋಜಾ.ಡಿ , ಭುವನೇಶ್ವರಿ ಹಾದಿಮನಿ ಹಾಗೂ ಬೋಧಕೇತರ ಸಿಬ್ಬಂದಿಯಾದ ವೆಂಕಟೇಶ ಕಲಿಕೇರಿ, ಜುಬೇದಾಬೇಗಂ, ವಾಹನ ಚಾಲಕರಾದ ಜಡೇಶ್.ವಿ , ಭೀಮೇಶ ಕಲಿಕೇರಿ, ಹನುಮೇಶ ಗಂಗಾಮತ ಹಾಗೂ ಶಾಲೆಯ ಪಾಲಕರು ಹಾಜರಿದ್ದರು.

ವರದಿ ಹನುಮಂತಪ್ಪ ನಾಯಕ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!