ಹನೂರು:ಪ್ರತಿ ವರ್ಷದಂತೆ ಈ ವರ್ಷವು ಸಹ ಶ್ರೀ ಮಾದಪ್ಪನ ದರ್ಶನ ಮಾಡಲು ಜೆಡಿಎಸ್ ರಾಜ್ಯ ಯುವ ಅಧ್ಯಕ್ಷ ಹಾಗೂ ಚಲನಚಿತ್ರ ನಟ ನಿಖಿಲ್ ಕುಮಾರಸ್ವಾಮಿರವರು ಮಲೆ ಮಾದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಮೂಲಕ ಆಗಮಿಸುವರು ಎಂದು ರಾಜ್ಯ ಜೆ ಡಿ ಎಸ್ ಉಪಾಧ್ಯಕ್ಷರಾದ ಎಮ್ ಆರ್ ಮಂಜುನಾಥ್ ತಿಳಿಸಿದರು.
ಹನೂರು ಪಟ್ಟಣದ ಜೆ ಡಿ ಎಸ್ ಕಛೇರಿಯಲ್ಲಿ ಮಾತನಾಡಿದ ಅವರು ನಮ್ಮ ಯುವ ನಾಯಕರು ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಕೈಗೊಂಡಿರುವ ಹಿನ್ನೆಲೆಯಲ್ಲಿ ನಾಳೆ ಕ್ಷೇತ್ರಕ್ಕೆ ಆಗಮಿಸುತ್ತಿದ್ದಾರೆ ಅದ್ದರಿಂದ ತಾಲೂಕಿನ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಅವರನ್ನು ಸ್ವಾಗತಿಸಬೇಕು ಹಾಗೂ ಎಲ್ಲಾರು ಅವರ ಜೊತೆ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಕರೆ ನೀಡಿದರು.ತಾಳಪಟ್ಟಿನಿಂದ ಮಾದೇಶ್ವರ ಬೆಟ್ಟದ ವರೆಗೆ ಪಾದಯಾತ್ರೆ ಕೈಗೊಂಡಿರುವ ಸಮಯದಲ್ಲಿ ಯಾವುದೇ ರೀತಿಯ ಗೊಂದಲಕ್ಕೆ ಎಡೆಮಾಡಿಕೊಡಬಾರದು ಅದೇ ರೀತಿ ಈ ವರ್ಷ ಪಾದಯಾತ್ರೆ ಕೈಗೊಂಡಿರುವುದು ಪಕ್ಷದ ಸಂಘಟನೆ ಮತ್ತು ಕಾರ್ಯಕರ್ತರಲ್ಲಿ ಉಮ್ಮಸು ಮತ್ತು ಉತ್ಸಾಹ ಮೂಡಿಸುವಂತೆ ಆಗಿದೆ ಅಲ್ಲದೆ ಇಂದು
ಮಧ್ಯಾಹ್ನ 12 ಗಂಟೆಗೆ ಜಿಲ್ಲೆಯ ಗಡಿ ಭಾಗವಾದ ಸತ್ತಿಗಾಲ ಹ್ಯಾಂಡ್ ಪೋಸ್ಟ್ ಗೆ ಆಗಮಿಸುವ ನಿಖಿಲ್ ರವರನ್ನು ಯುವಕರು ಹಾಗೂ ಕಾರ್ಯಕರ್ತರೊಂದಿಗೆ ಬೈಕ್ ರ್ಯಾಲಿ ಮೂಲಕ ಕೊಳ್ಳೇಗಾಲ ಪಟ್ಟಣಕ್ಕೆ ಆಗಮಿಸಿ ಪಟ್ಟಣದಲ್ಲಿರುವ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪುತ್ತಳಿಗೆ ಪುಷ್ಪ ಮಾಲಿಕೆ ಅರ್ಪಿಸಿ ನಂತರ ಕೊಳ್ಳೇಗಾಲದಲ್ಲಿ ನೂತನವಾಗಿ ಜೆಡಿಎಸ್ ಕಚೇರಿಯನ್ನು ಉದ್ಘಾಟನೆ ಮಾಡಲಿದ್ದಾರೆ.
ನಂತರ ಮದುವನಹಳ್ಳಿ, ದೊಡ್ಡಿಂದವಾಡಿ, ಕಾಮಗೆರೆ, ಮಂಗಲ ಮೂಲಕ ಹನೂರು ಪಟ್ಟಣ ತಲುಪಲಿದ್ದಾರೆ. ಹನೂರು ಪಟ್ಟಣದಲ್ಲಿ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಸಭೆ ನಡೆಸಿ ನಂತರ ತಾಳುಬೆಟ್ಟಕ್ಕೆ ತೆರಳಲಿದ್ದಾರೆ.ತಾಳ್ಬೆಟ್ಟನಿಂದ ಪಾದಯಾತ್ರೆ ಮೂಲಕ ಮಹದೇಶ್ವರ ಬೆಟ್ಟ ತಲುಪಿ ಮಾದಪ್ಪನ ದರ್ಶನ ಪಡೆದು ಮರಳಿ ಬೆಂಗಳೂರಿನತ್ತ ಹೊರಡಲಿದ್ದಾರೆ ಎಂದು ಪತ್ರಕರ್ತರಿಗೆ ಮಾಹಿತಿ ನೀಡಿದರು .
ಇದೇ ಸಂದರ್ಭದಲ್ಲಿ ಜೆಡಿಎಸ್ ಮುಖಂಡರುಗಳು ಹಾಗೂ ಕಾರ್ಯಕರ್ತರು ಸೇರಿದಂತೆ ಇನ್ನಿತರರು ಹಾಜರಿದ್ದರು.
ವರದಿ ಉಸ್ಮಾನ್ ಖಾನ್
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.