ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಂಪ್ಲಿ ತಾಲ್ಲೂಕಿನಾದ್ಯಂತ ಸಡಗರ ಸಂಭ್ರಮದಿಂದ ಗಣರಾಜ್ಯೋತ್ಸವ ಆಚರಣೆ

ಕಂಪ್ಲಿ: ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ 77ನೇ ಗಣರಾಜ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಸೋಮವಾರ ಆಚರಿಸಲಾಯಿತು.
ತಾಲ್ಲೂಕಿನ ವಿವಿಧ ಶಾಲಾ, ಕಾಲೇಜುಗಳಲ್ಲಿ ರಾಷ್ಟ್ರನಾಯಕರ ಭಾವಚಿತ್ರಗಳಿಗೆ ಪೂಜೆಯನ್ನು ಸಲ್ಲಿಸಿ ಮುಖ್ಯಸ್ಥರು ಧ್ವಜಾರೋಹಣ ನೆರವೇರಿಸಿದರು.
ವಿವಿಧ ಸರ್ಕಾರಿ ಹಾಗೂ ಖಾಸಗಿ ಕಚೇರಿ ಹಾಗೂ ಸಂಘಟನೆಗಳ ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ ಕಾರ್ಯಕ್ರಮಗಳು ಸಂಭ್ರಮದಿಂದ ಜರುಗಿದವು.

ಪುರಸಭೆ: ಪಟ್ಟಣದ ಪುರಸಭೆ ಮುಖ್ಯಾಧಿಕಾರಿ ಬಿ.ಮಲ್ಲಿಕಾರ್ಜುನ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಪುರಸಭೆ ಮಾಜಿ ಸದಸ್ಯ ಟಿ.ವಿ.ಸುದರ್ಶನರೆಡ್ಡಿ, ಸಿಬ್ಬಂದಿಗಳಾದ ರಮೇಶ್ ಬೆಳಮಕರ್, ಹೊನ್ನುರುಸಾಬ್, ಜಯಲಕ್ಷ್ಮೀ, ಭರ್ಮಣ್ಣ, ಪ್ರಕಾಶಬಾಬು ಸೇರಿದಂತೆ ಇತರರು ಇದ್ದರು.

ತಹಶೀಲ್ದಾರ್ ಕಚೇರಿ: ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ತಹಶೀಲ್ದಾರ್ ಜೂಗಲ್ ಮಂಜುನಾಯಕ ತ್ರಿವರ್ಣ ಧ್ವಜಾರೋಹಣ ನೆರವೇರಿಸಿ ಸಿಬ್ಬಂದಿಗಳಿಂದ ವಂದನೆ ಸ್ವೀಕರಿಸಿ ಮಾತನಾಡಿ, ಸಿಬ್ಬಂದಿಗಳು ಸಾರ್ವಜನಿಕರಿಗೆ ಸೂಕ್ತ ಸಮಯದಲ್ಲಿ ಸರ್ಕಾರದ ಸೌಲಭ್ಯಗಳನ್ನು ಒದಗಿಸಿಕೊಡುವಲ್ಲಿ ಶ್ರಮಿಸಬೇಕು ಎಂದು ಕಿವಿಮಾತು ಹೇಳಿದರು. ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆ ಸಿಬ್ಬಂದಿಗಳು ಭಾಗವಹಿಸಿದ್ದರು.

ತಾ.ಪಂ.ಕಚೇರಿ: ಪಟ್ಟಣದ ತಾಲ್ಲೂಕು ಪಂಚಾಯತಿ ಕಚೇರಿಯಲ್ಲಿ ಆರ್.ಕೆ.ಶ್ರೀಕುಮಾರ್ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಸಹಾಯಕ ನಿರ್ದೇಶಕ ಕೆ.ಎಸ್.ಮಲ್ಲನಗೌಡ ಭಾಗವಹಿಸಿದ್ದರು. ಜಲಸಂಪನ್ಮೂಲ ಇಲಾಖೆಯ ಕಚೇರಿಯಲ್ಲಿ ಕಾರ್ಯನಿರ್ವಾಹಕ ಅಭಿಯಂತರ ಶ್ರೀನಿವಾಸ ಅಡ್ವಿ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಸಿಬ್ಬಂದಿಗಳು ಭಾಗವಹಿಸಿದ್ದರು. ಉಪನೋಂದಣಿ ಕಚೇರಿಯಲ್ಲಿ ಉಪನೋಂದಣಾಧಿಕಾರಿ ಶ್ರೀನಿವಾಸ ಧ್ವಜಾರೋಹಣ ಮಾಡಿದರು.

ಪೊಲೀಸ್ ಠಾಣೆ: ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪಿಐ ಕೆ.ಬಿ.ವಾಸುಕುಮಾರ್ ತ್ರಿವರ್ಣ ಧ್ವಜಾರೋಹಣ ನೆರವೇರಿಸಿ ಸಿಬ್ಬಂದಿಗಳಿಂದ ಧ್ವಜವಂದನೆ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಪಿ.ಎಸ್.ಐ, ಎಎಸ್‌ಐಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.

ಎಪಿಎಂಸಿ: ಪಟ್ಟಣದ ಎಪಿಎಂಸಿಯಲ್ಲಿ ಅಧ್ಯಕ್ಷ ಎನ್.ಹಬೀಬ್ ರೆಹಮಾನ್ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಎಪಿಎಂಸಿ ನಿರ್ದೇಶಕರು, ಸಿಬ್ಬಂದಿಗಳು ಭಾಗವಹಿಸಿದ್ದರು.
ಪಟ್ಟಣವೂ ಸೇರಿದಂತೆ ತಾಲ್ಲೂಕಿನ ಸರ್ಕಾರಿ, ಖಾಸಗಿ ಶಾಲೆ, ಕಾಲೇಜುಗಳಲ್ಲಿ ಗಣರಾಜ್ಯೋತ್ಸವವನ್ನು ಸಡಗರ ಸಂಭ್ರಮಗಳಿಂದ ಆಚರಣೆ ಮಾಡಿದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!