ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ದೇಶದ ಪ್ರತಿಯೊಬ್ಬರಿಗೂ ಸಂವಿಧಾನ ದಾರಿದೀಪ : ಶಾಸಕ ಜೆ.ಎನ್.ಗಣೇಶ

ಕಂಪ್ಲಿ: ದೇಶದ ಪ್ರತಿಯೊಬ್ಬ ವ್ಯಕ್ತಿ, ಪ್ರತಿಯೊಂದು ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗೆ ಸಂವಿಧಾನ ದಾರಿದೀಪವಾಗಿದೆ ಎಂದು ಶಾಸಕ ಜೆ.ಎನ್.ಗಣೇಶ ತಿಳಿಸಿದರು.
ಅವರು ಪಟ್ಟಣದ ಷಾಮಿಯಾಚಂದ್ ಸರ್ಕಾರಿ ಪಿಯು ಕಾಲೇಜ್ ಮೈದಾನದಲ್ಲಿ ತಾಲ್ಲೂಕು ಆಡಳಿತ, ತಾ.ಪಂ, ಪುರಸಭೆ, ಪೊಲೀಸ್ ಇಲಾಖೆಗಳು ಸಂಯುಕ್ತವಾಗಿ ಏರ್ಪಡಿಸಿದ್ದ ಗಣರಾಜ್ಯೋತ್ಸವದ ಸಾರ್ವಜನಿಕ ಸಮಾರಂಭದ ಅಧ್ಯಕ್ಷತೆವಹಿಸಿ ಪೊಲೀಸರು, ಗೃಹರಕ್ಷದಳ ಹಾಗೂ ವಿದ್ಯಾರ್ಥಿಗಳಿಂದ ಗೌರವ ವಂದನೆ ಸ್ವೀಕರಿಸಿ ಮಾತನಾಡಿ, ದೇಶಕ್ಕೆ ಬೆಳಕನ್ನು ಕೊಟ್ಟಿರುವ ಸಂವಿಧಾನವನ್ನು ಸ್ವೀಕರಿಸಿ ಈ ದಿನ ಅತ್ಯಂತ ಮಹತ್ತರ ದಿನವಾಗಿದೆ. ಒಬ್ಬ ಸಾಮಾನ್ಯ ವ್ಯಕ್ತಿಯೂ ಸಹಿತ ಉನ್ನತ ಹುದ್ದೆ, ರಾಜಕಾರಣಿಯಾಗಲು ಸಂವಿಧಾನ ಮೂಲ ಕಾರಣವಾಗಿದೆ. ಸ್ವತಂತ್ರ ಭಾರತಕ್ಕೊಂದು ಸದೃಢ ಸಂವಿಧಾನ ಕಟ್ಟಿಕೊಟ್ಟಿದ್ದು ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಅವರ ತಂಡವಾಗಿದೆ. ಅವರ ಅವಿರತ ಶ್ರಮ ಹಾಗೂ ಪ್ರಯತ್ನದ ಫಲವಾಗಿ ವಿಶ್ವಕ್ಕೆ ಮಾದರಿಯಾಗಿ ನಮ್ಮ ಸಂವಿಧಾನ ರೂಪುಗೊಂಡಿದೆ. ಸಮುದಾಯಗಳಲ್ಲಿ ಸಹೋದರತೆ, ಭಾವೈಕ್ಯತೆ, ಪರಧರ್ಮ ಸಹಿಷ್ಣುತೆಗಳ ಮೂಲಕ ದೇಶವನ್ನು ಬಲಪಡಿಸುವಲ್ಲಿ ಸರ್ವರೂ ಮುಂದಾಗಬೇಕು ಮತ್ತು ಸ್ವಾತಂತ್ರ‍್ಯಕ್ಕಾಗಿ ಹೋರಾಟ ಮಾಡಿದ ಮಹನೀಯರನ್ನು ಸ್ಮರಿಸಬೇಕೆಂದರು.
ತಹಶೀಲ್ದಾರ ಜೂಗಲ ಮಂಜುನಾಯಕ ಇವರು ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆಯ ಆಧಾರದ ಮೇಲೆ ನಿಂತ ಜಗತ್ತಿನ ಅತ್ಯಂತ ಬಲಿಷ್ಠ ರಾಷ್ಟ್ರ ನಮ್ಮದು. ಭವಿಷ್ಯದ ಭಾರತವನ್ನು ರೂಪಿಸುವುದು ಪ್ರಜಾಪ್ರಭುತ್ವದ ಆಶಯವಾಗಿದೆ. ಭಾರತವು ಸ್ವತಂತ್ರ‍್ಯವಾಗಲು ಹಲವರು ಕಂಡ ಕನಸು ಸಂವಿಧಾನದಿಂದ ನನಸಾಗಿದೆ. ವೈವಿದ್ಯತೆಯಲ್ಲಿ ಏಕತೆಯನ್ನುವುದಕ್ಕೆ ಭಾರತವೊಂದು ಜ್ವಲಂತ ಉದಾಹರಣೆಯಾಗಿದೆ. ಭಾರತವು ಕಳೆದ 77 ವರ್ಷಗಳಲ್ಲಿ ಬಹುತೇಕ ಕ್ಷೇತ್ರಗಳಲ್ಲಿ ಸ್ವಾವಲಂಬನೆಯನ್ನು ಸಾಧಿಸಿದೆ. ಜಗತ್ತಿನಲ್ಲಿಯೇ ಭಾರತವು ಅತ್ಯಂತ ವೇಗವಾಗಿ ಬೆಳೆಯುತ್ತಿರುವ ದೇಶವಾಗಿ. ಭಾರತವೂ ಕೆಲವೇ ದಿನಗಳಲ್ಲಿ ಜಗತ್ತಿನ ಮೂರನೇ ಆರ್ಥಿಕ ಶಕ್ತಿಯಾಗಲಿದೆ ಎಂದರು. ಸ್ವಚ್ಚ ಭಾರತಕ್ಕಾಗಿ ಎಲ್ಲರೂ ಪ್ರತಿಜ್ಞಾವಿಧಿ ಸ್ವೀಕರಿಸಿದರು.
ಶಾಸಕ ಜೆ.ಎನ್.ಗಣೇಶ್, ತಹಶೀಲ್ದಾರ್ ಜೂಗಲ್ ಮಂಜುನಾಯಕ ಮತ್ತು ಪಿಐ ಕೆ.ಬಿ.ವಾಸುಕುಮಾರ್ ಅಲಂಕೃತ ತೆರೆದ ವಾಹನದಲ್ಲಿ ಪೊಲೀಸ್, ಗೃಹರಕ್ಷಕದಳ, ವಿವಿದ ಶಾಲೆಗಳ ವಿದ್ಯಾರ್ಥಿಗಳ ಪಥ ಸಂಚಲನ ವೀಕ್ಷಿಸಿದರು. ನಂತರ ಧ್ವಜವಂದನೆ ಸ್ವೀಕರಿಸಿದರು.
ಕಾರ್ಯಕ್ರಮದ ವೇದಿಕೆಯಲ್ಲಿ ಎಪಿಎಂಸಿ ಅಧ್ಯಕ್ಷ ಎನ್.ಹಬೀಬ್ ರೆಹಮಾನ್, ತಾ.ಪಂ ಇಒ ಆರ್.ಕೆ.ಶ್ರೀಕುಮಾರ್, ಪಿಐ ಕೆ.ಬಿ.ವಾಸುಕಮಾರ್, ಸಹಾಯಕ ನಿರ್ದೇಶಕ ಕೆ.ಎಸ್.ಮಲ್ಲನಗೌಡ, ಪುರಸಭೆ ಮುಖ್ಯಾಧಿಕಾರಿ ಬಿ.ಮಲ್ಲಿಕಾರ್ಜುನ, ಮುಖಂಡರಾದ ಅರವಿ ಬಸವನಗೌಡ, ಕೆ.ಶ್ರೀನಿವಾಸರಾವ್ ಸೇರಿದಂತೆ ಇತರರು ಇದ್ದರು. ನಂತರ ವಿವಿಧ ಶಾಲೆಗಳ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!