ಶಿವಮೊಗ್ಗ : ನಗರದ ನೆಹರೂ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಆಯೋಜಿಸಿದ ಸಾಮೂಹಿಕ ನೃತ್ಯ ಸ್ಪರ್ಧೆಯಲ್ಲಿ ರಾಮಕೃಷ್ಣ ವಿದ್ಯಾನಿಕೇತನ ಸಂಸ್ಥೆ ದ್ವಿತೀಯ ಬಹುಮಾನ ಪಡೆದಿದ್ದು ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಮಧು ಬಂಗಾರಪ್ಪ ಅವರು ಬಹುಮಾನ ವಿತರಿಸಿ ಹಾಡು ಹಾಗೂ ನೃತ್ಯದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಶಾಸಕ ಚನ್ನಬಸಪ್ಪ ಹೇಳಿದಂತೆ ವಿವಿಧ ಗಣ್ಯರು ಉಪಸ್ಥಿತರಿದ್ದರು. ಸಂಸ್ಥೆಯ ಕಾರ್ಯದರ್ಶಿ ಶೋಭಾ ವೆಂಕಟರಮಣ ಅವರು ಮಕ್ಕಳ ಸಾಧನೆಗೆ ಪ್ರಶಂಸೆ ವ್ಯಕ್ತಪಡಿಸಿದರು.
ವರದಿ: ಕೊಡಕ್ಕಲ್ ಶಿವಪ್ರಸಾದ್




















