ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮುಗಳಖೋಡದಲ್ಲಿ ಗ್ರಾಮದೇವತಾ ಆರಾಧನೆ – ಜನಪದ ಸಂಸ್ಕೃತಿ ಸಂಭ್ರಮ

ಬಾಗಲಕೋಟೆ/ ಮುಧೋಳ ತಾಲೂಕಿನ ಸುಕ್ಷೇತ್ರ ಮುಗಳಖೋಡದಲ್ಲಿ ಶ್ರೀ ಮನ್ ನಿಜಗುಣ ಶಿವಯೋಗಿ ರಾಷ್ಟ್ರೀಯ ಪ್ರತಿಷ್ಠಾನ [ರಿ.] ಶ್ರೀ ಸಿದ್ಧಾರೂಢ ಭಾರತಿ ಆಶ್ರಮದಲ್ಲಿ ವಾರಾಚರಣೆ ನಿಮಿತ್ಯ ಗ್ರಾಮದೇವತಾ ಆರಾಧನೆ, ಶ್ರೀದೇವಿ ಪಾರಾಯಣ -ಪುರಾಣ ಕಾರ್ಯಕ್ರಮವು ಇದೇ ಜನವರಿ ದಿ .30 ಶುಕ್ರವಾರ ಬೆಳಿಗ್ಗೆ 8.30 ಕ್ಕೆ ಪ್ರಾರಂಭಗೊಳ್ಳಲಿದೆ ಎಂದು ಶ್ರೀ ಸಿದ್ಧಾರೂಢ ಭಾರತಿ ಆಶ್ರಮದ ಕುಮಾರ ಗುರುಪ್ರಸಾದ್ ಸ್ವಾಮೀಜಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫೆಬ್ರವರಿ ದಿ .6 ಶುಕ್ರವಾರದ ವರೆಗೆ ನಡೆಯುವ ಗ್ರಾಮದೇವತಾ ಆರಾಧನೆ – ಶ್ರೀದೇವಿ ಪುರಾಣ-ಪ್ರವಚನವು ಆಶ್ರಮದ ಪೂಜ್ಯರಾದ ಶರಣಬಸವ ಶಾಸ್ತ್ರಿಗಳಿಂದ ಪ್ರತಿದಿನ ಬೆಳಗ್ಗೆ 6 ರಿಂದ 7 ರ ವರೆಗೆ ಹಾಗೂ ಸಂಜೆ 8 ರಿಂದ 9 ರ ವರೆಗೆ ನಡೆಯಲಿದೆ.
ಫೆಬ್ರುವರಿ 6 ಶುಕ್ರವಾರ ಬೆಳಗ್ಗೆ 8.30 ಕ್ಕೆ ನವದುಗಿ೯ಯರಿಗೆ ಉಡಿ ತುಂಬುವುದು, ಸೇವಾ ಧುರೀಣರಿಗೆ ಸತ್ಕಾರ ನಂತರ ವಿವಿಧ ಗ್ರಾಮಗಳ ವಿವಿಧ ಕಲಾತಂಡಗಳಿಂದ ಜನಪದ ಸಂಸ್ಕೃತಿ ಸಂಭ್ರಮ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗುವವು, ಭಾಗವಹಿಸಿದ ಕಲಾ ತಂಡಗಳನ್ನು ಗೌರವಿಸಿ ಪ್ರಶಸ್ತಿ ಪತ್ರಗಳನ್ನು ನೀಡಲಾಗುವುದು.

ಹೆಚ್ಚಿನ ಮಾಹಿತಿಗೆ 9972682938/9742915714
ಈ ಸಂಖ್ಯೆಗೆ ಸಂಪರ್ಕಿಸಲು ತಿಳಿಸಿದ್ದಾರೆ.

  • ಕರುನಾಡ ಕಂದ ಪತ್ರಿಕೆ.
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!