ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬಂಗಾರದ ಪದಕ ಯೋಗ ಸಾಧಕಿ ಕಂಪ್ಲಿ ಎಸ್ ಪೂಜಾಗೆ ಸಚಿವರಿಂದ ಸನ್ಮಾನ

ಕಂಪ್ಲಿ : ಬಳ್ಳಾರಿಯ ಬಿ.ಎಂ.ಸಿ.ಆರ್.ಸಿ ಮೈದಾನದಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ ಸೋಮವಾರ ನಡೆಯಿತು ಗಣರಾಜ್ಯೋತ್ಸವವನ್ನು ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂಖಾನ್ ಧ್ವಜಾರೋಹಣವನ್ನು ನೆರವೇರಿಸಿದರು. ಗಣರಾಜ್ಯೋತ್ಸವ ಅಂಗವಾಗಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಗೈದ ಸಾಧಕರಿಗೆ ಸನ್ಮಾನಿಸಿದರು. ಗಣರಾಜ್ಯೋತ್ಸವದಲ್ಲಿ ಮೈಸೂರು ದಸರಾ ಉತ್ಸವ ಮತ್ತು ಕಲಬುರ್ಗಿ ವಿಭಾಗ ಮಟ್ಟದಲ್ಲಿ ಯೋಗದಲ್ಲಿ ಪ್ರಥಮ ಸ್ಥಾನ ಜೊತೆಗೆ ಬಂಗಾರ ಪದಕ ಪಡೆದ ಯೋಗ ಸಾಧಕಿ ಕಂಪ್ಲಿಯ ಎಸ್ ಪೂಜಾ 7ನೇತರಗತಿ ಎ.ಪಿ.ಜಿ.ಅಬ್ದುಲ್ ಕಲಾಂ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಎಸ್ ಪೂಜಾರವರನ್ನು ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂಖಾನ್ ಮತ್ತು ಲೋಕಸಭೆ ಸಂಸದರಾದ ಈ ತುಕಾರಾಮ್ ಪ್ರಮಾಣ ಪತ್ರ ನೀಡಿ ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಮಹಾಪೌರ ಮಹಾನಗರ ಪಾಲಿಕೆ ಪಿ ಗಾದೆಪ್ಪ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಅಧಿಕಾರಿ ಹೆಚ್ ಲಕ್ಷ್ಮಣ, ಡಾ ಬಾಬು ಜಗಜೀವನರಾಮ ಚರ್ಮ ಕೈಗಾರಿಕೆ ಅಭಿವೃದ್ದಿ ನಿಗಮದ ಅಧ್ಯಕ್ಷ ಮುಂಡರಗಿ ನಾಗಾರಾಜ, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ, ಪೋಲಿಸ್ ಮಹಾ ನಿರೀಕ್ಷಕರು ಡಾ.ಪಿ.ಹರ್ಷ, ಜಿಲ್ಲಾ ಪಂಚಾಯಿತಿ ಸಿ.ಓ ಮಹಮ್ಮದ್ ಹ್ಯಾರಿಸ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಸೇರಿ ಅನೇಕ ಎಲ್ಲಾ ಇಲಾಖೆಯ ಅಧಿಕಾರಿಗಳು ಇದ್ದರು ಶಾಲೆಯ ಮುಖ್ಯ ಗುರುಗಳು ಮತ್ತು ಸಹಶಿಕ್ಷಕರು ಮತ್ತು ಕುಟುಂಬದವರು ಹರ್ಷ ವ್ಯಕ್ತ ಪಡಿಸಿದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!