ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಂಘಟನೆ ಮೂಲಕ ಸಾರ್ವಜನಿಕರಿಗೆ ಸರ್ಕಾರದ ಸೌಲಭ್ಯ ತಲುಪಿಸಲು ಮುಂದಾಗಿ : ಅಧ್ಯಕ್ಷ ಧನಂಜಯ

ಬಳ್ಳಾರಿ / ಕಂಪ್ಲಿ : ತಾಲೂಕಿನ ಸುಗ್ಗೇನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಶ್ರೀ ರಾಮರಂಗಪುರ ಗ್ರಾಮದಲ್ಲಿ ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆಯ ಸಭೆ ನಡೆಯಿತು. ಈ ಸಭೆಯಲ್ಲಿ ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಧನಂಜಯ ಅಧ್ಯಕ್ಷತೆ ವಹಿಸಿ ಮಾತನಾಡಿ ಸಂಘಟನೆ ಮೂಲಕ ಸಾರ್ವಜನಿಕರಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸಿ ಜೊತೆಗೆ ಸಂಘಟನೆ ಬಲ ಪಡಿಸಲು ಮುಂದಾಗಬೇಕು ಎಂದರು.
ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ ಶ್ರೀರಾಮರಂಗಪುರದ ಗ್ರಾಮ ಘಟಕ ಅಧ್ಯಕ್ಷರಾಗಿ ಮೋಹನ್ ರಾಜ್ ಗೌರವ ಅಧ್ಯಕ್ಷರಾಗಿ ಸತ್ಯನಾರಾಯಣ ವೀರಾಂಜಿನೇಯಲು ಉಪಾಧ್ಯಕ್ಷರಾಗಿ ಶ್ರೀನಿವಾಸ ಎರ‍್ರೀಸ್ವಾಮಿ ಪ್ರಧಾನ ಕಾರ್ಯದರ್ಶಿಯಾಗಿ ಸಣ್ಣ ವೀರೇಶ ಸಂಘಟನಾ ಕಾರ್ಯದರ್ಶಿಯಾಗಿ ನವೀನ್‌ಕುಮಾರ್, ಪದಾಧಿಕಾರಿಗಳಾಗಿ ಆಶೋಕ್ ಪವನ್‌ಕುಮಾರ್ ಗಂಗಾಧರ್ ಗುರುಪ್ರಸಾದ್ ಸದಸ್ಯರಾದ ಶ್ರೀಕಾಂತ ಸುರೇಶ ಶಿವಶಂಕರ್ ತರುಣ್ ಬಸವ ಶಾಂತರಾಜ್ ರಂಗಸ್ವಾಮಿ ಗೋಪಿ ಅಶೋಕ್ ಮಂಜು, ಶೇಕ್ಷಾವಲಿ, ಓಬಳೇಶ ನಾಗರಾಜ, ನಾಗೇಂದ್ರ, ಉದಯಕುಮಾರ, ರಾಜೇಂದ್ರ ಆಯ್ಕೆಯಾದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷ ಓಬಳೇಶ, ಸಂಘಟನಾ ಕಾರ್ಯದರ್ಶಿ ರಾಕೇಶ್ ವೀರಾಂಜಿನೇಯಲು ಗೌರವ ಅಧ್ಯಕ್ಷ ಜಯಣ್ಣ ಸೇರಿ ಅನೇಕರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!