ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಆರೋಗ್ಯ ತಪಾಸಣೆ ಶಿಬಿರ

ಬಳ್ಳಾರಿ / ಕುರುಗೋಡು : ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಬಳ್ಳಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಪಂಚಾಯತ್ ಕಾರ್ಯಾಲಯ ಕುರುಗೋಡು. ತಾಲೂಕ ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಸಮುದಾಯ ಆರೋಗ್ಯ ಕೇಂದ್ರ, ಗ್ರಾಮ ಪಂಚಾಯಿತಿ ಬಾದನಹಟ್ಟಿ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಬಾದನಹಟ್ಟಿ ಇವರ ಸಂಯುಕ್ತಾಶ್ರಯದಲ್ಲಿ ಆರೋಗ್ಯ ತಪಾಸಣೆ ಶಿಬಿರ ಆರೋಗ್ಯದ ನಡಿಗೆ ಜನರ ಬಳಿಗೆ ಎಂಬ ಧ್ಯೇಯ ವಾಕ್ಯದೊಂದಿಗೆ ಬುಧವಾರರಂದು ಬಾದನಹಟ್ಟಿ ಉಪ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಈ ಶಿಬಿರದಲ್ಲಿ ತಾಲೂಕು ಆರೋಗ್ಯ ಅಧಿಕಾರಿಗಳಾದಂತಹ ಡಾ. ಮಂಜುನಾಥ ಜವಳಿ ಅವರು ಉದ್ಘಾಟಿಸಿ ಮಾತನಾಡಿ ಅಸಾಂಕ್ರಾಮಿಕ ರೋಗಗಳ ಬಗ್ಗೆ, ರೋಗದಿಂದ ಹೇಗೆ ನಮ್ಮನ್ನು ರಕ್ಷಿಸಿಕೊಳ್ಳುವುದು ಎಂಬದರ ಬಗ್ಗೆ ಮಾಹಿತಿ ನೀಡಿದರು.
75 ಕ್ಕೂ ಜನರ ( ಹದಿಹರೆಯದವರು, ಗರ್ಭಿಣಿಯರು, ಚಿಕ್ಕ ಮಕ್ಕಳು, ಮಹಿಳೆಯರು, ಹಿರಿಯರು, ವೃದ್ಧರು, ಮುಂತಾದ) ಆರೋಗ್ಯ ತಪಾಸಣೆ ಮತ್ತು ಔಷಧಿಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ನಮ್ಮ ಕ್ಲಿನಿಕ್ ನ ವೈದ್ಯಾಧಿಕಾರಿಗಳಾದ ಡಾಕ್ಟರ್ ಸುನಿಲ್ ನೇತ್ರಾಧಿಕಾರಿಗಳಾದ ಪಲ್ಲವಿ ಹಾಗೂ ಸಮುದಾಯ ಆರೋಗ್ಯ ಅಧಿಕಾರಿ ಸೈಯದ್ ಸುಲ್ತಾನ ಮತ್ತು ಪ್ರಾಥಮಿಕ ಆರೋಗ್ಯ ಸುರಕ್ಷಣಾ ಅಧಿಕಾರಿಗಳಾದ ಜಯಶ್ರೀ ಗ್ರಾಮ ಪಂಚಾಯತಿಯ ಅಧಿಕಾರಿಗಳು, ಅಧ್ಯಕ್ಷರು, ಉಪಾಧ್ಯಕ್ಷರು ಸರ್ವ ಸದಸ್ಯರು ಊರಿನ ಹಿರಿಯ ಮುಖಂಡರು NCD ಸಿಬ್ಬಂದಿಗಳು ಮತ್ತು ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!