ಬೆಂಗಳೂರು: ಹಿರಿಯ ಐಎಎಸ್ ಅಧಿಕಾರಿ ಶ್ರೀ ಮಹಾಂತೇಶ್ ಬೀಳಗಿ ಅವರು ಸೇವೆಯಲ್ಲಿರುವಾಗಲೇ ನಿಧನ ಹೊಂದಿದ ಹಿನ್ನೆಲೆಯಲ್ಲಿ ಅವರ ಪುತ್ರಿ ಚೈತನ್ಯಾ ಎಮ್.ಬೀಳಗಿ ಅವರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗದ ನೇಮಕಾತಿ ಪತ್ರವನ್ನು ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಶ್ರೀ ಎಸ್. ಸಿದ್ದರಾಮಯ್ಯ ಅವರು ಇಂದು ಹಸ್ತಾಂತರಿಸಿ, ತಂದೆಯಂತೆಯೇ ಸಮಾಜಮುಖಿಯಾಗಿ ಕರ್ತವ್ಯ ನಿರ್ವಹಿಸುವಂತೆ ಶುಭ ಕೋರಿದರು.
ಈ ಸಂದರ್ಭದಲ್ಲಿ ಸಚಿವರಾದ ಹೆಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್, ಶಿವಾನಂದ ಪಾಟೀಲ್, ಕಾಂಗ್ರೆಸ್ ಪಕ್ಷದ ಮುಖ್ಯ ಸಚೇತಕರಾದ ಅಶೋಕ್ ಪಟ್ಟಣ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಉಪಸ್ಥಿತರಿದ್ದರು.
ವರದಿ: ಕೊಡಕ್ಕಲ್ ಶಿವಪ್ರಸಾದ್



















