ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮತದಾನದಿಂದ ಯಾರೂ ವಂಚಿತರಾಗಬಾರದು – ಎಸ್‌ಐಆರ್ ಮ್ಯಾಪಿಂಗ್‌ಗಾಗಿ ಎಸ್‌ಡಿಪಿಐ ಸಹಾಯ ಕೇಂದ್ರ ಆರಂಭ

ಬಳ್ಳಾರಿ / ಕಂಪ್ಲಿ : ಮತದಾನದಿಂದ ಯಾರೂ ವಂಚಿತರಾಗಬಾರದು ಎಂಬ ಡಾ. ಬಿ.ಆರ್. ಅಂಬೇಡ್ಕರ್ ಅವರ ಆಶಯವನ್ನು ಸಾಕಾರಗೊಳಿಸುವ ಉದ್ದೇಶದಿಂದ ಎಸ್‌ಐಆರ್ (ವಿಶೇಷ ತೀವ್ರ ಪರಿಷ್ಕರಣೆ) ಮ್ಯಾಪಿಂಗ್ ಕಾರ್ಯಕ್ಕೆ ನೆರವು ನೀಡಲು ಎಸ್‌ಡಿಪಿಐ (ಸೋಷಿಯಲ್ ಡೆಮೋಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ) ವತಿಯಿಂದ ಸಹಾಯ ಕೇಂದ್ರವನ್ನು ಆರಂಭಿಸಲಾಗಿದೆ ಎಂದು ಎಸ್‌ಡಿಪಿಐ ಕ್ಷೇತ್ರ ಉಪಾಧ್ಯಕ್ಷ ಮಹಮ್ಮದ್ ರಫಿಕ್ ಹೇಳಿದರು.

ಪಟ್ಟಣದ 2ನೇ ವಾರ್ಡ್‌ನ ಉರ್ದು ಸ. ಹಿ. ಪ್ರಾ. ಶಾಲೆ ಬಳಿ ಭಾನುವಾರ ಎಸ್‌ಐಆರ್ ಮ್ಯಾಪಿಂಗ್ ಸಹಾಯ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಡಾ. ಅಂಬೇಡ್ಕರ್ ಆಶಯದಂತೆ ಯಾರೂ ಮತದಾನದಿಂದ ವಂಚಿತರಾಗಬಾರದು ಎಂದರು. ದೇಶದ ವಿವಿಧ ಭಾಗಗಳಲ್ಲಿ ಎಸ್‌ಐಆರ್ ಮ್ಯಾಪಿಂಗ್ ಕಾರ್ಯದಲ್ಲಿ ಬಿಎಲ್‌ಒಗಳು ಒತ್ತಡಕ್ಕೆ ಒಳಗಾಗಿ ಆತ್ಮಹತ್ಯೆ ಹಾಗೂ ಅನಾರೋಗ್ಯಕ್ಕೆ ಒಳಗಾದ ಘಟನೆಗಳು ನಡೆದಿರುವುದನ್ನು ಗಮನಿಸಿ, ಪಟ್ಟಣದ 23 ವಾರ್ಡ್‌ಗಳ ಬಿಎಲ್‌ಒಗಳಿಗೆ ಮ್ಯಾಪಿಂಗ್ ಕಾರ್ಯದಲ್ಲಿ ನೆರವು ನೀಡಲು ಈ ಸಹಾಯ ಕೇಂದ್ರವನ್ನು ತೆರೆಯಲಾಗಿದೆ ಎಂದು ತಿಳಿಸಿದರು.

2002 ಮತ್ತು 2025ರ ಮತದಾರ ಪಟ್ಟಿಗಳನ್ನು ಹೋಲಿಕೆ ಮಾಡಿ, 2002ರ ಪಟ್ಟಿಯಲ್ಲಿರುವ ಮತದಾರರ ತಂದೆ–ತಾಯಿಗಳ ಹೆಸರುಗಳನ್ನು 2025ರ ಪಟ್ಟಿಯ ಮಕ್ಕಳಿಗೆ ಸೇರಿಸುವ ಕಾರ್ಯ ನಡೆಯಲಿದೆ. ಬಹುತೇಕ ಮತದಾರರ ಬಳಿ ಮತದಾರ ಗುರುತಿನ ಚೀಟಿ ಇದ್ದರೂ ಮತದಾರ ಪಟ್ಟಿಯಲ್ಲಿ ಹೆಸರುಗಳಿಲ್ಲದಿರುವುದು ಕಂಡುಬಂದಿದೆ. ಆದ್ದರಿಂದ ಯಾವುದೇ ಮತದಾರರ ಹೆಸರು ಪಟ್ಟಿಯಿಂದ ಬಿಟ್ಟು ಹೋಗದಂತೆ ಜಾಗೃತಿ ವಹಿಸುವುದು ಅಗತ್ಯವಾಗಿದೆ. ಎಸ್‌ಐಆರ್ ಮ್ಯಾಪಿಂಗ್ ಕಾರ್ಯಕ್ಕೆ ಮತದಾರರ ಸಹಕಾರ ಅತ್ಯಗತ್ಯವಾಗಿದೆ ಎಂದು ಮನವಿ ಮಾಡಿದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!