ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

2026-27ನೇ ಸಾಲಿನ ಕೇಂದ್ರ ಬಜೆಟ್ ವಿಕಸಿತ ಭಾರತದ ದೂರದೃಷ್ಟಿ ಬಜೆಟ್ ಆಗಿದೆ :ರಾಜ್ಯ ಬಿಜೆಪಿ ಮಾಧ್ಯಮ ಸಮಿತಿ ಸದಸ್ಯ ಎಫ್.ಎಸ್.ಸಿದ್ದನಗೌಡರ

ಬೈಲಹೊಂಗಲ: ​ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿ ಮಂಡಿಸಿರುವ 2026-27ನೇ ಸಾಲಿನ ಕೇಂದ್ರ ಬಜೆಟ್ ವಿಕಸಿತ ಭಾರತದ ದೂರದೃಷ್ಟಿ ಬಜೆಟ್ ಆಗಿದ್ದು ದಿನದಲಿತರ, ಮಹಿಳಾ‌ ಸಬಲಿಕರಣ ಕೃಷಿ, ಕೈಗಾರಿಕಾ ಹಾಗೂ ರಾಷ್ಟ್ರಾಭಿವೃದ್ದ ಪರವಾದ ಬಜೆಟವಾಗಿದೆ ಎಂದು ರಾಜ್ಯ ಬಿಜೆಪಿ ಮಾಧ್ಯಮ ಸಮಿತಿ ಸದಸ್ಯ ಎಫ್.ಎಸ್.ಸಿದ್ದನಗೌಡರ ಹೇಳಿದರು.
ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ ಅವರು, ಐತಿಹಾಸಿಕ 9ನೇ ಬಾರಿಗೆ ಬಜೆಟ್ ಮಂಡಿಸುವ ಮೂಲಕ ದೇಶದ ಆರ್ಥಿಕ ಇತಿಹಾಸದಲ್ಲಿ ನಿರ್ಮಲಾ ಸೀತಾರಾಮನ್ ಹೊಸ ದಾಖಲೆ ಬರೆದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರದ ಸ್ಥಿರ ಆರ್ಥಿಕ ನೀತಿಗಳ ಮುಂದುವರಿಕೆ ಈ ಬಜೆಟ್‌ನಲ್ಲಿದ್ದು 2047ರ ವೇಳೆಗೆ ಭಾರತವನ್ನು ‘ವಿಕಸಿತ ರಾಷ್ಟ್ರ’ವನ್ನಾಗಿ ಮಾಡುವ ಭದ್ರ ಬುನಾದಿಯಾಗಿದೆ.
ಕೃಷಿ ಮತ್ತು ಗ್ರಾಮೀಣಾಭಿವೃದ್ಧಿಗೆ ಹೊಸ ಚೈತನ್ಯ ನೀಡಿದೆ. ವಿಶೇಷವಾಗಿ ರೈತರ ಆದಾಯ ಹೆಚ್ಚಿಸಲು ಅಧಿಕ ಮೌಲ್ಯದ ಬೆಳೆಗಳಿಗೆ ವಿಶೇಷ ಆದ್ಯತೆ, ವಾಣಿಜ್ಯ ಬೆಳೆಗಳಾದ ತೆಂಗು, ಶ್ರೀಗಂಧ, ಗೋಡಂಬಿ ಮತ್ತು ಕೋಕೋ ಬೆಳೆಗಳ ಅಭಿವೃದ್ಧಿಗೆ ವಿಶೇಷ ಅನುದಾನ ಮೀಸಲಿಟ್ಟಿರುವುದು ರೈತರ ಪಾಲಿಗೆ ಆಶಾದಾಯಕವಾಗಿದೆ. ಪಶು ವೈದ್ಯಕೀಯ ಕ್ಷೇತ್ರಕ್ಕೆ ಆದ್ಯತೆ ಮತ್ತು ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ಯ ಯೋಜನೆ’ಯನ್ನು ಜಾರಿಗೆ ತಂದಿರುವುದು ಗ್ರಾಮೀಣ ಭಾರತದ ಆರ್ಥಿಕ ಚಿತ್ರಣವನ್ನೇ ಬದಲಿಸಲಿದೆ.
ಯುವಶಕ್ತಿಯ ಸಬಲೀಕರಣಕ್ಕೆ ಅಗತ್ಯಕ್ಕೆ ತಕ್ಕಂತೆ ಆಧುನಿಕ ಉದ್ಯೋಗ ಸೃಷ್ಟಿಗೆ ಪೂರಕವಾದ ಯೋಜನೆಗಳನ್ನು ಘೋಷಿಸಲಾಗಿದೆ.
ಸಣ್ಣ ನಗರಗಳನ್ನು ಗಮನದಲ್ಲಿರಿಸಿ ‘ಅಮೃತ ಯೋಜನೆ’ಯು ಪ್ರಾದೇಶಿಕ ಸಮತೋಲನಕ್ಕೆ ಹೆಚ್ಚಿನ ಶಕ್ತಿ ನೀಡಲಿದೆ. ಮತ್ಸ್ಯ ಉದ್ಯಮಕ್ಕೆ ಹೆಚ್ಚಿನ ಉತ್ತೇಜನ ನೀಡಿರುವುದು ಹಾಗೂ ಪರಿಸರ ಸಮತೋಲನವನ್ನು ಕಾಯ್ದುಕೊಳ್ಳುವ ದೃಷ್ಟಿಯಿಂದ ಘೋಷಿಸಲಾದ ‘ಆಮೆ ಕಾರಿಡಾರ್’ ಯೋಜನೆ ನಿಸರ್ಗದತ್ತ ಸಂಪತ್ತಿನ ರಕ್ಷಣೆಗೆ ಪೂರಕವಾಗಿದೆ.
ಕ್ರೀಡಾ ವಲಯಕ್ಕೆ ಹೆಚ್ಚಿನ ಆದ್ಯತೆ
​ಹೊಸ ಆದಾಯ ತೆರಿಗೆ ನೀತಿಯು ಮಧ್ಯಮ ವರ್ಗದವರಿಗೆ ನೆಮ್ಮದಿ ನೀಡಿದ್ದರೆ, ಆರೋಗ್ಯ ಕ್ಷೇತ್ರದಲ್ಲಿ ಕ್ಯಾನ್ಸರ್ ಸೇರಿದಂತೆ ಏಳು ಪ್ರಮುಖ ರೋಗಗಳ ಔಷಧಿಗಳನ್ನು ಅಗ್ಗಗೊಳಿಸಿರುವುದು ಶ್ಲಾಘನೀಯ. ಅಪಘಾತ ವಿಮೆ ಮೊತ್ತಕ್ಕೆ ತೆರಿಗೆ ವಿನಾಯಿತಿ ನೀಡುವ ಮೂಲಕ ಜನಸಾಮಾನ್ಯರ ಸಂಕಷ್ಟಕ್ಕೆ ಸ್ಪಂದಿಸಲಾಗಿದೆ.
ವಿಶೇಷವಾಗಿ ಮಹಿಳಾ ಸಬಲೀಕರಣಕ್ಕೆ ಬಜೆಟ್‌ನಲ್ಲಿ ಘೋಷಿಸಲಾದ ವಿಶೇಷ ಯೋಜನೆಗಳು ಹಾಗೂ ಪ್ರತಿ ಜಿಲ್ಲೆಯಲ್ಲೂ ವಿದ್ಯಾರ್ಥಿನಿಯರಿಗಾಗಿ ವಸತಿ ನಿಲಯಗಳ ನಿರ್ಮಾಣದ ನಿರ್ಧಾರವು ಸ್ತ್ರೀ ಶಿಕ್ಷಣ ಮತ್ತು ಪ್ರಗತಿಗೆ ದೊಡ್ಡ ಬಲ ತುಂಬಲಿದೆ. ಮೆಡಿಕಲ್ ಟೂರಿಸಂ, ಆಯುರ್ವೇದ, ಸಾಂಸ್ಕೃತಿಕ ಪ್ರವಾಸೋದ್ಯಮ ಮತ್ತು ಕರ್ನಾಟಕದ ಕರಾವಳಿ ಭಾಗದ ಪ್ರವಾಸೋದ್ಯಮಕ್ಕೆ ನೀಡಿರುವ ವಿಶೇಷ ಒತ್ತು ನಮ್ಮ ರಾಜ್ಯದ ಪ್ರಗತಿಗೆ ವೇಗ ನೀಡಲಿದೆ. ದಿವ್ಯಾಂಗರಿಗಾಗಿ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳು ಈ ಬಜೆಟ್‌ನ ಮಾನವೀಯ ಮುಖವನ್ನು ಪರಿಚಯಿಸಿವೆ.

ಸಮಾಜದ ಕಟ್ಟಕಡೆಯ ವ್ಯಕ್ತಿಯ ಏಳಿಗೆಯನ್ನು ಗಮನದಲ್ಲಿಟ್ಟುಕೊಂಡು ರೂಪಿಸಲಾದ ಈ ಬಜೆಟ್ ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ ಮಂತ್ರಕ್ಕೆ ಹಿಡಿದ ಕನ್ನಡಿಯಾಗಿದೆ. ಇಂತಹ ಅಭೂತಪೂರ್ವ ಬಜೆಟ್ ಮಂಡಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಸಮಸ್ತ ಜನರ ಪರವಾಗಿ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದಿದ್ದಾರೆ.

ವರದಿ ಮಂಜು ಎಂ. ಚಿಕ್ಕಣ್ಣವರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!