ಶಿವಮೊಗ್ಗ: ಸಾಫ್ಟ್ವೇರ್ ಸೇವೆಗಳು ಮತ್ತು AI ಆಧಾರಿತ ಉತ್ಪನ್ನಗಳಲ್ಲಿ ಕಾರ್ಯನಿರ್ವಹಿಸುತ್ತಿರುವ CREO IT Private Limited ಸಂಸ್ಥೆಯು ಶಿವಮೊಗ್ಗದಲ್ಲಿ ತನ್ನ ಹೊಸ ಕಚೇರಿಯನ್ನು ಆರಂಭಿಸಿದೆ. ಸಂಸ್ಥೆಗೆ ಈಗಾಗಲೇ ಬೆಂಗಳೂರು ಮತ್ತು ಮಧುರೈ ನಗರಗಳಲ್ಲಿ ಕಚೇರಿಗಳು ಕಾರ್ಯ ನಿರ್ವಹಿಸುತ್ತಿವೆ.
ಶಿವಮೊಗ್ಗದಲ್ಲಿ ಆರಂಭಿಸಲಾಗುವ ಹೊಸ ಕಚೇರಿಯ ಮೂಲಕ ಕೃತಕ ಬುದ್ಧಿಮತ್ತೆ (AI), ವೆಬ್ ಮತ್ತು ಮೊಬೈಲ್ ತಂತ್ರಜ್ಞಾನ ಆಧಾರಿತ ಪರಿಹಾರಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ. ಇದರಿಂದ ಸ್ಥಳೀಯ ಪ್ರತಿಭೆಗಳಿಗೆ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ. ಶಿವಮೊಗ್ಗದ ತಂತ್ರಜ್ಞಾನ ಮತ್ತು ಆರ್ಥಿಕ ಅಭಿವೃದ್ಧಿಗೆ ಇದು ಸಹಕಾರಿಯಾಗಲಿದೆ ಎಂದು ಸಂಸ್ಥೆ ಪ್ರಕಟಣೆ ತಿಳಿಸಿದೆ.
ವರದಿ: ಕೊಡಕ್ಕಲ್ ಶಿವಪ್ರಸಾದ್




















