ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಲೋಕಾರ್ಪಣೆಗೊಂಡ ಮೂರು ಕವನ ಸಂಕಲನಗಳು

ಬಳ್ಳಾರಿ / ಕಂಪ್ಲಿ : ಹೊಸಪೇಟೆಯ ವಿಜಯನಗರ ಜಿಲ್ಲಾ ಸತ್ರ ನ್ಯಾಯಾಲಯ ಸಂಕೀರ್ಣದಲ್ಲಿ ಕಂಪ್ಲಿ-ಕೋಟೆಯ ವಕೀಲ, ಲೇಖಕ ಜಿ.ಪ್ರಕಾಶ್ ಅವರ ಮೂರು ಕವನ ಸಂಕಲನಗಳು ಲೋಕಾರ್ಪಣೆಗೊಂಡವು.
ಜಿಲ್ಲಾ ಸತ್ರ ನ್ಯಾಯಾಧೀಶ ಡಿ.ಪಿ.ಕುಮಾರಸ್ವಾಮಿ ಇವರು ‘ಬದುಕಿನ ಅನಂತದಲಿ’ (ಸಾಮಾಜಿಕ ಕವನ ಸಂಕಲನ), ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಎನ್.ಸುಬ್ರಹ್ಮಣ್ಯ ‘ಜೀವಝೇಂಕಾರ’ (ಪ್ರೇಮಗೀತೆ ಸಂಕಲನ), ಅಪರ ಹಿರಿಯ ಸಿವಿಲ್ ನ್ಯಾಯಾಧೀಶೆ ಕೆ.ರೂಪಾ ಇವರು ‘ಕಾವ್ಯಕಂಪನ’ (ಆಧುನಿಕ ವಚನ ಸಂಕಲನ) ಬಿಡುಗಡೆಗೊಳಿಸಿದರು. ಇದೇ ಸಂದರ್ಭದಲ್ಲಿ ಹೊಸಪೇಟೆ ನ್ಯಾಯಾಲಯದಲ್ಲಿ ಐದು ದಶಕ ವಕೀಲ ವೃತ್ತಿ ಸಲ್ಲಿಸಿದ್ದರಿಂದ ವಕೀಲ ಜಿ.ಪ್ರಕಾಶರನ್ನು ಸನ್ಮಾನಿಸಲಾಯಿತು.
ಪ್ರಧಾನ ಸಿವಿಲ್ ನ್ಯಾಯಾಧೀಶ ಪ್ರಶಾಂತ್ ನಾಗಲಾಪುರ, ಅಪರ ಸಿವಿಲ್ ನ್ಯಾಯಾಧೀಶೆ ಜಿ.ಚೈತ್ರಾ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಗುಜ್ಜಲ ನಾಗರಾಜ, ಉಪಾಧ್ಯಕ್ಷ ಎಚ್.ಎಸ್.ದಿವಾಕರ, ಪದಾಧಿಕಾರಿಗಳಾದ ಕೃಷ್ಣದೇವರಾಯಲು, ಎ.ಎನ್.ಭರತ, ಮಂಜುಶ್ರೀ ಸೇರಿ ಸಂಘದ ಸದಸ್ಯರು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!