
ಬಳ್ಳಾರಿ / ಕಂಪ್ಲಿ : ಒಬ್ಬ ಜವಾಬ್ದಾರಿಯುತ ಸದಸ್ಯರಾಗಿ ಸುಮ್ಮನೆ ಕೊಡದೆ ಪದವಿ ತಕ್ಕ ಹಾಗೇ ಕೆಲಸ ನಿರ್ವಹಿಸುವ ಪ್ರಧಾನ ಮಂತ್ರಿ 15 ಅಂಶಗಳ ಕಾರ್ಯಕ್ರಮದ ಸಮಿತಿ ಸದಸ್ಯ ಬಿ. ಜಾಫರ್ ಸಾಧಿಕ್ ರವರು ಇಂದು ಕಂಪ್ಲಿ ಪಟ್ಟಣದ 9ನೇ ವಾರ್ಡ್‌ನಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಉರ್ದು ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದರು.
ಶಾಲೆಯ ಮೂಲಭೂತ ಸೌಕರ್ಯಗಳ ಕೊರತೆಯನ್ನು ಗುರುತಿಸಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಶಾಲೆಯ ಸ್ಥಿತಿಗತಿಗಳ ಬಗ್ಗೆ ಶಿಕ್ಷಕರೊಂದಿಗೆ ಚರ್ಚಿಸಿದರು. ನಂತರ ಮಾತನಾಡಿ ಶಾಲೆಯಲ್ಲಿ ಪ್ರಮುಖವಾಗಿ ಕಿಟಕಿ ಮತ್ತು ಬಾಗಿಲುಗಳ ದುರಸ್ತಿ, ಪೈಪ್‌ಲೈನ್ ವ್ಯವಸ್ಥೆ, ಸುಣ್ಣ-ಬಣ್ಣ ಹಾಗೂ ಕಾಂಪೌಂಡ್ ಗೋಡೆಯ ಅವಶ್ಯಕತೆ ಇರುವುದು ಕಂಡುಬಂದಿದೆ.
ಈ ಎಲ್ಲಾ ಸಮಸ್ಯೆಗಳ ಕುರಿತು ಸಮಗ್ರ ವರದಿಯನ್ನು ಮಾನ್ಯ ಜಿಲ್ಲಾಧಿಕಾರಿಗಳ (DC ಬಳ್ಳಾರಿ) ಗಮನಕ್ಕೆ ತಂದು, ಶೀಘ್ರವಾಗಿ ಅನುದಾನ ಬಿಡುಗಡೆಗೊಳಿಸಿ ಶೈಕ್ಷಣಿಕ ಅಭಿವೃದ್ಧಿಗೆ ಒತ್ತು ನೀಡಲಾಗುವುದು. ಅಲ್ಪಸಂಖ್ಯಾತ ಸಮುದಾಯದ ಶಿಕ್ಷಣಕ್ಕೆ ಉತ್ತಮ ಪರಿಸರ ಕಲ್ಪಿಸುವುದು ನಮ್ಮ ಮೊದಲ ಆದ್ಯತೆಯಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಪದಾಧಿಕಾರಿಗಳು, ಶಿಕ್ಷಕರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ವರದಿ : ಜಿಲಾನಸಾಬ್ ಬಡಿಗೇರ್




















