ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಂಪ್ಲಿ ನೂತನ ಸೇತುವೆಗಾಗಿ ಮಣ್ಣಿನ ಪರೀಕ್ಷೆ (Soil Testing) ಪ್ರಕ್ರಿಯೆ ಶುರು

ಬಳ್ಳಾರಿ / ಕಂಪ್ಲಿ : ಬಳ್ಳಾರಿ ಜಿಲ್ಲೆ ಮತ್ತು ಕೊಪ್ಪಳ ಜಿಲ್ಲೆಯ ಗಂಗಾವತಿ ಹಾಗೂ ಕಂಪ್ಲಿ ನಡುವೆ ತುಂಗಭದ್ರಾ ನದಿಗೆ ಅಡ್ಡಲಾಗಿ ನಿರ್ಮಿಸಲು ಉದ್ದೇಶಿಸಿರುವ ನೂತನ ಸೇತುವೆಗಾಗಿ ಮಣ್ಣಿನ ಪರೀಕ್ಷೆ (Soil Testing) ಪ್ರಕ್ರಿಯೆಯು ಪ್ರಾರಂಭಿಸಲಾಗಿದೆ.

ಸೇತುವೆಯ ಅನಿವಾರ್ಯತೆ: ಈಗಿರುವ ಹಳೆಯ ಸೇತುವೆಯು ಸುಮಾರು 60 ವರ್ಷಗಳಷ್ಟು ಹಳೆಯದಾಗಿದ್ದು, ತುಂಗಭದ್ರಾ ಜಲಾಶಯದಿಂದ 1 ಲಕ್ಷ ಕ್ಯೂಸೆಕ್‌ಗಿಂತ ಹೆಚ್ಚಿನ ನೀರು ಬಿಟ್ಟಾಗಲೆಲ್ಲ ಮುಳುಗಡೆಯಾಗುತ್ತದೆ. ಇದರಿಂದಾಗಿ ಈ ಭಾಗದ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಳ್ಳುತ್ತಿತ್ತು.

ಯೋಜನೆಯ ವೆಚ್ಚ: ನೂತನ ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಅಂದಾಜು ₹110 ಕೋಟಿ ವೆಚ್ಚದ ಪ್ರಸ್ತಾವನೆಯನ್ನು ಲೋಕೋಪಯೋಗಿ ಇಲಾಖೆಗೆ ಸಲ್ಲಿಸಲಾಗಿದೆ.

ನೂತನ ಸೇತುವೆಗೆ ನಿರ್ಮಾಣಕ್ಕೆ ಬೇಕಾದ ಡಿಪಿಆರ್ (DPR) ಸಿದ್ಧಪಡಿಸುವ ಪ್ರಕ್ರಿಯೆಯ ಭಾಗವಾಗಿ ಮಣ್ಣಿನ ಪರೀಕ್ಷೆ ಮತ್ತು ಸರ್ವೆ ಕಾರ್ಯಗಳನ್ನು ನಡೆಸಲು ಪ್ರಾರಂಭಿಸಲಾಗಿದೆ.

ನಿರ್ಮಾಣದ ಉದ್ದೇಶ: ಹೊಸ ಸೇತುವೆಯನ್ನು ಹಳೆಯದಕ್ಕಿಂತ ಎತ್ತರದಲ್ಲಿ ಸುಮಾರು 42 ಅಡಿ ಎತ್ತರ ನಿರ್ಮಿಸಲು ಯೋಜಿಸಲಾಗಿದೆ, ಇದರಿಂದ ಮಳೆಗಾಲದಲ್ಲಿ ಸಂಚಾರ ಸ್ಥಗಿತಗೊಳ್ಳುವುದನ್ನು ತಪ್ಪಿಸಬಹುದು.

ಟೆಂಡರ್ ಪ್ರಕ್ರಿಯೆ: ಈ ಯೋಜನೆಯ ಟೆಂಡರ್ ಪ್ರಕ್ರಿಯೆಗಳು ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗುವ ನಿರೀಕ್ಷೆಯಿದೆ.
ಸ್ಥಳೀಯ ಶಾಸಕರಾದ ಜೆ. ಎನ್. ಗಣೇಶರವರು ಈ ಕಾಮಗಾರಿಯನ್ನು ಆದ್ಯತೆಯ ಮೇಲೆ ಕೈಗೆತ್ತಿಕೊಳ್ಳಲು ಸರ್ಕಾರದ ಮೇಲಿಂದ ಮೇಲೆ ಒತ್ತಡದಿಂದ ಕ್ಷೇತ್ರದ ಜನರ ಬಹುದಿನಗಳ ಕನಸು ಈಡೇರಿದಂತಾಗಿದೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!