ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ಜರುಗಿದ ಸಂಗಮೇಶ್ವರ ರಥೋತ್ಸವ

ಬಳ್ಳಾರಿ / ಕಂಪ್ಲಿ: ತಾಲೂಕಿನ ಸಣಾಪುರ ಗ್ರಾ. ಪಂ. ವ್ಯಾಪ್ತಿಯ ಇಟಗಿ ಗ್ರಾಮದ ಸಂಗಮೇಶ್ವರ ರಥೋತ್ಸವ ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ಸೋಮವಾರ ಸಂಜೆ ಜರುಗಿತು.
ಇಲ್ಲಿನ ದೇವಸ್ಥಾನ ಬಳಿಯಲ್ಲಿ ಆರಂಭಗೊಂಡು ಮುಖ್ಯರಸ್ತೆ ಮೂಲಕ ಎದುರು ಬಸವಣ್ಣ ದೇವಸ್ಥಾನವರೆಗೆ ತೆರಳಿ, ಪುನಃ ದೇವಸ್ಥಾನ ಬಳಿ ಸಂಪನ್ನಗೊಂಡಿತು. ಭಕ್ತರು ರಥೋತ್ಸವಕ್ಕೆ ಉತ್ತುತ್ತಿ, ಬಿಲ್ವಪತ್ರಿ, ಹೂವು ಎಸೆಯುವ ಮೂಲಕ ಭಕ್ತಿ ಮೆರೆದರು. ತಾಷಾರಾಂಡೋಲ್, ಮಂಗಳವಾದ್ಯ ಸೇರಿದಂತೆ ವಿವಿಧ ಕಲಾ ಪ್ರಕಾರಗಳು ಪಾಲ್ಗೊಂಡಿದ್ದವು. ರಥೋತ್ಸವ ಎಳೆಯುವ ಮುಂಚಿತವಾಗಿ ರಥಕ್ಕೆ ಭಕ್ತರು, ಸಮಾಜದವರು ಬೃಹತ್ ಹೂವಿನ ಹಾರಗಳನ್ನು ಮೆರವಣಿಗೆ ಮೂಲಕ ತಂದು, ಹಾಕಲಾಯಿತು. ಯುವಕರು ತಮಟೆ ನಾದಕ್ಕೆ ಹೆಜ್ಜೆ ಹಾಕಿದರು. ಇಲ್ಲಿನ ದೇವಸ್ಥಾನದಲ್ಲಿ ಬೆಳಿಗ್ಗೆಯಿಂದ ವಿಶೇಷ ಪೂಜೆ, ಅಭಿಷೇಕ, ಮಂಗಳಾರತಿ, ಪುಷ್ಪಾರ್ಚನೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮ ಶ್ರದ್ದೆಯಿಂದ ಜರುಗಿದವು. ಭಕ್ತರು ಕಾಯಿ, ಕರ್ಪುರ ಅರ್ಪಿಸಿ, ಪುನೀತರಾದರು.
ಈ ಸಂದರ್ಭದಲ್ಲಿ ಮುಖಂಡರಾದ ಪಂಪಾಪತಿಗೌಡ, ಭೀಮನಗೌಡ, ಶರಣಬಸವ, ಬಸಲಿಂಗಪ್ಪ, ರಾಯನಗೌಡ, ಇಟಗಿ ಬಸವರಾಜಗೌಡ, ಶೇಖರಪ್ಪ, ರವೀಂದ್ರಗೌಡ ಸೇರಿದಂತೆ ಇಟಗಿ ಮತ್ತು ಸುತ್ತಲಿನ ಗ್ರಾಮಗಳ ಸದ್ಭಕ್ತರು ಪಾಲ್ಗೊಂಡಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!