
ವಿಜಯನಗರ / ಕೂಡ್ಲಿಗಿ : ಪ್ರವಾಸಕ್ಕೆಂದು ಕೇರಳದಿಂದ ಹಂಪಿಗೆ ಬರ್ತಿದ್ದ ಟೂರಿಸ್ಟ್ ಬಸ್ ಪಲ್ಟಿಯಾಗಿ ಅನಾಹುತ ಸಂಭವಿಸಿದೆ. ದುರಂತ ಘಟನೆ ನಡೆದಿದೆ. ಕೇರಳದ ತ್ರಿಶೂರ್ ಜಿಲ್ಲೆಯ ಶ್ರೀಕೃಷ್ಣ ಕಾಲೇಜ್ ನ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಹಂಪಿಗೆ ಪ್ರವಾಸಕ್ಕೆ ಬಂದಿದ್ದ ಶಿಕ್ಷಕರು ಸೇರಿದಂತೆ 30 ವಿದ್ಯಾರ್ಥಿಗಳಿದ್ದ ಟೂರಿಸ್ಟ್ ಮಿನಿ ಬಸ್ ಪಲ್ಟಿಯಾಗಿ ಅಪಘಾತಕ್ಕೀಡಾಗಿದೆ. ಈ ಅಪಘಾತದಲ್ಲಿ 7 ವಿದ್ಯಾರ್ಥಿಗಳಾದ ವನುಕೃಷ್ಣ, ಅನುಗ್ರಹ, ಆದಿತ್ಯ, ಅಜಯ್ ರಾಜ, ಅದುಲ್ ಕೃಷ್ಣ , ನುಹಾದ್ ಸಣ್ಣಪುಟ್ಟ ಗಾಯಗಳಾಗಿದ್ದರೆ, ಶಿಕ್ಷಕಿ ಡಾ. ರಶ್ಮಿ ಕಾಲಿಗೆ ಗಂಭೀರ ಗಾಯವಾಗಿದೆ. ಘಟನೆ ಕೂಡ್ಲಿಗಿ ತಾಲೂಕಿನ ಅಮ್ಮನ ಕೇರಿ ಕ್ರಾಸ್ ಬಳಿ ನಡೆದಿದೆ.
ಮಿನಿ ಬಸ್ನಲ್ಲಿ ಕೇರಳದಿಂದ ಬಂದ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಇದ್ದರು. ಅವರು ಹಂಪಿಯ ಐತಿಹಾಸಿಕ ಸ್ಥಳಗಳನ್ನು ನೋಡಲು ಬಂದಿದ್ದರು. ಆದರೆ ಈ ವೇಳೆ ಈ ಅಪಘಾತ ಸಂಭವಿಸಿದ್ದು, ಮಕ್ಕಳ ಪೋಷಕರು ಆತಂಕಗೊಂಡಿದ್ದಾರೆ.
ಟೂರಿಸ್ಟ್ ಬಸ್ ಪಲ್ಟಿ :
ವಿದ್ಯಾರ್ಥಿಗಳಿಗೆ ಗಾಯ
ಇತ್ತೀಚಿಗೆ ಹಂಪಿ ಪ್ರವಾಸಕ್ಕೆ ಬರುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂತಹ ಟೂರಿಸ್ಟ್ ವಾಹನಗಳು ಸಾಮಾನ್ಯವಾಗಿವೆ. ಆದರೆ ಈ ಬಾರಿ ಚಾಲಕನ ನಿಯಂತ್ರಣ ತಪ್ಪಿ ಬಸ್ ರಸ್ತೆಯ ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ರಸ್ತೆಯಲ್ಲಿ ಏಕಾಏಕಿ ನಿಯಂತ್ರಣ ತಪ್ಪಿದ್ದು ಮುಖ್ಯ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸುತ್ತಿದ್ದಾರೆ. ಓವರ್ ಸ್ಪೀಡ್ ಅಥವಾ ಚಾಲಕನ ನಿರ್ಲಕ್ಷ್ಯವೂ ಕಾರಣವಾಗಿರಬಹುದು.
ವರದಿ : ಜಿಲಾನಸಾಬ್ ಬಡಿಗೇರ್



















