ಬೆಂಗಳೂರು :ರಾಜ್ಯಸಭೆಯಲ್ಲಿ ಬುಧವಾರ ಫೆಬ್ರುವರಿ 4ರಂದು ನಡೆದ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನ ನಿರ್ಣಯ ಚರ್ಚೆಯಲ್ಲಿ ಭಾಗವಹಿಸಿ ಗದ್ಗದಿತರಾದ ಮಾಜಿ ಪ್ರಧಾನಿ ದೇವೇಗೌಡರು ರಾಜ್ಯಸಭೆ ಸದನದಲ್ಲಿ ಪಾಲ್ಗೊಂಡು ಮಾತನಾಡಿ ರಾಜ್ಯ ಎದುರಿಸುತ್ತಿರುವ ನೀರಾವರಿ ಬಿಕ್ಕಟ್ಟಿನ ಬಗ್ಗೆ ಪ್ರಸ್ತಾಪಿಸಿದರು ಕರ್ನಾಟಕವನ್ನು ರಕ್ಷಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು ಎಚ್ ಡಿ ದೇವೇಗೌಡ ಮಾತಿಗೆ ಇಡೀ ಸದನ ಮೌನವಾಗಿತ್ತು ರಾಜ್ಯಸಭೆಯ ನೀರಾವರಿ ಸಮಸ್ಯೆಗಳ ಬಗ್ಗೆ ಮಾತನಾಡುತ್ತಾ ನಮ್ಮ ರಾಜ್ಯದಲ್ಲಿ ಅನೇಕ ನೀರಾವರಿ ಯೋಜನೆಗಳು ಮುಂದಕ್ಕೆ ಹೋಗಿದೆ ನೆನೆಗುದಿಗೆ ಬಿದ್ದಿದೆ ಈ ಎಲ್ಲಾ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುಮೋದನೆ ಬೇಕಿದೆ ಆ ಮೂಲಕ ಕರ್ನಾಟಕ ಎದುರಿಸುತ್ತಿರುವ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಬೇಕು ಎಂದು ದೇವೇಗೌಡರು ಕೇಂದ್ರ ಸರ್ಕಾರಕ್ಕೆ ಕೈಮುಗಿದು ಮನವಿ ಮಾಡಿದರು.
ವರದಿ ಬಸವರಾಜ ಎಸ್.ಎನ್



















