ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶಿಕ್ಷಕ ಮುತ್ತು ವಡ್ಡರ ರಾಯಚೂರು ಜಿಲ್ಲಾ ಉತ್ಸವದ ಕವಿಗೋಷ್ಠಿಗೆ ಆಯ್ಕೆ

ರಾಯಚೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ರಾಯಚೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎಡದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ -2026 ರ ಯುವ ಕವಿಗೋಷ್ಠಿಗೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಹಿರೇಮಾಗಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಿರೇಮಳಗಾವಿಯ ಗಣಿತ ಶಿಕ್ಷಕರಾದ ಶ್ರೀ ಮುತ್ತು ವಡ್ಡರ ಆಯ್ಕೆಯಾಗಿದ್ದಾರೆ.
ವೃತ್ತಿಯಲ್ಲಿ ಗಣಿತ ಶಿಕ್ಷಕರಾಗಿರುವ ಇವರು ಪ್ರವೃತ್ತಿಯಲ್ಲಿ ಕಥೆ ಕವನ ಹಾಗೂ ನಾಡಿನ ಹಲವಾರು ಪತ್ರಿಕೆಗಳಿಗೆ ಲೇಖನಗಳನ್ನು ಬರೆಯುವ ಹವ್ಯಾಸ ಹೊಂದಿದ್ದಾರೆ. ಇತ್ತೀಚೆಗೆ ಇವರ ಸನ್ಮಾರ್ಗದ ದುಂಬಿ ಎಂಬ ಸ್ಫೂರ್ತಿದಾಯಕ ಕವನ ಸಂಕಲನ ಬಿಡುಗಡೆಯಾಗಿ ಓದುಗರ ಮೆಚ್ಚುಗೆ ಪಡೆದಿದೆ.
ಇದೇ ತಿಂಗಳ 7ನೇ ತಾರೀಖಿನಂದು ಮಹಿಳಾ ಸಮಾಜ ಆವರಣ, ರಾಯಚೂರು ಇಲ್ಲಿ ನಡೆಯುವ ಯುವ ಕವಿಗೋಷ್ಠಿಯಲ್ಲಿ ತಮ್ಮ ಸ್ವರಚಿತ ಕವನ ವಾಚನ ಮಾಡಲಿದ್ದಾರೆ. ರಾಯಚೂರು ಜಿಲ್ಲಾ ಉತ್ಸವದ ಯುವ ಕವಿಗೋಷ್ಠಿಗೆ ಆಯ್ಕೆಯಾದ ಶ್ರೀ ಮುತ್ತು ವಡ್ಡರ ಸಂತಸ ವ್ಯಕ್ತಪಡಿಸಿದ್ದಾರೆ. ತಮ್ಮನ್ನು ಯುವ ಕವಿಗೋಷ್ಠಿಗೆ ಆಯ್ಕೆ ಮಾಡಿದ ಸರ್ವ ಆಡಳಿತ ಮಂಡಳಿಯವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

  • ಕರುನಾಡ ಕಂದ ಪತ್ರಿಕೆ.
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!