ಹುಣಸೂರು ಸಮೀಪದ ಕಲ್ಕುಣಿಕೆ ಗ್ರಾಮದವರಾದ ಶ್ರೀನಿವಾಸನ್ ಸರಳ ನಡೆ, ನುಡಿ, ಪ್ರಾಮಾಣಿಕತೆ ಮತ್ತು ವೃತ್ತಿ ಬದ್ಧತೆಯಿಂದ ಜನಾನುರಾಗಿಯಾಗಿದ್ದರು. ಸುದೀರ್ಘಕಾಲ ಮಾಧ್ಯಮರಂಗದಲ್ಲಿ ಸೇವೆ ಸಲ್ಲಿಸಿ ಇತ್ತೀಚೆಗೆ ವಿಶ್ರಾಂತ ಜೀವನ ನಡೆಸುತ್ತಿದ್ದರು. ಹಲವಾರು ಪತ್ರಕರ್ತರನ್ನು ರೂಪಿಸಿದ ಹಿರಿಮೆ ಅವರದ್ದಾಗಿತ್ತು.
ಮೈಸೂರಿನ ನಾರಾಯಣ ಶಾಸ್ತ್ರಿ ರಸ್ತೆಯ ಅನಾಥಾಲಯದಲ್ಲಿ ನಾಲ್ಕು ದಶಕಗಳ ಕಾಲ ಬಾಡಿಗೆ ಕೋಣೆಯಲ್ಲಿ ವಾಸಿಸುತ್ತಾ, ವೃತ್ತಿಜೀವನ ಸಾಗಿಸಿದ್ದು ಅವರು ಪ್ರಾಮಾಣಿಕತೆ ಮತ್ತು ದಕ್ಷತೆಗೆ ಹಿಡಿದ ಕನ್ನಡಿಯಂತಿದ್ದರು.
ಆತ್ಮೀಯರಾಗಿದ್ದ ಶ್ರೀನಿವಾಸನ್ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ.



















