ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರೈನ್‌ಬೋ ಗ್ಲೋಬಲ್ ಶಾಲೆ ಹಾಗೂ ಪಿ. ಯು. ಕಾಲೇಜ್ ನ ಏಳು ಬಣ್ಣಗಳ ಉತ್ಸವ, ವಾರ್ಷಿಕೋತ್ಸವ ಕಾರ್ಯಕ್ರಮ

ಬಳ್ಳಾರಿ / ಕಂಪ್ಲಿ : ಮಕ್ಕಳಿಗೆ ಉನ್ನತ ವಿದ್ಯಾಭ್ಯಾಸ ನೀಡುವ ಜತೆಗೆ ಸಂಸ್ಕೃತಿ, ಸಂಸ್ಕಾರ ಕಲಿಸಿದಲ್ಲಿ ಅವರ ಭವಿಷ್ಯದ ಜೀವನ ಉತ್ತಮವಾಗಿರುತ್ತದೆ ಎಂದು ಶಾಸಕ ಜೆ.ಎನ್.ಗಣೇಶ ಹೇಳಿದರು.


ಪಟ್ಟಣದ ಸಣಾಪುರ ರಸ್ತೆಯಲ್ಲಿರುವ ಕೆಸಿಬಿ ಎಜ್ಯುಕೇಷನ್ ಟ್ರಸ್ಟ್ ನ ರೈನ್‌ಬೋ ಗ್ಲೋಬಲ್ ಸ್ಕೂಲ್ ಮತ್ತು ಪಿಯು ಕಾಲೇಜು ನೇತೃತ್ವದಲ್ಲಿ ಶನಿವಾರ ಸಂಜೆ ಆಯೋಜಿಸಿದ್ದ ಏಳು ಬಣ್ಣಗಳ ಉತ್ಸವ ಹಾಗೂ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿ, ಸ್ಪರ್ಧಾ ಜಗತ್ತಿನಲ್ಲಿ ಪರಿಶ್ರಮದೊಂದಿಗೆ ಮುನ್ನೆಡೆದರೆ ಗುರಿ ಮುಟ್ಟಲು ಸಾಧ್ಯ. ಮಕ್ಕಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿದರೆ, ನಾಡಿನಲ್ಲಿ ಉತ್ತಮ ಪ್ರಜೆಗಳಾಗಿ ಹೊರ ಹೊಮ್ಮಲು ಸಾಧ್ಯ ಎಂದರು.
ಖಾಸಗಿ ಶಾಲೆಗಳ ಜಿಲ್ಲಾಧ್ಯಕ್ಷ ಮರಿಸ್ವಾಮಿರೆಡ್ಡಿ ಮಾತನಾಡಿ, ಆಧುನಿಕ ಯುಗದಲ್ಲಿ ಉನ್ನತ ವ್ಯಾಸಂಗ ಮಾಡಿದ ಮಕ್ಕಳು ಒಳ್ಳೆಯ ಭವಿಷ್ಯ ರೂಪಿಸಿಕೊಳ್ಳಲಿದ್ದಾರೆ. ಉತ್ತಮ ವಿದ್ಯಾಭ್ಯಾಸದ ಜತೆಗೆ ನಮ್ಮ ಸಂಸ್ಕೃತಿ, ಮೌಲ್ಯಯುತ ಶಿಕ್ಷಣವನ್ನು ಪೋಷಕರು ನೀಡಬೇಕು. ಕಂಪ್ಲಿ ಪಟ್ಟಣ ಹಾಗೂ ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಕೆ.ಎಸ್.ಚಾಂದ್‌ಭಾಷಾ ಇವರು ಇಲ್ಲಿ ರೈಬೋ ಶಾಲೆ ಪ್ರಾರಂಭಿಸಿದ್ದಾರೆ. ಇಲ್ಲಿನ ಶಾಲೆಯಲ್ಲಿ ಹೆಚ್ಚು ಹೆಚ್ಚಕ್ಕೂ ಪ್ರವೇಶಾತಿ ಪಡೆಯಲು ಪೋಷಕರು ಸಹಕರಿಸಬೇಕು. ಮಗುವಿನ ಶಿಕ್ಷಣ ಮತ್ತು ಮೌಲ್ಯ ವೃದ್ಧಿಯಲ್ಲಿ ಪೋಷಕರ ಪಾತ್ರವೂ ಮುಖ್ಯವಾಗಿದೆ ಎಂದರು.
ಕೆಸಿಬಿ ಎಜ್ಯುಕೇಷನ್ ಟ್ರಸ್ಟ್ ಕಾರ್ಯದರ್ಶಿ ಕೆ.ಎಸ್.ಚಾಂದ್‌ಭಾಷಾ ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡಿ, ಒಂದು ಶಾಲೆ ಎಂದರೆ ಅಲ್ಲಿ ಮಕ್ಕಳ ಸುರಕ್ಷತೆ ಮತ್ತು ಸರ್ವತೋಮುಖ ಪ್ರಗತಿ ಬಹಳ ಮುಖ್ಯ. ಇವೆರಡೂ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಸುರಕ್ಷತೆಯೊಂದಿಗೆ ಪ್ರಗತಿ ಹಾಗೂ ಪೋಷಕರ ಸಕ್ರಿಯ ಪಾಲ್ಗೊಳ್ಳುವಿಕೆಗೆ ಹೆಚ್ಚಿನ ಆಧ್ಯತೆ ನೀಡುವ ಜೊತೆಗೆ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ರೈನ್‌ಬೋ ಸಂಸ್ಥೆಯು ನೀಡುತ್ತಿದೆ. ಒಂದು ಶಾಲೆ ಆಶಾಕಿರಣವಾಗಿ ಹೊರಹೊಮ್ಮುಲು ಶಿಕ್ಷಕರ, ಪೋಷಕರು, ಶಿಕ್ಷಣ ಪ್ರೇಮಿಗಳ ಸಹಕಾರ ಅತಿ ಅವಶ್ಯಕವಾಗಿದೆ. ಕೆಸಿಬಿ ಎಜ್ಯುಕೇಷನ್ ಟ್ರಸ್ಟ್ ರೈನ್‌ಬೋ ಶಾಲೆಯ ಮಕ್ಕಳ ಶಿಕ್ಷಣದ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಹೆಚ್ಚಿನ ಆಧ್ಯತೆ ನೀಡುತ್ತಾ ಬಂದಿದೆ. ಇದರಿಂದ ಮಕ್ಕಳು ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚಿನ ಅಂಕಗಳೊಂದಿಗೆ ಸಾಧನೆ ಮಾಡುತ್ತಿದ್ದಾರೆ. ಶಾಲೆಯು ಇನ್ನಷ್ಟು ಎತ್ತರಕ್ಕೆ ಬೆಳೆಯಲು ಪ್ರತಿಯೊಬ್ಬರು ಸಹಕರಿಸಬೇಕು ಎಂದರು.
ಪ್ರಾಂಶುಪಾಲ ಅಜೀಜ್ ಉಲ್ ಹಕ್ ಡಿ.ಕೆ ಇವರು ಪ್ರಾಸ್ತಾವಿಕವಾಗಿ ಮಾತನಾಡಿ, ಶಾಲೆಯ ಪ್ರಗತಿ ಹಾಗೂ ಶಿಕ್ಷಣ ಬಗ್ಗೆ ವರದಿ ಮಂಡಿಸಿದರು.
ಇಲ್ಲಿನ ಸಮಾರಂಭವನ್ನು ಗಣ್ಯರು ಉದ್ಘಾಟಿಸಿದರು. ನಂತರ ಪ್ರತಿಭಾವಂತ ಮಕ್ಕಳಿಗೆ ಹಾಗೂ ಸಾಧಕರಿಗೆ ಮತ್ತು ಗಣ್ಯರಿಗೆ ಸನ್ಮಾನಿಸಿ ಗೌರವಿಸಲಾಯಿತು. ಚಿತ್ರಕಲಾವಿದ ಶಿವುಕುಮಾರ ಇವರು ಸಂಸ್ಥೆಯ ಕಾರ್ಯದರ್ಶಿ ಚಾಂದ್‌ಭಾಷಾ ಅವರ ಭಾವಚಿತ್ರವನ್ನು ಅದ್ಭುತವಾಗಿ ಬಿಡಿಸುವ ಮೂಲಕ ಎಲ್ಲರ ಗಮನ ಸೆಳೆದರು. ತದ ನಂತರ ಮಕ್ಕಳ ಭರತನಾಟ್ಯ, ನೃತ್ಯ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳು ವರ್ಣರಂಜಿತವಾಗಿ ಮೂಡಿ ಬಂದವು.
ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಶಾರುಖ್ ಕೆ.ಎಸ್, ಖಜಾಂಚಿ ಕೆ.ಎಸ್.ಮೆಹಬೂಬ್ ಭಾಷಾ, ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಪಿ.ಮೂಕಯ್ಯಸ್ವಾಮಿ, ಎಪಿಎಂಸಿ ಅಧ್ಯಕ್ಷ ಹಬೀಬ್ ರೆಹಮಾನ್, ಜೆಸ್ಕಾಂ ಎಇಇ ಶ್ರೀನಿವಾಸ, ಮಾಜಿ ಪುರಸಭೆ ಅಧ್ಯಕ್ಷ ಭಟ್ಟ ಪ್ರಸಾದ್, ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಉಸ್ಮಾನ್, ಮುಖಂಡರಾದ ಬಿ.ನಾರಾಯಣಪ್ಪ, ಪಿ.ನಾಗೇಶ್ವರರಾವ್, ಬಿ.ಸಿದ್ದಪ್ಪ, ಕೋನಂಕಿ ಬಾಲಕೃಷ್ಣ, ರಂಜಾನ್, ಸೈಯದ್ ಉಸ್ಮಾನ್, ಶಿವರಾಜ, ಜಾಫರ್, ಎಂ.ಸುಧೀರ್, ಹೊನ್ನಳ್ಳಿ ಗಂಗಾಧರ, ಮಣ್ಣೂರು ಕರಿಯಪ್ಪ, ಶ್ರೀನಿವಾಸ, ಗುರುರಾಜ, ಕೊಟ್ರೇಶ, ಮೆಟ್ರಿ ಕುಮಾರ, ಬಸವರಾಜ ಸೇರಿದಂತೆ ಪೋಷಕರು, ಶಿಕ್ಷಕ ವೃಂದದವರು, ಮಕ್ಕಳು ಪಾಲ್ಗೊಂಡಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!